ಸಪ್ತಸಾಗರ ವಾರ್ತೆ,ವಿಜಯಪುರ, ಅ. 14:
ನಗರದ ಗಾಂಧಿಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಮೀನಾಕ್ಷಿ ಚೌಕದ ಬಳಿ ಬುಧವಾರ ಬೆಳಗ್ಗೆ ಯುವಕನೊಬ್ಬನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿದ್ದಾರೆ.
ಮೃತನನ್ನು ಅಲ್ತಾಫ್ ಮನಗೂಳಿ (25) ಎಂದು ಗುರುತಿಸಲಾಗಿದೆ.
ಅಲ್ತಾಫ್ ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಗಾಂಧಿಚೌಕ್ ಪೊಲೀಸ್ ಠಾಣೆಯ ಎಂ.ಒ.ಬಿ. (ಮೋಡಸ್ ಆಪರಾಂಡಿ ಬ್ಯೂರೋ) ದಾಖಲೆಯಲ್ಲಿ ಆತನ ಹೆಸರು ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗಾಂಧಿಚೌಕ್ ಠಾಣೆಯ ಸಿಪಿಐ ಹಾಗೂ ಪಿಎಸ್ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು.
ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಕರಣದ ಹೆಚ್ಚಿನ ವಿವರಗಳು ತನಿಖೆಯ ಬಳಿಕ ಬಹಿರಂಗವಾಗಲಿವೆ.
ಯುವಕನ ಭೀಕರ ಹತ್ಯೆ


