ಜೂ. 1 ರಂದು ಅಂಚೆ‌ ವಿಮೆ ಪ್ರತಿನಿಧಿಗಳ ನೇಮಕಾತಿಗೆ ನೇರ ಸಂದರ್ಶನ

ಸಪ್ತಸಾಗರ ವಾರ್ತೆವಿಜಯಪುರ, ಮೇ 14:
ವಿಜಯಪುರ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನ ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ನೇರ ಸಂದರ್ಶನ ಜೂ. 1 ರಂದು ಬೆಳಗ್ಗೆ 11 ಗಂಟೆಗೆ ನಗರದ ಸ್ಟೇಶನ್ ರಸ್ತೆಯ ಗೋಲಗುಂಬಜ್ ಬಳಿಯಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ಅಂದು‌ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಅರ್ಹತಾ ನಿಯಮಗಳು:
ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿದ್ದು, ಕಡ್ಡಾಯವಾಗಿ 18 ವರ್ಷ ಮೇಲ್ಪಟ್ಟವರಾಗಿರಬೇಕು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು ಹಾಗೂ ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ಮಾಜಿ ಸೈನಿಕರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿವೃತ್ತ ನೌಕರರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡುಬಂದ ಯಾವುದೇ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳು 5000 ರೂ. ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ.
ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮೀಶನ್ ನೀಡಲಾಗುವುದು. ನಿಗದಿತ ವೇತನ ಇರುವುದಿಲ್ಲ.
ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿ ಅಥವಾ ಅಂಚೆ ಜೀವ ವಿಮಾ ಅಭಿವೃದ್ಧಿ ಅಧಿಕಾರಿ ಮೊ. ನಂ: 8971127772 ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this