ಸಪ್ತಸಾಗರ ವಾರ್ತೆ, ವಿಜಯಪುರ, ಜ. 5 :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ. 9ರಂದು ವೀರ ರಾಣಿ ಚೆನ್ನಮ್ಮಳ ಮೂರ್ತಿ ಅನಾವರಣ ಮಾಡಬಾರದು ಎಂದು ಲಿಂಗಾಯತ ಪಂಚಮಸಾಲಿ ವಕೀಲ ಪರಿಷತ್ತಿನ ರಾಜ್ಯ ಸಂಚಾಲಕ ಹಾಗೂ ನ್ಯಾಯವಾದಿ ಶ್ರೀಶೈಲ ಮುಳಜಿ ಅವರು ಹೇಳಿದ್ದಾರೆ.
ಸೋಮವಾರ ನಗರದ ಕಿತ್ತೂರರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಜನೇವರಿ 9 ರಂದು ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಕಿತ್ತೂರರಾಣಿ ಚೆನ್ನಮ್ಮ ಅವರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚೆನ್ನಮ್ಮ ಅವರ ಮೂರ್ತಿ ಲೋಕಾರ್ಪಣೆಗೆ ಆಗಮಿಸುತ್ತಿದ್ದಾರೆ. ಆದ್ದರಿಂದ ಸಮಾಜದ ಹಿತದೃಷ್ಟಿಯಿಂದ ಹಾಗೂ ಮಕ್ಕಳ ಭವಿಷ್ಯಕ್ಕಾಗಿ ಕಳೆದ ವರ್ಷ ಬೆಳಗಾವಿಯಲ್ಲಿ ನಡೆದ ಮೀಸಲಾತಿ ಹೋರಾಟದಲ್ಲಿ ಸಮಾಜದ ಜನರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಲಾಠಿ ಚಾರ್ಜ್ ಮಾಡಿಸಿದ್ದ ಕಾರಣ, ಸಿದ್ದರಾಮಯ್ಯ ಅವರಿಂದ ಮೂರ್ತಿ ಲೋಕಾರ್ಪಣೆ ಮಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಅವರಿಗೆ ಸಮಾಜದ ಕುರಿತು ಕಳಕಳಿ ಇದ್ದರೆ, ಕಳೆದ ವರ್ಷ ಬೆಳಗಾವಿಯಲ್ಲಿ ನಡೆದ ಹೋರಾಟದಲ್ಲಿ ಪಂಚಮಸಾಲಿ ಸಮಾಜದ ಜನರ ಮೇಲೆ ಹಾಕಿದ ಎಲ್ಲ ಕೇಸಗಳನ್ನು ಹಿಂಪಡೆದುಕೊಳ್ಳಬೇಕು. ಹಲ್ಲೆಗೆ ಒಳಗಾದ ಎಲ್ಲ ಜನರಿಗೆ ನೆರವು ನೀಡಬೇಕು. ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿಯವರಿಗೆ ಕ್ಷಮೆ ಕೋರಬೇಕೆಂದು ಎಂದು ಮುಖ್ಯಮುಂತ್ರಿಗಳಿಗೆ ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ವಕೀಲರ ಪರಿಷತ್ತು ವತಿಯಿಂದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಜ. 9ರಂದು ಸಿಎಂರಿಂದ ಚೆನ್ನಮ್ಮ ಮೂರ್ತಿ ಅನಾವರಣಕ್ಕೆ ನ್ಯಾಯವಾದಿ ಶ್ರೀಶೈಲ ಮುಳಜಿ ವಿರೋಧ


