ಸಪ್ತಸಾಗರ ವಾರ್ತೆ,ವಿಜಯಪುರ, ಜು. 12: ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಪಾಲಿಕೆ ಆವರಣದಲ್ಲಿ ಕಳೆದ 5 ದಿನಗಳಿಂದ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಶನಿವಾರ ಭೇಟಿ ನೀಡಿ, ಪಾಲಿಕೆ ನೌಕರರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರು ಮಾತನಾಡಿ, ಪಾಲಿಕೆ ನೌಕರರ ನ್ಯಾಯಯುತ ಹೋರಾಟಕ್ಕೆ ಬಿಜೆಪಿ ಸದಾ ಬೆಂಬಲವಾಗಿ ನಿಲ್ಲುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಿಂದಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಮೇಶ ಭೂಸನೂರ, ಬಬಲೇಶ್ವರ ವಿಧಾನಸಭಾ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ, ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ, ಮುಖಂಡರಾದ ಸಂಜಯ ಪಾಟೀಲ ಕನಮಡಿ, ಪ್ರಕೋಷ್ಟಗಳ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಜೋಗೂರ, ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ಡೊಳ್ಳಿ, ಬಾಲರಾಜ್ ರೆಡ್ಡಿ, ವಕೀಲರಾದ ಕುಮಾರ ನಿಡೋಣಿ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ಮುಖಂಡರು, ಪೌರ ಕಾರ್ಮಿಕರು ಉಪಸ್ಥಿತರಿದ್ದರು.
ಪಾಲಿಕೆ ನೌಕರರ ಹೋರಾಟಕ್ಕೆ ಬಿಜೆಪಿ ಬೆಂಬಲ


