saptsagar_admin

ರಾಷ್ಟ್ರಧ್ವಜ ಗೌರವವೇ ರಾಷ್ಟ್ರಗೌರವ: ರಾಷ್ಟ್ರೀಯ ಧ್ವಜ ದಿನ ಆಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 23:ಶ್ರೀ ಸಿದ್ದೇಶ್ವರ ಸಂಸ್ಥೆಯ ಸಂಗನಬಸವ ಪಿಯು ಕಾಲೇಜು, ಕವಲಗಿಯಲ್ಲಿ ರಾಷ್ಟ್ರೀಯ ಧ್ವಜ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.1947ರ ಜುಲೈ 22ರಂದು ಭಾರತದ ಸಂವಿಧಾನ ಸಭೆಯು ತ್ರಿವರ್ಣ ಧ್ವಜವನ್ನು ರಾಷ್ಟ್ರಧ್ವಜವಾಗಿ ಅಂಗೀಕರಿಸಿದ ಐತಿಹಾಸಿಕ ದಿನವನ್ನು ಸ್ಮರಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.ಕಾಲೇಜಿನ ಪ್ರಾಚಾರ್ಯರಾದ ಹೇಮಂತ್ ಕೃಷ್ಣ ಮಾತನಾಡಿ, “ರಾಷ್ಟ್ರಧ್ವಜವು ದೇಶದ ಏಕತೆ, ಅಖಂಡತೆ ಹಾಗೂ ಸ್ವಾತಂತ್ರ್ಯದ ಸಂಕೇತವಾಗಿದೆ. ಪ್ರತಿಯೊಬ್ಬ ನಾಗರಿಕರೂ ರಾಷ್ಟ್ರಧ್ವಜಕ್ಕೆ ಗೌರವ…

Read More

ದೋಷರಹಿತ ಮತದಾರರ ಪಟ್ಟಿ ಸಿದ್ಧತೆಗೆ ರಾಜಕೀಯ ಪಕ್ಷಗಳ ಸಹಕಾರ ಅಗತ್ಯ: ಡಿಸಿ ಡಾ. ಆನಂದ್ ಕೆ.

ಸಪ್ತಸಾಗರ ವಾರ್ತೆ ವಿಜಯಪುರ, ಜು.21:ದೋಷರಹಿತ, ಪಾರದರ್ಶಕ ಹಾಗೂ ನಿಖರ ಮತದಾರರ ಪಟ್ಟಿ ಸಿದ್ಧಪಡಿಸಲು ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರ ಸಕ್ರಿಯ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಸುಗಮವಾಗಿ ನಡೆಯುತ್ತಿದ್ದು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಲ್ಲರೂ…

Read More

ಬಿಎಲ್‌ಡಿಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಸೆಕ್ಯೂರಿಟಿ ಸೆಂಟರ್ ಆಫ್ ಎಕ್ಸೆಲೆನ್ಸ್ ಉದ್ಘಾಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಜು. 21:ಸೈಬರ್ ಭದ್ರತಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳನ್ನು ಉದ್ಯಮದ ಅಗತ್ಯಗಳಿಗೆ ತಕ್ಕಂತೆ ಸಜ್ಜುಗೊಳಿಸುವ ಮಹತ್ವದ ಹೆಜ್ಜೆಯಾಗಿ, ಬಿಎಲ್‌ಡಿಇ ಸಂಸ್ಥೆಯ ವಿ.ಪಿ. ಡಾ. ಪಿ.ಜಿ. ಹಳಕಟ್ಟಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಅಮೆರಿಕ ಮೂಲದ ಬರಾಕುಡಾ ನೆಟ್‌ವರ್ಕ್ಸ್ ಸಂಸ್ಥೆಯೊಂದಿಗೆ ಪರಸ್ಪರ ಸಹಕಾರ ಒಪ್ಪಂದ (MoU)ಕ್ಕೆ ಸಹಿ ಹಾಕಿ, ಬರಾಕುಡಾ ಬೆಂಬಲಿತ ಸೈಬರ್ ಸೆಕ್ಯೂರಿಟಿ ಸೆಂಟರ್ ಆಫ್ ಎಕ್ಸೆಲೆನ್ಸ್ ಅನ್ನು ಉದ್ಘಾಟಿಸಿತು.ಸೈಬರ್ ಭದ್ರತಾ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ ಬರಾಕುಡಾ ನೆಟ್‌ವರ್ಕ್ಸ್, ಕೌಶಲ್ಯಾಭಿವೃದ್ಧಿ, ವಿಶೇಷ ತರಬೇತಿ, ಹ್ಯಾಕಥಾನ್‌,…

