saptsagar_admin

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ಆಗ್ರಹ

ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ಜಿಲ್ಲಾ ಮಹಿಳಾ ಅಧ್ಯಕ್ಷೆ ಶಿಲ್ಪಾ ಮೇತ್ರಿ ಒತ್ತಾಯ ಸಪ್ತಸಾಗರ ವಾರ್ತೆ,ವಿಜಯಪುರ, ಜು. 18:ಬಂಟ್ವಾಳದಲ್ಲಿ ಯುವತಿ ಲಾವಣ್ಯ ಅವರನ್ನು ಸಾರ್ವಜನಿಕವಾಗಿ ಕ್ರೂರವಾಗಿ ಹತ್ಯೆಗೈದಿರುವ ಘಟನೆಗೆ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ತೀವ್ರವಾಗಿ ಖಂಡಿಸಿದೆ.ಸಮಿತಿಯ ವಿಜಯಪುರ ಜಿಲ್ಲಾ ಮಹಿಳಾ ಅಧ್ಯಕ್ಷೆ ಶಿಲ್ಪಾ ಮೇತ್ರಿ ಅವರು ಈ ಕುರಿತು ಪ್ರಕಟಣೆ ನೀಡಿ, ಮಹಿಳೆಯರ ಸುರಕ್ಷತೆಗೆ ಧಕ್ಕೆ ತರುವ ಇಂತಹ ಅಮಾನವೀಯ ಕೃತ್ಯಗಳು ನಾಗರಿಕ ಸಮಾಜವನ್ನು ತಲೆತಗ್ಗಿಸುವಂತಿವೆ ಎಂದು ಹೇಳಿದ್ದಾರೆ.ಲಾವಣ್ಯ ಅವರಿಗೆ ನಿರಂತರ…

Read More

‘ನಾನು’ ಕನ್ನಡ ವೆಬ್ ಸರಣಿಗೆ ಮುಹೂರ್ತ

ಸಪ್ತಸಾಗರ ವಾರ್ತೆ,ಮೈಸೂರು, ಜು.17: ಜೆ.ಕೆ. ಪ್ರೊಡಕ್ಷನ್, ಮೈಸೂರು ನಿರ್ಮಿಸುತ್ತಿರುವ ‘ನಾನು’ ಕನ್ನಡ ವೆಬ್ ಸರಣಿಯ ಚಿತ್ರೀಕರಣಕ್ಕೆ ನಗರದ ಬಂಬು ಬಜಾರ್ ರಸ್ತೆಯ ಶ್ರೀ ಸತ್ಯನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತ ನೆರವೇರಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಛಾಯಾಗ್ರಾಹಕ ಸದಾಶಿವ ಹಿರೇಮಠ ಅವರು ವೆಬ್ ಸರಣಿಗೆ ಶುಭ ಹಾರೈಸಿ, ಉತ್ತಮ ಕಥಾಹಂದರದೊಂದಿಗೆ ಪ್ರೇಕ್ಷಕರ ಮನಗೆಲ್ಲಲಿ ಎಂದು ಆಶಿಸಿದರು.ನಿರ್ದೇಶಕ ಕಲಿ ಮಾತನಾಡಿ, ಇಂದಿನ ಸಮಾಜದಲ್ಲಿ ಯುವಜನರ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ, ಅವರ ಜೀವನದಲ್ಲಿ ನಡೆಯುತ್ತಿರುವ ಬದಲಾವಣೆಗಳು ಹಾಗೂ…

Read More

ಯುವಕರಿಗೆ ವೃತ್ತಿಪರ ಕ್ರೀಡೆಗೆ ಪ್ರೋತ್ಸಾಹ: ಸುನೀಲಗೌಡ ಪಾಟೀಲ

ಬಬಲೇಶ್ವರ ಪ್ರೀಮಿಯರ್ ಲೀಗ್-2 ಸಮಾರೋಪ; ಗೇಮ್ ಚೇಂಜರ್ ಜೈನಾಪುರ ಚಾಂಪಿಯನ್ ಸಪ್ತಸಾಗರ ವಾರ್ತೆ,ವಿಜಯಪುರ, ಜು. 16:ಯುವಕರು ವೃತ್ತಿಪರ ಕ್ರೀಡಾಪಟುಗಳಾಗಿ ಬೆಳೆಯಲು ಅಗತ್ಯ ಪ್ರೋತ್ಸಾಹ ಹಾಗೂ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.ಬಬಲೇಶ್ವರದಲ್ಲಿ ದಿ. ಶ್ರೀ ಬಿ.ಎಂ. ಪಾಟೀಲ ಅವರ ಸ್ಮರಣಾರ್ಥ ಶಾಂತವೀರ ಕ್ರಿಕೆಟ್ ಕ್ಲಬ್ ಹಾಗೂ ಶ್ರೀ ಸುನೀಲಗೌಡ ಪಾಟೀಲ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ನಡೆದ ಬಬಲೇಶ್ವರ ಪ್ರೀಮಿಯರ್ ಲೀಗ್ (ಬಿಪಿಎಲ್) ಸೀಸನ್-2 ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ…

