ವಿದ್ಯುತ್ ಕುಂದುಕೊರತೆಗಳ ಆಲಿಕೆಗೆ ಏ.18ರಂದು ಗ್ರಾಹಕರ ಸಂವಾದ ಸಭೆ

ಸಪ್ತಸಾಗರ ವಾರ್ತೆವಿಜಯಪುರ,ಏ.16:
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವಿಜಯಪುರ ತಾಲೂಕಿನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗಕ್ಕೆ ಸಂಬಂಧಿಸಿದಂತೆ ಏ.18ರಂದು ಮಧ್ಯಾಹ್ನ 3.30ಗಂಟೆಗೆ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಕಛೇರಿಯಲ್ಲಿ ರೈತರು ಹಾಗೂ ಗ್ರಾಹಕರೊಂದಿಗೆ ವಿದ್ಯುತ್ ಸಮಸ್ಯೆಗಳ ಪರಿಹಾರಕ್ಕೆ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ.
ಹೆಸ್ಕಾಂ ಗ್ರಾಮೀಣ ಉಪ ವಿಭಾಗದ ಕಛೇರಿಗೆ ಒಳಪಡುವ ಗ್ರಾಮಗಳ ಗ್ರಾಹಕರು ಹಾಗೂ ಸಾರ್ವಜನಿಕರು ಸಂವಾದ ಸಭೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿಜಯಪುರ ಗ್ರಾಮೀಣ ಉಪ ವಿಭಾಗದ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this