Read More

‘ರಾಮ ಮಂದಿರ ಕುರಿತು ಸುಳ್ಳು ಮಾಹಿತಿ ಹರಡಿದ ಎಸ್.ಎಂ. ಪಾಟೀಲ ಗಣಿಹಾರ ದೇಶದ ಜನರ ಕ್ಷಮೆಯಾಚಿಸಲಿ’

ಬಹಿರಂಗ ಚರ್ಚೆಗೆ ಬರುವಂತೆ ಬಿಜೆಪಿ ಮುಖಂಡ ರವೀಂದ್ರ ಲೋಣಿ ಸವಾಲು ಸಪ್ತಸಾಗರ ವಾರ್ತೆ,ವಿಜಯಪುರ, ಜು. 21:ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣವು ಜನರ ತೆರಿಗೆ ಹಣದಿಂದ ನಡೆದಿದೆ ಎಂಬ ಕಾಂಗ್ರೆಸ್ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ ಅವರ ಹೇಳಿಕೆ ಸಂಪೂರ್ಣ ಸುಳ್ಳು, ಜನರನ್ನು ದಿಕ್ಕು ತಪ್ಪಿಸುವ ಹಾಗೂ ರಾಜಕೀಯ ದುರುದ್ದೇಶದಿಂದ ಕೂಡಿದದ್ದು. ಕೂಡಲೇ ದೇಶದ ಜನರ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಪಾಲಿಕೆ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ರವೀಂದ್ರ ಲೋಣಿ ಆಗ್ರಹಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

Read More

ವಿಜಯಪುರದಲ್ಲಿ ಎಐ-ಎಂಎಲ್ ಹಾಗೂ ರೋಬೋಟಿಕ್ಸ್ ಪ್ರಯೋಗಾಲಯ ಉದ್ಘಾಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.20:ನಗರದ ವಿ.ಬಿ. ದರಬಾರ ಶಾಲೆಯಲ್ಲಿ ಸೋಮವಾರ ಅತ್ಯಾಧುನಿಕ ಎಐ (AI), ಮೆಷಿನ್ ಲರ್ನಿಂಗ್ (ML) ಹಾಗೂ ರೋಬೋಟಿಕ್ಸ್ ಪ್ರಯೋಗಾಲಯವನ್ನು ಉದ್ಘಾಟಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಕೆ.ಜಿ. ದೇಶಪಾಂಡೆ, ಇಂದಿನ ತಂತ್ರಜ್ಞಾನ ಯುಗದಲ್ಲಿ ಕೃತಕ ಬುದ್ಧಿಮತ್ತೆ (AI) ಮಾನವನ ಸಾಮರ್ಥ್ಯವನ್ನು ವಿಸ್ತರಿಸುವ ಪ್ರಮುಖ ಸಾಧನವಾಗಿದೆ. ವಿದ್ಯಾರ್ಥಿಗಳು ಪ್ರಾಥಮಿಕ ಹಂತದಿಂದಲೇ ಎಐ, ಮೆಷಿನ್ ಲರ್ನಿಂಗ್ ಹಾಗೂ ರೋಬೋಟಿಕ್ಸ್‌ನಂತಹ ನವೀನ ತಂತ್ರಜ್ಞಾನಗಳ ಬಗ್ಗೆ ಅರಿವು ಮತ್ತು ಪ್ರಾಯೋಗಿಕ ಅನುಭವ ಹೊಂದಿದರೆ ಭವಿಷ್ಯದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು…

Read More

ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಅಂಗವಿಕಲರ ನೇಮಕಕ್ಕೆ ವಿಡಿಎ ಅನುಮೋದನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 20 :ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ಅಂಗವಿಕಲರನ್ನು ನೇಮಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಮಾಡಿದ ಪ್ರಸ್ತಾವಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು.ಸೋಮವಾರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸುನೀಲಗೌಡ ಪಾಟೀಲ, ಮುಂಬರುವ ವಿಧಾನ ಪರಿಷತ ಅಧಿವೇಶನದಲ್ಲಿಯೂ ಈ ಕುರಿತು ಸರಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು.ವಸತಿ ಸಮುಚ್ಛಯಗಳು, ವಾಣಿಜ್ಯ ಸಂಕೀರ್ಣಗಳು, ಆಸ್ಪತ್ರೆಗಳು, ಮಾಲ್ ಗಳು ಸೇರಿದಂತೆ ಬಹುಮಹಡಿ ಕಟ್ಟಡಗಳಲ್ಲಿ ಲಿಫ್ಟ್ ಬಳಸಲಾಗುತ್ತದೆ. ಈ ಲಿಪ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ…

