ಮೇ .14ರಂದು ಫೋನ್-ಇನ್ ಕಾರ್ಯಕ್ರಮ

ಸಪ್ತಸಾಗರ ವಾರ್ತೆ ವಿಜಯಪುರ,ಮೇ.8:
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದುಕೊರತೆಗಳನ್ನು ಆಲಿಸಲು ಮೇ 14ರಂದು ಮಧ್ಯಾಹ್ನ 3.30 ರಿಂದ 4.00ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ದೂರವಾಣಿ 6366423887 ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ, ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು, ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this