ಗ್ಯಾಲರಿ

ಹಿರಿಯ ಪತ್ರಕರ್ತ ರುದ್ರಪ್ಪ ಆಸಂಗಿ ಅವರು ಕರ್ನಾಟಕದ ನಾಡು ನುಡಿಗೆ ಸಲ್ಲಿಸಿರುವ ಅನುಪಮ ಸೇವೆಯನ್ನು ಸ್ಮರಿಸಿ ಕರ್ನಾಟಕ ಸರ್ಕಾರವು 2024ನೇ ಸಾಲಿನಲ್ಲಿ ಕರ್ನಾಟಕ ಸಂಭ್ರಮ 50 ನಿಮಿತ್ಯ ರಾಜ್ಯದ ಮುಖ್ಯಮಂತ್ರಿ ಶ್ರೀಮಾನ್ಯ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದ ವೇದಿಕೆಯಲ್ಲಿ ರಾಜ್ಯಮಟ್ಟದ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.

ಪತ್ರಿಕಾ ರಂಗದಲ್ಲಿ ರುದ್ರಪ್ಪ ಆಸಂಗಿ ಗಣನೀಯ ಸಾಧನೆ ಮಾಡಿದ್ದನ್ನು ಪರಿಗಣಿಸಿ ವಿಜಯಪುರದ ಸಿದ್ದೇಶ್ವರ ಸಂಸ್ಥೆಯವರು ಸಿದ್ದೇಶ್ವರ ರತ್ನ ಪ್ರಶಸ್ತಿ ನೀಡಿ ಗೌರವಿಸಿರುವುದು.

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಹುಟ್ಟು ಹಬ್ಬದ ಸಂದರ್ಭದಲ್ಲಿ ಪತ್ರಿಕಾ ರಂಗದಲ್ಲಿ ಗಣನೀಯ ಸಾಧನೆ ಮಾಡಿದ ಪತ್ರಕರ್ತರ ಸನ್ಮಾನ ಸಮಾರಂಭದಲ್ಲಿ ರುದ್ರಪ್ಪ ಆಸಂಗಿ ಸನ್ಮಾನಿತಗೊಂಡಿರುವುದು

ಕರ್ನಾಟಕ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಮುದ್ದೇಬಿಹಾಳದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸಾಧನೆ ಸಲ್ಲಿಸಿದ್ದನ್ನು ಪರಿಗಣಿಸಿ ಮಾಧ್ಯಮ ರತ್ನ ಪ್ರಶಸ್ತಿ ಪ್ರದಾನ ಮಾಡಿರುವುದು.

ವಿಜಯಪುರ ಕನ್ನಡ ಪುಸ್ತಕ ಪರಿಷತ್ತು ಪತ್ರಿಕಾ ರಂಗದಲ್ಲಿ ಗಣನೀಯ ಸಾಧನೆ ಮಾಡಿದ ರುದ್ರಪ್ಪ ಆಸಂಗಿಯವರಿಗೆ ಮಹೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ಹಿರಿಯ ಪತ್ರಕರ್ತ ರುದ್ರಪ್ಪ ಆಸಂಗಿ ಅವರು ಪತ್ರಿಕಾ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿದ್ದನ್ನು ಪರಿಗಣಿಸಿ ವಿಜಯಪುರ ಭಾರತ ಯುವ ವೇದಿಕೆ ಚಾರಿಟೇಬಲ್ ಫೌಂಡೇಶನ್ ವತಿಯಿಂದ 2020ರಲ್ಲಿ ಜಿಲ್ಲಾ ಸದ್ಭೂಷಣ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.