ಸಪ್ತಸಾಗರ ವಾರ್ತೆ, ವಿಜಯಪುರ, ಜು. 17: ಸಾಹಿತಿ ದೊಡ್ಡಣ್ಣ ಭಜಂತ್ರಿ ಅವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ನಗರದ ಶ್ರೀ ಏಳು ಮಕ್ಕಳ ತಾಯಿ ಜಾತ್ರಾ ಮಹೋತ್ಸವ ಸಮಿತಿಯು ದೊಡ್ಡಣ್ಣ ಅವರು ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ ಮಾಡಿ ಸತ್ಕರಿಸಲಾಯಿತು.
ಯುವ ಧುರೀಣ ರಾಮನಗೌಡ ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.
ಸಾಹಿತಿ ಭಜಂತ್ರಿಯವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ
