ವಾಹನ ಖರೀದಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ,ಜೂ.6:
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ, 2020-21 ರಿಂದ 2023-24ನೇ ಸಾಲಿನ ಜಿಲ್ಲೆಗೆ ಸಾಮಾನ್ಯ ವರ್ಗದಡಿ ಒಂದು ಇನ್ಸುಲೇಟೆಡ್ ವಾಹನ ಖರೀದಿಗೆ ಸಹಾಯಧನಕ್ಕಾಗಿ ಜಿಲ್ಲೆಯ ಅರ್ಹ ಆಸಕ್ತ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ರಷ್ಟು ಸಹಾಯಧನ ದೊರೆಯಲಿದ್ದು, ಉಳಿದ ಶೇ. 60 ರಷ್ಟು ಮೊತ್ತವನ್ನು ಫಲಾನುಭವಿಗಳೇ ಭರಿಸಬೇಕಾಗುತ್ತದೆ.

ಅರ್ಹತೆಗಳೇನು
ಅರ್ಜಿದಾರರು ಕಡ್ಡಾಯವಾಗಿ ವಿಜಯಪುರ ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು.
ಮೀನುಗಾರಿಕೆ ಅಥವಾ ಮೀನು ಮಾರಾಟ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಆಸಕ್ತರು ಮೀನುಗಾರರ ಸಹಕಾರ ಸಂಘಗಳ ಸದಸ್ಯರಾಗಿರುವುದು ಕಡ್ಡಾಯವಾಗಿದೆ.
ಅರ್ಜಿದಾರರು ಚಾಲನಾ ಪರವಾನಗಿ ಹೊಂದಿರಬೇಕು.

ಅರ್ಜಿ ಸಲ್ಲಿಸುವ ವಿಧಾನ ಮತ್ತು ದಾಖಲೆಗಳು
ಆಸಕ್ತ ಫಲಾನುಭವಿಗಳು ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ವಿಜಯಪುರ-ಮುದ್ದೇಬಿಹಾಳ ಅಥವಾ ಮೀನುಗಾರಿಕೆ ಉಪ ನಿರ್ದೇಶಕರು, ವಿಜಯಪುರ ಕಚೇರಿಯನ್ನು ಸಂಪರ್ಕಿಸಬಹುದು.
ಭರ್ತಿ ಮಾಡಿದ ಅರ್ಜಿಗಳೊಂದಿಗೆ ಅಗತ್ಯ ದಾಖಲೆಗಳಾದ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಚಾಲನಾ ಪರವಾನಗಿ, ಮೀನುಗಾರರ ಸಹಕಾರ ಸಂಘದ ಗುರುತಿನ ಚೀಟಿ-ಮೀನುಗಾರಿಕೆ ಪರವಾನಗಿ ಹಾಗೂ ಫೋಟೋಗಳೊಂದಿಗೆ ದಿನಾಂಕ: 15-06-2026 ರೊಳಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ವಿಜಯಪುರ (ಮೊ: 9480822974) ಅಥವಾ ಮುದ್ದೇಬಿಹಾಳ (ಮೊ: 9880210505) ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this