ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 11:
ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಗುತ್ತಿದೆ. ಆದರಂತೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಶೇ. 90 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮಾತ್ರ Online ನಲ್ಲಿ ಅರ್ಜಿ ಸಲ್ಲಿಸುವುದು. ವಿದ್ಯಾರ್ಥಿಗಳು, 2026ರ ಎಸ್.ಎಸ್.ಎಲ್.ಸಿ ಅಥವಾ ಪಿ.ಯು.ಸಿ. ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು. https://powermedia.info, ಸಂಘವು ನಿಗಧಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ, ತಾಲ್ಲೂಕು, ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ದೃಢೀಕರಿಸಿ ಆನಲೈನನಲ್ಲಿ ಅಪಲೋಡ್ ಮಾಡುವುದು. ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ ನೌಕರರು ಅರ್ಜಿ ಸಲ್ಲಿಸುವಂತಿಲ್ಲ. ವಿದ್ಯಾರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಶಾಲಾ ಕಾಲೇಜಿನ ದೃಢೀಕೃತ ಅಂಕಪಟ್ಟಿ, ಸಂಘವು ನೀಡಿರುವ ನಮೂನೆಯಲ್ಲಿ ಕಚೇರಿ ಮುಖ್ಯಸ್ಥರ ದೃಢೀಕರಣ ಮತ್ತು ಶಾಖಾ ಸಂಘದ ದೃಢೀಕರಣ ಪತ್ರವನ್ನು ಅಪಲೋಡ್ ಮಾಡದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಆನಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಪೂರ್ಣವಾಗಿ ಭರ್ತಿ ಮಾಡತಕ್ಕದ್ದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-05-2026 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ರಾಜ್ಯ ಸಂಘದ ದೂರವಾಣಿ ಸಂಖ್ಯೆ: 080-22354783/84, ಸಂಪರ್ಕಿಸುವುದು‌ ಎಂದು ವಿಜಯಪುರ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೆಡಶ್ಯಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this