ಸಪ್ತಸಾಗರ ವಾರ್ತೆ,ವಿಜಯಪುರ, ಏ. 19:
ನಮ್ಮ ಸಿಎಂ ಬಹಳ ಗಟ್ಟಿಯಾಗಿದ್ದಾರೆ.
ಅವರು ಯಾವಗಲೂ ಎಂದೂ ಅಸಹಾಯಕರಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಭಾನುವಾರ ವಿಜಯಪುರದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರು, ಸಿಎಂ ಅಸಹಾಯಕರಾಗಿದ್ದಾರೆ ಎಂದು
ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ ಮಾತನಾಡಿದರು.
ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದರೆ ಕ್ರಮ ಆಗುತ್ತದೆ. ನಾನು ಸಹ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದರೂ ನಮ್ಮ ಮೇಲೆ ಕೂಡ ಕ್ರಮವಾಗುತ್ತದೆ. ಪಕ್ಷದ ಶಿಸ್ತು ಎಲ್ಲರಿಗೂ ಅನ್ವಯಿಸುತ್ತದೆ
ಎಲ್ಲರೂ ಪಕ್ಷದ ನಿಯಮಗಳನ್ನು ಪಾಲಿಸಬೇಕು ಎಂದರು.
ಯಾವ ಸಮಾಜದ ವಿರುದ್ಧ ನಮ್ಮ ಪಕ್ಷ ಕ್ರಮ ಕೈಗೊಂಡಿಲ್ಲ. ತಪ್ಪು ಯಾರೇ ಮಾಡಿದರೂ ಅದು ಕ್ರಮ ಆಗುತ್ತದೆ ಎಂದು ಹೇಳಿದರು.
ನಮ್ಮ ಸಿಎಂ ಗಟ್ಟಿಯಾಗಿದ್ದಾರೆ- ಎಂಬಿಪಿ


