ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 14:
ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ನಗರದ ಎಸ್. ಎಸ್. ರಸ್ತೆಯ ಎಸ್. ಎಸ್. ಕಾಂಪ್ಲೆಕ್ಸ್ ನಲ್ಲಿ ಇರುವ ಅಮರ ವರ್ಷಿಣಿ ಸರಕಾರಿ ಬ್ಯಾಂಕಿನಲ್ಲಿ ನಡೆದಿದೆ.
ಸುಶೀಲ್ ಕಾಳೆ (43) ಕೊಲೆಗೀಡಾದ ಯುವಕ.
ಬ್ಯಾಂಕಿನಲ್ಲಿದ್ದ ಈ ಯುವಕನ ಮೇಲೆ ಮಾರಾಕಸ್ತ್ರಗಳಿಂದ ನಾಲ್ವರು ಹಲ್ಲೆ ಮಾಡಿದ್ದು ತೀವ್ರವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ. ತಕ್ಷಣ ಆತನನ್ನು ಚಿಕಿತ್ಸೆಗಾಗಿ ನಗರದ ಬಿ ಎಲ್ ಡಿ ಇ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕ ಕಾಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಸಹಕಾರಿ ಬ್ಯಾಂಕ್
ಸ್ಥಳದಲ್ಲಿ ಜನರಲ್ಲಿ ಆತಂಕ ಮನೆ ಮಾಡಿದೆ. ಸ್ಥಳಕ್ಕೆ ಗಾಂಧಿ ಚೌಕ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಾಳಿ ಮಾಡಿ ಪರಾರಿಯಾದವರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ದಾಳಿಗೆ ಕಾರಣ, ದಾಳಿ ಮಾಡಿದವರು ಯಾರು ಎಂಬ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರದಲ್ಲಿ ಹಾಡ ಹಗಲೆ ಯುವಕನ ಬರ್ಬರ ಹತ್ಯೆ