Read More

ಅವಧಿಗೆ ಮುನ್ನವೇ ಶೇ.100 ಸಾಧನೆ: ಬಬಲೇಶ್ವರದ ಮತಗಟ್ಟೆ ಅಧಿಕಾರಿಗಳಿಗೆ ಸನ್ಮಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು.16:2026ರ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ನಿಗದಿತ ಅವಧಿಗೂ ಮುನ್ನವೇ ಶೇ.100ರಷ್ಟು ಪ್ರಗತಿ ಸಾಧಿಸಿದ ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ಮತಗಟ್ಟೆ ಮೇಲ್ವಿಚಾರಕರನ್ನು ಗುರುವಾರ ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.ಮತದಾರರ ಪಟ್ಟಿ ಪರಿಷ್ಕರಣೆಯ ಅಂಗವಾಗಿ ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಿಟೈಜೇಶನ್ ಕಾರ್ಯವನ್ನು ಸಮಯಕ್ಕಿಂತ ಮುಂಚಿತವಾಗಿ ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಗೌರವ ಸಲ್ಲಿಸಲಾಯಿತು.29-ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಭಾಗ ಸಂಖ್ಯೆ 84ರ ಮತಗಟ್ಟೆ…

Read More

ವಿಜಯಪುರದಲ್ಲಿ ಜು.18-19ರಂದು ಶ್ರೀ ಅಂಬಾ ಭವಾನಿ ಜಾತ್ರಾ ಮಹೋತ್ಸವ

ಸಪ್ತಸಾಗರ ವಾರ್ತೆ,ವಿಜಯಪುರ, ಜು.16:ವಿಜಯಪುರ ನಗರದ ಪ್ರಸಿದ್ಧ ಶ್ರೀ ಅಂಬಾ ಭವಾನಿ ವಾರ್ಷಿಕ ಜಾತ್ರಾ ಮಹೋತ್ಸವ ಜುಲೈ 18 ಹಾಗೂ 19ರಂದು ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ನಡೆಯಲಿದ್ದು, ಜಾತ್ರೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ರಾಷ್ಟ್ರೀಯ ಬಂಜಾರ ಪರಿಷದ ಅಧ್ಯಕ್ಷ ಪ್ರಕಾಶ ಬಾಳು ಚವ್ಹಾಣ ತಿಳಿಸಿದ್ದಾರೆ.ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 18ರಂದು ಬೆಳಿಗ್ಗೆ 9 ಗಂಟೆಗೆ ಸೋಲಾಪುರ ರಸ್ತೆಯಲ್ಲಿರುವ ಮರಗಟ್ಟೆ ಓಣಿಯಿಂದ ಶ್ರೀ ಅಂಬಾ ಭವಾನಿ ದೇವಿಯ ಮೂರ್ತಿಯ ಭವ್ಯ ಮೆರವಣಿಗೆ…

Read More

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಮೂವರಿಗೆ ವಾರ್ಷಿಕ ಗೌರವ, ಮೂವರಿಗೆ ಯುವ ಪ್ರಶಸ್ತಿ ಸಪ್ತಸಾಗರ ವಾರ್ತೆ,ವಿಜಯಪುರ, ಜು.16:ಹಲಸಂಗಿ ಗೆಳೆಯರ ಪ್ರತಿಷ್ಠಾನದ 2022, 2023 ಹಾಗೂ 2024ನೇ ಸಾಲಿನ ವಾರ್ಷಿಕ ಗೌರವ ಮತ್ತು ಯುವ ಪ್ರಶಸ್ತಿಗಳನ್ನು ಪ್ರತಿಷ್ಠಾನದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ ಕೆ. ಪ್ರಕಟಿಸಿದ್ದಾರೆ.ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಷ್ಠಾನದ ಸಭೆಯಲ್ಲಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ಅರ್ಹ ಸಾಹಿತಿಗಳು ಹಾಗೂ ಯುವ ಬರಹಗಾರರನ್ನು ಅಂತಿಮವಾಗಿ ಆಯ್ಕೆ ಮಾಡಲಾಗಿದೆ.ಜಾನಪದ, ಸಮಗ್ರ ಸಾಹಿತ್ಯ ಹಾಗೂ ಸಂಶೋಧನೆ-ವಿಮರ್ಶೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಹಿತಿಗಳಿಗೆ ವಾರ್ಷಿಕ…

Read More

ಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯ.

