ಕಾಲೇಜ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 19:
2026-27ನೇ ಸಾಲಿಗೆ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಪಿಯುಸಿ ದಾಖಲಾತಿಗೆ ವಿಜ್ಞಾನ(ಪಿಸಿಎಂಬಿ), ವಾಣಿಜ್ಯ ಮತ್ತು ಕಲಾ ವಿಭಾಗಕ್ಕೆ ಅಲ್ಪಸಂಖ್ಯಾತರ ಸಮುದಾಯ ಶೇ.75 ಹಾಗೂ ಇತರೆ ಸಮುದಾಯದವರಿಂದ ಶೇ.25 ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜೂನ್ 1 ಅರ್ಜಿ ಸಲ್ಲಿಕೆಗೆ‌ ಕೊನೆಯ ದಿನವಾಗಿದ್ದು, ಹಾಗಾಗಿ ಜೂ. 1 ರೊಳಗಾಗಿ‌ ಅರ್ಜಿಯನ್ನು ಜಿಲ್ಲಾ ಕಛೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ ಇಲ್ಲಿಗೆ ಸಲ್ಲಿಸಬಹುದಾಗಿದೆ.‌
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಜಿಲ್ಲಾ ಕಚೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಝಾದ ಭವನ, ಜಿಲ್ಲಾ ವಿಜ್ಞಾನ ಚಟುವಟಿಕೆ ಕೇಂದ್ರದ ಹತ್ತಿರ, ಜಿಲ್ಲಾ ಪಂಚಾಯತ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ದೂರವಾಣಿ ಸಂಖ್ಯೆ: 08352-295523 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share this