saptsagar_admin

ಆಸ್ಪತ್ರೆ ಸಿಬ್ಬಂದಿ ದಿವ್ಯ ನಿರ್ಲಕ್ಷ್ಯ: ಆಸ್ಪತ್ರೆ ಆವರಣದಲ್ಲಿಯೇ ಗರ್ಭಿಣಿ ಹೆರಿಗೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 15:ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷದಿಂದ ಗರ್ಭಿಣಿ ಮಹಿಳೆಯೊಬ್ಬಳಿಗೆ ಜಿಲ್ಲಾ ಆಸ್ಪತ್ರೆ ಆವರಣದಲ್ಲೇ ಹೆರಿಗೆ ಆಗಿರುವ ಘಟನೆ ನಡೆದಿದೆ.ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದ ಕಾವೇರಿ ಎಂಬುವರು ಆಸ್ಪತ್ರೆ ಆವರಣದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳದಿಂದ ವಿಜಯಪುರ ಜಿಲ್ಲಾಸ್ಪತ್ರೆ ಆವರಣಕ್ಕೆ ಗರ್ಭಿಣಿಯನ್ನು ಕರೆ ತಂದರೂ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗದೆ ಹೊರ ಆವರಣದಲ್ಲಿಯೇ ಹೆರಿಗೆ ಆಗಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.ಜಿಲ್ಲಾ ಆಸ್ಪತ್ರೆ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡು…

Read More

ಎಂಜಿನಿಯರ್ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 15: ನಗರದ ಬಿ.ಎಲ್.ಡಿ.ಇ.ಎಲ್.ಡಿ.ಇ. ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ನಲ್ಲಿ ಎಂಜಿನಿಯರ್ ದಿನಾಚರಣೆ ಅಂಗವಾಗಿ ಬಿ.ಎಲ್‌.ಡಿಇ ವೈದ್ಯಕೀಯ ಆಸ್ಪತ್ರೆಯ ಸಹಯೋಗದಲ್ಲಿ ಇಂದು ಸೋಮವಾರ ರಕ್ತದಾನ ಶಿಬಿರ ನಡೆಯಿತು.ಈ ಸಂದರ್ಭದಲ್ಲಿ ಮತನಾಡಿದ ಕಾಲೇಜಿನ ಪ್ರಾಚಾರ್ಯ ಪಿ. ಬಿ. ಕಳಸಗೊಂಡ, ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರು ಕನ್ನಡಿಗರಾಗಿದ್ದು, ಅವರ ಜನ್ಮದಿನದಂದು ಎಂಜಿನಿಯರ್ಸ್ ದಿನ ಆಚರಿಸುವುದು ಹೆಮ್ಮೆಯ ವಿಷಯವಾಗಿದೆ. ಬಡತನವನ್ನು ಮೆಟ್ಟಿನಿಂತು ಕಷ್ಟಪಟ್ಟು ಅಂದು ಎಂಜಿನಿಯರಿಂಗ್ ಪದವಿ ಪಡೆದು ತಮ್ಮ ಕಾಯಕದ…

Read More

ವೃಕ್ಷಥಾನ್ ಹೆರಿಟೇಜ್ ರನ್: ಹೆಚ್ಚೆಚ್ಚು ಪಾಲ್ಗೊಳ್ಳಿ-ಶ್ರೀ ಶಿವಯೋಗೇಶ್ವರ ಸ್ವಾಮೀಜಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 15: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್- 2025ರಲ್ಲಿ ಪಾಲ್ಗೊಳ್ಳಬೇಕು ಎಂದು ಕಾಖಂಡಕಿ ಗುರುದೇವ ಆಶ್ರಮದ ಶ್ರೀ ಶಿವಯೋಗೇಶ್ವರ ಸ್ವಾಮೀಜಿ ಭಕ್ತರಿಗೆ ಕರೆ ನೀಡಿದ್ದಾರೆ.ರವಿವಾರ ಕಾಖಂಡಕಿಯಲ್ಲಿ‌ ಆಶ್ರಮಕ್ಕೆ‌ ತೆರಳಿದ ವೃಕ್ಷಥಾನ್ ಹೆರಿಟೇಜ್ ಕೋರ್ ಕಮಿಟಿ ಸದಸ್ಯರಾದ ಡಾ. ರಾಜು ಯಲಗೊಂಡ, ವೀರೇಂದ್ರ ಗುಚ್ಚೆಟ್ಟಿ ಹಾಗೂ ವಿನಯಕುಮಾರ ಎ. ಕಂಚ್ಯಾಣಿ ಅವರು ಸ್ವಾಮೀಜಿಯನ್ನು ಭೇಟಿ ಮಾಡಿ‌ ಹೆರಿಟೇಜ್ ರನ್ ನಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದರು.ಈ ಆಹ್ವಾನ ಸ್ವೀಕರಿಸಿ‌ ಮಾತಮಾಡಿದ…

