ಸಪ್ತಸಾಗರ ವಾರ್ತೆ,ವಿಜಯಪುರ,ಏ.10: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಏಪ್ರಿಲ್ 14ರ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬೆಳಿಗ್ಗೆ 10 ಗಂಟೆಗೆ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಕಾರ್ಯಕ್ರಮಕ್ಕೆ ಉದ್ಘಾಟಿಸಲಿದ್ದಾರೆ.
ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ–1 ಹಾಗೂ ಶಾಸಕ ಪ್ರಕಾಶ ಬಿ. ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್. ನಾಡಗೌಡ, ಸಂಸದ ರಮೇಶ ಜಗಜಿಣಗಿ ಹಾಗೂ ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಜಯಂತಿ ಕಾರ್ಯಕ್ರಮದಂದು ಎಲ್ಲ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
Editor
Rudrappa B Asangi
Editor
Managing Editor
Chetan Asangi
Managing Editor


