ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ,ಏ.6:
ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ‌ ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿಯಲ್ಲಿ 750 ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ನೀಡಲಾಗುತ್ತಿದೆ.
ಅದೇ ಮಾದರಿಯಲ್ಲಿ‌ ಮುದ್ದೇಬಿಹಾಳ ತಾಲೂಕಿನ ಯರಝರಿ ಹಾಗೂ ಸಿಂದಗಿ‌ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ತಲಾ ಒಂದೊಂದು‌ ಗ್ರಾಮ್ ಒನ್ ಸೇವಾ ಕೇಂದ್ರ ಆರಂಭಿಸಲು ಆಸಕ್ತರು ಏ.15 ರೊಳಗಾಗಿ ಅರ್ಜಿ‌ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು https://sevasindhuservices.karnataka.gov.in ಮೂಲಕ ಸಲ್ಲಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ಕೇಳಿರುವ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this