ಎಲ್‌ಕೆಜಿ-ಯುಕೆಜಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಏ.9 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗಾಗಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
2026-27ನೇ ಶೈಕ್ಷಣಿಕ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಮೇ‌8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತ ವಿದ್ಯಾರ್ಥಿಗಳ ಪಾಲಕರು-ಪೋಷಕರು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್‌ https://erp.dom.karnataka.gov.in/lkg ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ, ಮೌಲಾನಾ ಆಜಾದ್ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ದೂರವಾಣಿ ಸಂಖ್ಯೆ:08352-295523, ವಿಜಯಪುರ ತಾಲೂಕು ವಿಸ್ತರಣಾಧಿಕಾರಿಗಳು ಉಪವಿಭಾಗ ಮೊ. ಸಂಖ್ಯೆ: 8970704986, ತಾಲೂಕು ವಿಸ್ತರಣಾಧಿಕಾರಿಗಳು ಉಪಯುವಾಗ ಇಂಡಿ ಮೊ. ಸಂಖ್ಯೆ 99002297780, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ವಿಜಯಪುರ ಮೊ. ಸಂಖ್ಯೆ 81237110766, ಬಸವನ ಬಾಗೇವಾಡಿ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ. ಸಂಖ್ಯೆ 9972340721,

ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ. ಸಂಖ್ಯೆ 8722445552, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಇಂಡಿ ಮೊ. ಸಂಖ್ಯೆ 9900109759, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಸಿಂದಗಿ ಮೊ. ಸಂಖ್ಯೆ9035558609 ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

Share this