ಏ.21ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 17ನೇ ವಾರ್ಷಿಕ ಘಟಿಕೋತ್ಸವ

ಸಪ್ತಸಾಗರ ವಾರ್ತೆ,ವಿಜಯಪುರ,ಏ.16: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕುಲಪತಿಗಳು,ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ತಿನ ಸಹಯೋಗದಲ್ಲಿ ಏ.21ರ ಬೆಳಿಗ್ಗೆ 11:30 ಗಂಟೆಗೆ ನಗರ ಹೊರವಲಯದಲ್ಲಿರುವ ವಿಶ್ವವಿದ್ಯಾನಿಲಯದ ಜ್ಞಾನಶಕ್ತಿ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ.
ಕನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಗೌರವಾನ್ವಿತ ಥಾವರ್ ಚಂದ್ ಗೆಹ್ಲೋಟ್ ಅವರು ಅಗ್ರಾಸನ ವಹಿಸುವರು.
ಉನ್ನತ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾನಿಲಯದ ಸಮಕುಲಪತಿ ಡಾ.ಎಂ.ಸಿ ಸುಧಾಕರ್ ಉಪಸ್ಥಿತರಿರುವರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಂಬೈನ(ಎಸ್.ಎನ್.ಡಿಟಿ) ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ನಾಥಿಬಾಯಿ ದಾಮೋದರ್ ಠಾಕರ್ಸಿ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this