ಸಪ್ತಸಾಗರ ವಾರ್ತೆ ವಿಜಯಪುರ, ಮೇ 22:
2026-27 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಹೀಗಿರಬೇಕು. ಪ್ರವರ್ಗ-1, ಎಸ್.ಸಿ & ಎಸ್.ಟಿ ವಿದ್ಯಾರ್ಥಿಗಳ ಪೋಷಕರ ಆದಾಯ 2.50 ಲಕ್ಷ ರೂ. ಒಳಗಿರಬೇಕು.
ಪ್ರವರ್ಗ 2-ಎ, 2 ಬಿ, 3ಎ, 3 ಬಿ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯ1 ಲಕ್ಷದೊಳಗಿರಬೇಕು.
ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್ ಸೈಟ್ ಸಂಪರ್ಕಿಸಿ
ಅರ್ಜಿ ಸಲ್ಲಿಸಬೇಕು. ಆನ್ಲೈನ್ ಅರ್ಜಿ ಸಲ್ಲಿಕೆಗೆ ಜೂನ್. 8 ಕೊನೆಯ ದಿನಾಂಕವಾಗಿದೆ.
ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.in/ ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
Editor
Rudrappa B Asangi
Editor
Managing Editor
Chetan Asangi
Managing Editor


