ಸಪ್ತಸಾಗರ ವಾರ್ತೆ, ವಿಜಯಪುರ, ಏ. 8: ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ವತಿಯಿಂದ ಏಪ್ರಿಲ್ 11ರಂದು ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರರ್ಣ ಅನುಸಂಧಾನ-11 ನಡೆಯಲಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ಬಿ. ಎಲ್. ಡಿ. ಇ ಸಂಸ್ಥೆಯ ವಚನಪಿತಾಮಹ ಡಾ.ಪಿ. ಜಿ. ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ
ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರು ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಬಿ. ಎಲ್. ಡಿ. ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ,ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಸಮಕುಲಾಧಿಪತಿ ಡಾ. ವೈ.ಎಂ. ಜಯರಾಜ, ರಜಿಸ್ಟ್ರಾರ್ ಡಾ. ರಾಘವೇಂದ್ರ ವಿ. ಕುಲಕರ್ಣಿ, ನವದೆಹಲಿಯ ಬೋರ್ಡ ಆಫ್ ಆಯುರ್ವೇದ ಎನ್. ಸಿ. ಐ. ಎಸ್. ಎಂ ಅಧ್ಯಕ್ಷ, ಡಾ. ಅಲ್ಲಮಪ್ರಭು ಗುಡ್ಡಾ, ಮಾಜಿ ಅಧ್ಯಕ್ಷ ಡಾ. ಬಿ. ಶ್ರೀನಿವಾಸ ಪ್ರಸಾದ ಮುಂತಾದವರು ಉಪಸ್ಥಿತರಿರಲಿದ್ದಾರೆ. ರಾಜ್ಯದಿಂದ ನಾನಾ ಭಾಗಗಳಿಂದ ಅನುಭವಿ ಉಪನ್ಯಾಸಕರು ಸಂಶೋಧನ ಕುರಿತು ಪ್ರಬಂಧ ಮಂಡಿಸಲಿದ್ದಾರೆ.
ಈ ವಿಚಾರ ಸಂಕಿರಣದಲ್ಲಿ ರಾಜ್ಯದ ನಾನಾ ಭಾಗಗಳಿಂದ ಸುಮಾರು 400ಕ್ಕೂ ಹೆಚ್ಚು ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


