ಸಪ್ತಸಾಗರ ವಾರ್ತೆ, ವಿಜಯಪುರ, ಆ. 20:
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಪಂಗಡದ ಸಮುದಾಯದ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ ಘಟಕ ಯೋಜನೆಯಡಿ
1 ಲಕ್ಷ ರೂ. ಸಹಾಯಧನ ಹಾಗೂ 50 ಸಾವಿರ ರೂ. ಬೀಜಧನ (ಶೇ 4 ರಷ್ಟು ಬಡ್ಡಿ ದರ). ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ-ಹಸುಗಳಿಗೆ ಘಟಕ ವೆಚ್ಚದ ಶೇ. 50 ರಷ್ಟು ಅಥವಾ ಗರಿಷ್ಟ 1.25ಲಕ್ಷ ರೂ.ಗಳ ಸಹಾಯಧನ. ಸ್ವಾವಲಂಬಿ ಸಾರಥಿ ಯೋಜನೆಯ, ಸರಕು ವಾಹನ,ಟ್ಯಾಕ್ಸಿ (ಹಳದಿ ಬೋರ್ಡ) ಖರೀದಿಸುವ ಉದ್ದೇಶಕ್ಕೆ ಸಾಲದ ಮೊತ್ತದ ಶೇ. 75 ರಷ್ಟು ಸಹಾಯಧನ ಅಥವಾ 4 ಲಕ್ಷ ರೂ. ಗರಿಷ್ಟ ಮೊತ್ತ ನೀಡಲಾಗುವುದು.
ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಇತರೆ ಉದ್ದೇಶಕ್ಕಾಗಿ ವ್ಯಾಪಾರ ಮತ್ತು ಇತರೆ ಉದ್ದೇಶಗಳಿಗೆ ಘಟಕ ವೆಚ್ಚದ ಶೇ 70 ರಷ್ಟು ಅಥವಾ ಗರಿಷ್ಟ 2 ಲಕ್ಷ ರೂ ಸಹಾಯಧನ ನೀಡಲಾಗುವುದು.
ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, (ಮಹಿಳಾ ಸ್ವ ಸಹಾಯ ಗುಂಪುಗಳಿಗೆ) ಘಟಕ ವೆಚ್ಚ 5 ಲಕ್ಷ ರೂ. ಸಹಾಯಧನ 2.50 ಲಕ್ಷ ರೂ, ಬೀಜಧನ 2.50 ಲಕ್ಷ ರೂ (ಶೇ. 4 ರಷ್ಟು ಬಡ್ಡಿ ದರ) ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.
2023-24 ಹಾಗೂ 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವರು ಮತ್ತೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಜಿದಾರರು ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 17ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕ ಕಚೇರಿ ಅಥವಾ ದೂರವಾಣಿ ಸಂಖ್ಯೆ : 08352-276743 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
