ಡಿಪ್ಲೋಮ ಕೋರ್ಸ್‌ಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:
2026-27ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ 49 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವ್ಯಾಸಂಗದ ವೇಳೆ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು 2.500 ರೂ. ವರೆಗೆ ಶಿಷ್ಯವೇತನ ನೀಡಲಾಗುವುದು. ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ದಿನಾಂಕ:01-07-2026ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23ರ ವಯೋಮಿತಿಯಲ್ಲಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಶ್ರೇಣಿಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.
ಕೋರ್ಸ್‌ಗಾಗಿ ಲಭ್ಯವಿರುವ ಸಂಖ್ಯೆ ಮತ್ತು ಸಂಸ್ಥೆಗಳ ವಿವರ:
ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ)- 22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ, (ತಮಿಳುನಾಡು) 12 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ. ವೆಂಕಟಗಿರಿ- 03, ಅಭ್ಯರ್ಥಿಗಳು (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ), ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳಂ)02 ಅಭ್ಯರ್ಥಿಗಳು.
ಒಟ್ಟು 39 ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್ ಗಾಗಿ ಕರೆಯಲಾಗುವುದು. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ನಮೂನೆಗಳಿಗಾಗಿ ಕಚೇರಿಯ ಜವಳಿ ಪ್ರವರ್ಧನಾಧಿಕಾರಿಗಳಾದ ಜಿ.ಎ.ವಾಘಮೋರೆ, ಅವರ ದೂರವಾಣಿ ಸಂಖ್ಯೆ: 9902561441 ಅಥವಾ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ. ಗದಗ ಬೆಟಗೇರಿ (ಮೊ.ಸಂ:9916143619)ಇರುಗಳನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.
ಅರ್ಜಿಗಳನ್ನು ಆನ್ ಲೈನ್ ನಲ್ಲಿ ಡೌನ್ ಲೋಡ ಮಾಡಿಕೊಳ್ಳಲು ಲಿಂಕ್ https://khtgadag.ac.in/admissionform.pdf ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102, ಇವರಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 30 ಕೊನೆಯ ದಿನವಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this