ನಗರ ಸ್ಥಳೀಯ ಸಂಸ್ಥೆಗಳಲ್ಲಿ
ಕರ್ನಾಟಕ ಒನ್ ಫ್ರಾಂಚೈಸಿ ಸ್ಥಾಪನೆಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,‌ಫೆ.17:
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನಾಗರಿಕ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಜಿಲ್ಲೆಯ ವಿವಿಧ ನಗರ‌ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಪ್ರಾಂಚೈಸಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಲಮೇಲ, ಬಸವನ ಬಾಗೇವಾಡಿ, ದೇವರ ಹಿಪ್ಪರಗಿ, ಮುದ್ದೇಬಿಹಾಳ,
ಸಿಂದಗಿ, ತಾಳಿಕೋಟೆ, ತಿಕೋಟಾ ಹಾಗೂ ವಿಜಯಪುರ ನಗರ ಸ್ಥಳಿಯ ಸಂಸ್ಥೆಗಳಲ್ಲಿ
ಫ್ರಾಂಚೈಸಿಗಾಗಿ ಆಸಕ್ತರು
ಆನ್‍ಲೈನ್ ಮೂಲಕ https://www.karnatakaone.gov.in/Public/FranchiseeTerms ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಮಾರ್ಚ್ 3 ಕೊನೆಯ ದಿನವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this