ಗುರು ನಮನ ಹಾಗೂ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19:
ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ವಿಜಯಪುರ ಜಿಲ್ಲಾ ಘಟಕದಿಂದ ಜು.20 ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಗುರು ನಮನ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.
ಬೆಳಿಗ್ಗೆ 10 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬಾಲಗಾಂವ ಅಮೃತಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಪಾಧ್ಯಕ್ಷ ಹಾಗೂ ಎಕ್ಸ್ಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಸವರಾಜ ಕೌಲಗಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಹುಶ್ರುತ ವಿದ್ವಾಂಸ, ಪತ್ರಕರ್ತ,ನಾಟಕಕಾರ, ಚಲನಚಿತ್ರ ನಿರ್ದೇಶಕ ನಾರಾಯಣ ಸ್ವಾಮಿ ಅಗಮಿಸುವರು. ಅತಿಥಿಗಳಾಗಿ ಜಿಲ್ಲಾ ಉಪಾಧ್ಯಕ್ಷೆ ಹಾಗೂ ಶಾಂತಿನಿಕೇತನ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷೆ ಶೀಲಾ ಬಿರಾದಾರ, ದರಬಾರ ಶಿಕ್ಷಣ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ವಿನಾಯಕ ಗ್ರಾಮಪುರೋಹಿತ, ಚಾಣಕ್ಯ ಕರಿಯರ್ ಅಕಾಡೆಮಿ ಮುಖ್ಯಸ್ಥ ಎನ್ ಎಂ ಬಿರಾದಾರ ಉಪಸ್ಥಿತರಿರುವರು. ಪ್ರಾಂತ ಸಹಕಾರ್ಯದರ್ಶಿ ಸಿದ್ದು ಮದರಖಂಡಿ ಪ್ರಾಸ್ತಾವಿಕವಾಗಿ ಮಾತನಾಡುವರು.
ಗೋಷ್ಠಿ-1: ಬೆಳಿಗ್ಗೆ 11.30 ಕ್ಕೆ, ಶಿಕ್ಷಣದಲ್ಲಿ ತಂತ್ರಜ್ಞಾನದ ಪ್ರಭಾವ ಮತ್ತು ಬಳಕೆ-ವಿಷಯದ ಕುರಿತು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಏರೋಸ್ಪೇಸ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೋ. ಶ್ರೀಶಾ ಎಸ್ ರಾವ್ ಉಪನ್ಯಾಸ ನೀಡುವರು. ಗುರುದೇವ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಡಾ ರವೀಂದ್ರ ಬೋಸಲೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಚೇತನಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಜುಗತಿ, ಶ್ರೀ ಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಪ್ರಫುಲ ಮಂಗಾನವರ ಅಗಮಿಸುವರು.
ಗೋಷ್ಠಿ-2: ಮಧ್ಯಾನ್ಹ 12.45 ಕ್ಕೆ, ಪಂಚಮುಖಿ ಶಿಕ್ಷಣ ವಿಷಯದ ಕುರಿತು ಗದಗ ಧಾರವಾಡದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಸಂಸ್ಕೃತ ಅಧ್ಯಾಪಕ ವಿನಾಯಕ ಭಟ್ ಶೇಡಿಮನೆ ಉಪನ್ಯಾಸ ನೀಡುವರು.ಪ್ರೇರಣಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಅರವಿಂದ ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಿದ್ದೇಶ್ವರ ಶಿಕ್ಷಣ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಡಾ. ಎಚ್. ವೆಂಕಟೇಶ, ಎಪಿ ಸ್ಕೂಲ್ ಅಧ್ಯಕ್ಷ ಬಸವರಾಜ ಶೀಲವಂತ, ಇಂಡಿಯನ್ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಮಲ್ಲು ಗುಡ್ಡದ ಉಪಸ್ಥಿತರಿರುವರು.
ಗೋಷ್ಠಿ-3: ಮಧ್ಯಾಹ್ನ 2.30 ಕ್ಕೆ, ಪರಿಣಾಮಕಾರಿ ಬೋಧನೆ ವಿಷಯದ ಕುರಿತಾಗಿ ಧಾರವಾಡದ ಖ್ಯಾತ ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ ಉಪನ್ಯಾಸ ನೀಡುವರು. ರುಕ್ಮಾoಗದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅರುಣ ಸೋಲಾಪುರಕರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಹೊರ್ತಿ ಸರ್ವೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರೇವಣಸಿದ್ದ ಪೂಜಾರಿ, ತುಂಗಳ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಲಕ್ಷ್ಮೀ ತುಂಗಳ ಉಪಸ್ಥಿತರಿರುವರು.
ಸಮಾರೋಪ ಸಮಾರಂಭ ಸಂಜೆ 4 ಕ್ಕೆ ನಡೆಯಲಿದ್ದು, ಸಿದ್ದೇಶ್ವರ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಬಸಯ್ಯ ಹಿರೇಮಠ ಅಧ್ಯಕ್ಷತೆ ವಹಿಸುವರು. ದರಬಾರ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ರಾಜೇಶ ದರಬಾರ ಮುಖ್ಯ ಅತಿಥಿಯಾಗಿ, ಅಕ್ಕ ಶಾರದಾ ಪಬ್ಲಿಕ್ ಶಾಲೆಯ ಅಧ್ಯಕ್ಷ ಸಂಗು ಸಜ್ಜನ ಅತಿಥಿಯಾಗಿ ಉಪಸ್ಥಿತರಿರುವರು.
ಈ ಸಮಾರಂಭದಲ್ಲಿ ಜಿಲ್ಲೆಯ ಎಲ್ಲ ವಿಭಾಗದ ಶಿಕ್ಷಕರು, ಉಪನ್ಯಾಸಕರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಜಿಲ್ಲಾ ಅಧ್ಯಕ್ಷ ಬಿ.ಎಸ್. ಬಾಪಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share