ಸಪ್ತಸಾಗರ ವಾರ್ತೆ, ವಿಜಯಪುರ, ನ.6:
ವಿಜಯಪುರದ ಕೃಷಿ ಮಹಾವಿದ್ಯಾಲಯದಲ್ಲಿ ಪಪಂ ಅಭ್ಯರ್ಥಿಗಳಿಗಾಗಿ ಮನೋವಿಜ್ಞಾನ ಹಾಗೂ ಪಜಾ ಅಭ್ಯರ್ಥಿಗಳಿಗಾಗಿ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ತಲಾ ಒಂದು ಹುದ್ದೆಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ನವೆಂಬರ್ 25ರಂದು ಬೆಳಗ್ಗೆ 11 ಗಂಟೆಗೆ ಕೃಷಿ ಮಹಾವಿದ್ಯಾಲಯದ ಡೀನ್ ಅವರ ಕಾರ್ಯಾಲಯದಲ್ಲಿ ಸಂದರ್ಶನ ನಡೆಯಲಿದೆ.
ಅಗತ್ಯ ಶೈಕ್ಷಣಿಕ ಅರ್ಹತೆಯುಳ್ಳ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರದ ಕೃಷಿ ಮಹಾವಿದ್ಯಾಲಯದ ಡೀನ್ ಅವರ ಕಚೇರಿಯನ್ನು ಸಂಪರ್ಕಿಸುವಂತೆ ಮಹಾವಿದ್ಯಾಲಯದ ವಿದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