Read More

ನಾಳೆಯಿಂದ ವಿಜಯಪುರ-‌ಚಿಕ್ಕಲಕಿ ಕ್ರಾಸ್ ಮಾರ್ಗದಲ್ಲಿ ಎರಡು ಬಸ್ ಕಾರ್ಯಾರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 15: ನಾಳೆ ಮಂಗಳವಾರದಿಂದ ವಿಜಯಪುರ ನಗರದಿಂದ-‌ಚಿಕ್ಕಲಕಿ ಕ್ರಾಸ್ ವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸದಾಗಿ ಎರಡು ಗ್ರಾಮೀಣ ಸಾರಿಗೆ ಬಸ್ ಸಂಚಾರ ಪ್ರಾರಂಭಿಸಲಿದೆ.ವಿದ್ಯಾರ್ಥಿಗಳು, ರೈತರು‌ ಕಾರ್ಮಿಕರು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲು‌ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ಹೊಸ ಬಸ್ ಸೇವೆ ಪ್ರಾರಂಭಿಸಲು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಈ ಬಸ್ ಸೇವೆ ಪ್ರಾರಂಭಿಸಲಾಗುತ್ತಿದೆ.ಪ್ರತಿ‌ದಿನ‌ ಎರಡು ಬಸ್ಸುಗಳು ವಿಜಯಪುರದಿಂದ ಖತಿಜಾಪುರ,…

Read More

ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರ ಯುವತಿ ಶಿಫಾ ಭಾಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 15:ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಇದೇ ದಿ.೨೨ ರಿಂದ ಸೆ.೩೦ ರವರೆಗೆ ಎಂಟು ದಿನಗಳ ಕಾಲ ನಡೆಯಲಿರುವ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದ ಯುವ ಪ್ರತಿನಿಧಿ ಮಂಡಳದ ನೇತೃತ್ವವನ್ನು ವಿಜಯಪುರ ಯುವತಿ ಕು.ಶಿಫಾ ಜಮಾದಾರ ವಹಿಸಲಿರುವುದು ಜಿಲ್ಲೆಯ ಇತಿಹಾಸದಲ್ಲಿ ಹೊಸ ಮೈಲುಗಲ್ಲು.ಇದೇ ಪ್ರಥಮ ಬಾರಿಗೆ ಜಾಗತಿಕ ಮಟ್ಟದ ಶೃಂಗ ಸಭೆಯಲ್ಲಿ ವಿಜಯಪುರ ಯುವ ಪ್ರತಿಭೆಯೊಬ್ಬರು ಭಾರತ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ.ವಿಶ್ವ ಅಣು ದಿನಾಚರಣೆ ಅಂಗವಾಗಿ ರಷ್ಯಾ ಸರ್ಕಾರ ತನ್ನ ರಾಜಧಾನಿಯಲ್ಲಿ ಸೆ.೨೨…

Read More

ನನ್ನ ಮತ ನನ್ನ ಹಕ್ಕು ಜಾಗೃತಿ ಅಭಿಯಾನಕ್ಕೆ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.೧೪: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನನ್ನ ಮತ ನನ್ನ ಹಕ್ಕು ಜಾಗೃತಿ ಅಭಿಯಾನಕ್ಕೆ ಭಾನುವಾರ ನಗರದ ಗೋಳಗುಮ್ಮಟ ಆವರಣದಲ್ಲಿ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಕೆ.ಅನಂದ ಚಾಲನೆ ನೀಡಿದರು.ರಾಜ್ಯದ ರಾಜಧಾನಿಯಲ್ಲಿ ಸೆ.೧೫ರಂದು ಬೃಹತ್ ಕಾರ್ಯಕ್ರಮ ಆಯೊಜಿಸಲಾಗಿದ್ದು, ಪ್ರಜಾಪ್ರಭುತ್ವದ ಕುರಿತು ಎಲ್ಲ ಜಿಲ್ಲೆಗಳಿಂದ ಪ್ರತಿನಿಧಿಗಳನ್ನು ಬೈಕ್ ಮೂಲಕ ಪಾಲ್ಗೊಳ್ಳಲಿದ್ದಾರೆ. ನಮ್ಮ ಜಿಲ್ಲೆಯಿಂದಲೂ ಬೈಕ್ ರ‍್ಯಾಲಿ ಮೂಲಕ ಯುವಕರು ಪ್ರತಿನಿಧಿಸುತ್ತಿದ್ದಾರೆ. ಭವ್ಯವಾದ ಪ್ರಜಾಪ್ರಭುತ್ವ ಪಡೆದ ನಾವುಗಳು ಅದರ ಪಾಲನೆಯನ್ನು ಮಾಡುವುದು ಬಹಳ ಅವಶ್ಯ ಇದೆ ಎಂದು…