Read More

ಹಿಂದುಳಿದ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ: ನಿಖರ ದತ್ತಾಂಶ ಸಲ್ಲಿಕೆಗೆ ಸಿಇಒ ರಿಷಿ ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.20:ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮಾನವ ಅಭಿವೃದ್ಧಿ ಸೂಚ್ಯಂಕಗಳು (HDI) ಪ್ರಮುಖ ಮಾನದಂಡಗಳಾಗಿದ್ದು, ಅಭಿವೃದ್ಧಿಯಲ್ಲಿ ಹಿಂದುಳಿದ ತಾಲೂಕುಗಳ ಕುರಿತು ಸಂಗ್ರಹಿಸಲಾಗುವ ದತ್ತಾಂಶ ನಿಖರ ಹಾಗೂ ವಿಶ್ವಾಸಾರ್ಹವಾಗಿರಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚಿಸಿದರು.ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಾನವ ಅಭಿವೃದ್ಧಿ ವರದಿ–2025 ಹಾಗೂ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿ ಯೋಜನೆ–2031 ವರದಿಗಳ ತಯಾರಿಕೆಗೆ ಸಂಬಂಧಿಸಿದ ದತ್ತಾಂಶ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ…

Read More

ಸಂಘಟಿತ ಸಮಾಜ ನಿರ್ಮಾಣಕ್ಕೆ ಶಿಕ್ಷಣ, ಸಂಸ್ಕಾರ ಅಗತ್ಯ: ಶಂಕರ ಬಿದರಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.20:ಸಮಾಜದ ಪ್ರಗತಿಗೆ ಶಿಕ್ಷಣ, ಸಂಸ್ಕಾರ, ಸಂಘಟನೆ ಮತ್ತು ಸಾಮಾಜಿಕ ಬದ್ಧತೆ ನಾಲ್ಕು ಪ್ರಮುಖ ಆಧಾರಸ್ತಂಭಗಳಾಗಿದ್ದು, ಇವುಗಳನ್ನು ಬಲಪಡಿಸಿದಾಗ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ ಹೇಳಿದರು.ನಗರದ ವೀರಶೈವ ಲಿಂಗಾಯತ ಸಮಾಜ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕರ್ನಾಟಕ ರಾಜ್ಯ ಘಟಕ ಹಾಗೂ ವಿಜಯಪುರ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ…

Read More

ಚನ್ನಮ್ಮ ದೇವೇಗೌಡರಿಗೆ ಜೆಡಿಎಸ್ ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.19:ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ದಿವಂಗತ ಚನ್ನಮ್ಮ ದೇವೇಗೌಡ ಅವರಿಗೆ ವಿಜಯಪುರ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಕಾರ್ಯಾಲಯದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೌನಾಚರಣೆ ನಡೆಸಿ, ದಿವಂಗತರ ಆತ್ಮಕ್ಕೆ ಶಾಂತಿ ಕೋರಿದರು.ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಹಿರಿಯ ಮುಖಂಡ ಪಂಚಪ್ಪ ಕಲಬುರ್ಗಿ, ಚನ್ನಮ್ಮ ದೇವೇಗೌಡ ಅವರು ಸರಳತೆ, ಸೌಜನ್ಯ ಹಾಗೂ ಕುಟುಂಬ ಮೌಲ್ಯಗಳ ಪ್ರತೀಕವಾಗಿದ್ದರು ಎಂದು ಸ್ಮರಿಸಿದರು. ದೇವೇಗೌಡರ ರಾಜಕೀಯ…

Read More

ಪತ್ರಿಕಾ ದಿನಾಚರಣೆ: ಪತ್ರಿಕೋದ್ಯಮ ಸತ್ಯ, ನ್ಯಾಯದ ಪರವಾಗಿರಲಿ – ಯತ್ನಾಳ

ಸಂಘಕ್ಕೆ ₹5 ಲಕ್ಷ ದೇಣಿಗೆ ಘೋಷಿಸಿದ ಶಾಸಕ ಕಟಕದೊಂಡ ಸಪ್ತಸಾಗರ ವಾರ್ತೆ,ವಿಜಯಪುರ, ಜು.19:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕಾನಿಪ) ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಭಾನುವಾರ ನಗರದ ಕಂದಗಲ್ಲ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಪತ್ರಿಕಾ ದಿನಾಚರಣೆ-2026 ಅಂಗವಾಗಿ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ, ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಸಮಾರಂಭ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಪತ್ರಿಕೋದ್ಯಮವು ಸಮಾಜದ ಸತ್ಯವನ್ನು ಅನಾವರಣಗೊಳಿಸುವ ಶಕ್ತಿಯಾಗಿದ್ದು, ಪತ್ರಕರ್ತರು ಸದಾ ಸತ್ಯ,…

Read More