ಸಪ್ತಸಾಗರ ವಾರ್ತೆ, ವಿಜಯಪುರ,ಜೂ.10: ಬ್ಯಾಚುಲರ್ ಆಫ್ ವಿಜುಯಲ್ ಆರ್ಟ್ಸ್ ನಾಲ್ಕು ವರ್ಷದ ಎಂಟು ಸೆಮಿಸ್ಟರ್ಗಳ ರಾಜ್ಯ ಶಿಕ್ಷಣ ಪದ್ಧತಿಯಂತೆ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿ.ವಿ. ಕಲೆಯಲ್ಲಿ ಸ್ನಾತಕ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿಯುಸಿ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಮೈಸೂರು ವಿವಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಈ ಪದವಿಯಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ, ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋಧ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು https;//uucms.karnataka.gov.in ಆನ್ಲೈನ್ ನಲ್ಲಿ ಜೂ.12ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಪ್ರವೇಶಾತಿ ಕೋರಿ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ಜೂ.15 ರಂದು ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0821-2438931 ಸಂಪರ್ಕಿಸಬಹುದು ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜನ ಡೀನ್ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