Read More

ವೀರ ಪರಿವಾರ್ ಸಹಾಯವಾಣಿ ಕೇಂದ್ರ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.14: ಮಾಜಿ ಸೈನಿಕರಿಗೆ ಹಾಗೂ ಅವರ ಅವಲಂಬಿತರಿಗೆ ವೀರ ಪರಿವಾರ್ ಸಹಾಯವಾಣಿ ಯೋಜನೆ ಜಾರಿಗೆ ಬಂದಿದ್ದು ಅದರ ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹರೀಶ.ಎ ಹೇಳಿದರು.ಭಾನುವಾರ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಮಾಜಿ…

Read More

ಅಕ್ರಮ ಪಡಿತರ ಅಕ್ಕಿ ವಶ: ಪೊಲೀಸರ ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 14:ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಯನ್ನು ಪೊಲೀಸರು ಲಾರಿ ಸಮೇತ ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿಯನ್ನು ಆಧರಿಸಿ ನಗರದ ವಿಜಯಾ ಟಾಯರ್ಸ್ ಮುಖ್ಯ ರಸ್ತೆಯಲ್ಲಿ ಪೊಲೀಸರು ಆಹಾರ ಇಲಾಖೆ ಜೊತೆಗೆ ಹಠಾತ್ ದಾಳಿ ನಡೆಸಿ 4,76,310 ಮೌಲ್ಯದ 210.43 ಕ್ವಿಂಟಲ್ ಅಕ್ಕಿ ಹಾಗೂ 5 ಲಕ್ಷ ಮೌಲ್ಯದ ಅಶೋಕ ಲೇಲ್ಯಾಂಡ್ ಲಾರಿ ವಶಪಡಿಸಿಕೊಳ್ಳಲಾಗಿದೆ. ಆರೋಪಿತರಾದ ಅಥಣಿ ತಾಲೂಕಿನ ಆಜೂರ ಗ್ರಾಮದ ಗಜಾನನ ಮಕಾಳೆ, ಅಥಣಿ ತಾಲೂಕಿನ ಗಣೇಶವಾಡಿ ನಿವಾಸಿ ಮಾರುತಿ ದೊಡಮನಿ, ಬೆಳಗಾವಿ ಆಝಾದ…

Read More

ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ನಿವ್ವಳ ಲಾಭ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 14 : ವಿಜಯಪುರದ ಪ್ರತಿಷ್ಠಿತ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ೩೦,೭೫,೧೮೯ ರೂ. ನಿವ್ವಳ ಲಾಭಗಳಿಸುವ ಮೂಲಕ ಪ್ರಗತಿಯತ್ತ ದಾಪುಗಾಲು ಇರಿಸಿದೆ ಎಂದು ಶ್ರೀ ಮಹಾಲಕ್ಷ್ಮೀಸಹಕಾರಿ ಬ್ಯಾಂಕ್ ಅಧ್ಯಕ್ಷ ಮುಕುಂದ ಕುಲಕರ್ಣಿ ಪ್ರಕಟಿಸಿದರು.ವಿಜಯಪುರದ ಶ್ರೀ ಸಂಗನ ಬಸವ ಮಂಗಲ ಕಾರ್ಯಾಲಯದಲ್ಲಿ ನಡೆದ ಶ್ರೀ ಮಹಾಲಕ್ಷೀ ಸಹಕಾರಿ ಬ್ಯಾಂಕ್ ೯೫ ನೇ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಬ್ಯಾಂಕಿನ ಪ್ರಗತಿಯನ್ನು ವಿಶ್ಲೇಷಿಸಿದ ಅವರು, ಬ್ಯಾಂಕ್ ದಿನದಿಂದ ದಿನಕ್ಕೆ…

Read More

ಶಿಕ್ಷಕಿಯ ಮೇಲೆ ಹಲ್ಲೆ: ಕ್ರಮಕ್ಕೆ ಬಿರಾದಾರ ಆಗ್ರಹ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.14:ಕೆ ಜಿ ಫ್ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕ್ಷೇತ್ರನ ಹಳ್ಳಿಯ ಎಚ್. ಪಿ .ಎಸ್ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಯ ತಂದೆಯೊಬ್ಬ ಶಿಕ್ಷಕಿಯೊಬ್ಬಳ ಮೇಲೆ ಹಲ್ಲೆ ನಡೆಸಿದ ಘಟನೆಯನ್ನು ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ ತೀವ್ರವಾಗಿ ಖಂಡಿಸಿದೆ.ಎಸ್. ಮಂಜುಳ ಎಂಬ ಶಿಕ್ಷಕಿಯ ಮೇಲೆ ಕಾರಣವಿಲ್ಲದೆ ವಿದ್ಯಾರ್ಥಿಯ ತಂದೆ ಹಲ್ಲೆ ಮಾಡಿದ ಕೃತ್ಯ ಅಮಾನವೀಯ ಪೈಶಾಚಿಕ ಕಾರ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ಲತಾ ಬಿರಾದಾರ…

Read More