ಸ್ವಇಚ್ಛೆಯಿಂದ ಭೂಮಿ ನೀಡುವವರಿಗೆ ಪರಿಹಾರ ಸಪ್ತಸಾಗರ ವಾರ್ತೆ,ಬೆಂಗಳೂರು, ಜು.15: “ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸರ್ಕಾರವು ಯಾವುದೇ ರೈತರಿಂದ ಬಲವಂತವಾಗಿ ಜಮೀನು ಪಡೆಯುವುದಿಲ್ಲ. ಸ್ವಇಚ್ಛೆಯಿಂದ ಮುಂದೆ ಬಂದು ಭೂಮಿ ಕೊಟ್ಟವರಿಗೆ ಪರಿಹಾರ ನೀಡುತ್ತೇವೆ. ಈ ವಿಚಾರದಲ್ಲಿ ರೈತರ ಅಹವಾಲು, ಅಭಿಪ್ರಾಯ ಪಡೆಯಲು ಸಮಿತಿ ರಚಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿ ಶಿವಕುಮಾರ್ ಅವರು ಮಾತನಾಡಿದರು. ಯಾವ ಪ್ರತಿಭಟನೆ ಅಗತ್ಯವಿಲ್ಲ, ನಿಮ್ಮ ಜಮೀನಿನಲ್ಲಿ ನೆಮ್ಮದಿಯಾಗಿರಿ “ಯಾರ ಆಸ್ತಿಯನ್ನು ನಾವು ಬಲವಂತವಾಗಿ…

Read More

ರಜಪೂತ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಸರ್ಕಾರಕ್ಕೆ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 15:ಕರ್ನಾಟಕದಲ್ಲಿ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ರಾಜಪೂತ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ರಜಪೂತ ಅಭಿವೃದ್ಧಿ ಮಂಡಳಿ ಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಶ್ರೀ ವೀರ ಮಹಾರಾಣಾ ಪ್ರತಾಪಸಿಂಹ ಜಿಲ್ಲಾ ರಜಪೂತ ಸೇವಾ ಅಭಿವೃದ್ಧಿ ಸಂಘದ ವತಿಯಿಂದ ಅಪರ ಜಿಲ್ಲಾಧಿಕಾರಿಗಳ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.ಜಿಲ್ಲಾ ಅಧ್ಯಕ್ಷ ಪರಶುರಾಮ ರಜಪೂತ ಮಾತನಾಡಿ, ರಾಜ್ಯದಲ್ಲಿ ಲಕ್ಷಾಂತರ ಜನಸಂಖ್ಯೆ ಹೊಂದಿರುವ ರಾಜಪೂತ ಸಮಾಜವು ಶಿಕ್ಷಣ, ಉದ್ಯೋಗ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ…

Read More

ವಿಜಯಪುರದಲ್ಲಿ ಬರ ಅಧ್ಯಯನಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.14: ರಾಜ್ಯದಲ್ಲಿ ಉಂಟಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಂಗಳವಾರ ವಿಜಯಪುರ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ರೈತರನ್ನು ಭೇಟಿ ಮಾಡಿ ಬೆಳೆ ಹಾನಿ, ನೀರಿನ ಸಮಸ್ಯೆ ಹಾಗೂ ಕೃಷಿ ಸಂಕಷ್ಟದ ಕುರಿತು ಮಾಹಿತಿ ಸಂಗ್ರಹಿಸಿದರು.ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಜೆಡಿಎಸ್ ರಚಿಸಿರುವ ವಿಶೇಷ ಅಧ್ಯಯನ ತಂಡದ ನೇತೃತ್ವದಲ್ಲಿ ಈ ಪ್ರವಾಸ ನಡೆಯಿತು. ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ರೈತರೊಂದಿಗೆ…

Read More

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ: ಡಿಎಚ್‌ಒ ಡಾ. ಸಂಪತಕುಮಾರ ಗುಣಾರಿ

ಸಪ್ತಸಾಗರ ವಾರ್ತೆ ವಿಜಯಪುರ, ಜು. 14:ಆರೋಗ್ಯಕರ ಸಮಯದಲ್ಲಿ ಗರ್ಭಧಾರಣೆ ಹಾಗೂ ಮಕ್ಕಳ ನಡುವೆ ಸೂಕ್ತ ಅಂತರ ಕಾಯ್ದುಕೊಳ್ಳುವ ಮೂಲಕ ತಾಯಿ ಮತ್ತು ಮಕ್ಕಳ ಆರೋಗ್ಯವನ್ನು ಉತ್ತಮಗೊಳಿಸಬಹುದು. ಯೋಜಿತ ಕುಟುಂಬದಿಂದ ಕುಟುಂಬದ ಸುಂದರ ಭವಿಷ್ಯ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಪತಕುಮಾರ ಗುಣಾರಿ ಹೇಳಿದರು.ಜಿಲ್ಲಾ ಆಸ್ಪತ್ರೆ ಆವರಣದ ನರ್ಸಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ತಾಯಿ ಮರಣ ಪ್ರಮಾಣ ಹಾಗೂ ಗರ್ಭಧಾರಣೆಗೆ ಸಂಬಂಧಿಸಿದ ತೊಂದರೆಗಳನ್ನು ತಡೆಗಟ್ಟುವುದೇ…

Read More