
ಡಿಸಿಎಂ ಡಿಕೆಶಿ ವಿರುದ್ಧ ವಕೀಲರ ಪ್ರತಿಭಟನೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 9:ಡಿಸಿಎಂ ಡಿ.ಕೆ. ಶಿವಕುಮಾರ ಅವರು ವಕೀಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಬಿಜಾಪುರ ಬಾರ್ ಅಸೋಸಿಯೇಷನ್ ನೇತೃತ್ವದಲ್ಲಿ ಮಂಗಳವಾರ ನ್ಯಾಯವಾದಿಗಳು ಪ್ರತಿಭಟನೆ ನಡೆಸಿದರು.ಇತ್ತೀಚೆಗೆ ವಿಜಯಪುರ ಜಿಲ್ಲೆಯ ಆಲಮಟ್ಟಿಗೆ ಡಿಸಿಎಂ ಶಿವಕುಮಾರ ಭೇಟಿ ನೀಡಿದ ಸಂದರ್ಭದಲ್ಲಿ ವಕೀಲರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ ವಕೀಲರು ಕೋರ್ಟ್ ಕಲಾಪದಿಂದ ದೂರ ಉಳಿದು ಪ್ರತಿಭಟನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ನ್ಯಾಯವಾದಿಗಳು ಡಿಸಿಎಂ ಶಿವಕುಮಾರ್ ಅವರು…