saptsagar_admin

ರೈತರಿಗೆ ಕುರಿ, ಆಡು ಹಾಗೂ ಕೋಳಿ ಸಾಕಾಣಿಕೆ ತರಬೇತಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ರೈತ-ರೈತ ಮಹಿಳೆಯರಿಗೆ ಸೆ.8ರಿಂದ 13ರವರೆಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕುರಿ-ಆಡು ಹಾಗೂ ಕೋಳಿ ಸಾಕಾಣಿಕ ತರಬೇತಿ ಆಯೋಜಿಸಲಾಗಿದೆ.6 ದಿನಗಳ ಕಾಲ ನಡೆಯುವ ಈ ತರಬೇತಿಯಲ್ಲಿ ಭಾಗವಹಿಸುವ ಆಸಕ್ತ ರೈತರು ಸೆ. 6ರೊಳಗೆ ನೋಂದಾಯಿಸಿಕೊಳ್ಳಬೇಕು. ನೋಂದಣಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಗೀತಾ ಭಜಂತ್ರಿ ಮೊ: 9986054750 ಅವರನ್ನು ಸಂಪರ್ಕಿಸುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ…

Read More

ಕುರಿಗಾರರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30:ಅರಣ್ಯ ಇಲಾಖೆಯಿಂದ ಕುರಿಗಾರರ ಮೇಲೆ ಆಗುತ್ತಿರುವ ಕಿರುಕುಳ, ದೌರ್ಜನ್ಯ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕುರಿಗಾರರ ಸಂಘದ ಅಧ್ಯಕ್ಷ ಬೀರಪ್ಪ ಜುಮನಾಳ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.ಕೆಲವು ಕಡೆ ಅರಣ್ಯ ಪ್ರದೇಶಗಳಲ್ಲಿ ವಿನಾಕಾರಣ ಕುರಿಗಾರರ ಮೇಲೆ ದಬ್ಬಾಳಿಕೆ, ಬಲತ್ಕಾರ ನಡೆದಿರುವುದು ಕಂಡುಬರುತ್ತದೆ. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು ತಮ್ಮ ಸಿಬ್ಬಂದಿಗಳಿಗೆ ಸರ್ಕಾರದ ನೀತಿ ನಿಯಮಗಳ ಹೊರತುಪಡಿಸಿ ನಮ್ಮ ಕುರಿಗಾರರೊಂದಿಗೆ ಸಂಘರ್ಷಕ್ಕೆ ಇಳಿಯಬಾರದು ಎಂದು ಸೂಕ್ತ ತಿಳುವಳಿಕೆ ನೀಡಬೇಕೆಂದು ಅವರು ಕೇಳಿಕೊಂಡಿದ್ದಾರೆ.ಕುರಿಗಾರರು ಅನಕ್ಷರಸ್ಥರು, ಮುಗ್ಧರು…

Read More

ಜಿಲ್ಲಾ ಗ್ರಂಥಾಲಯಗಳಿಗೆ ಪಠ್ಯಪುಸ್ತಕ ಒದಗಿಸಲು ಮನವಿ

ಸಪ್ತಸಾಗರ ವಾರ್ತೆ ವಿಜಯಪುರ,ಆ. 30:ನಗರ ಕೇಂದ್ರ ಗ್ರಂಥಾಲಯಕ್ಕೆ ತ್ವರಿತ ಗತಿಯಲ್ಲಿ ಪಠ್ಯಪುಸ್ತಕಗಳನ್ನು ಒದಗಿಸಬೇಕು ಎಂದು ಕರ್ನಾಟಕ ನವ ನಿರ್ಮಾಣ ವೇದಿಕೆ ಘಟಕ ಹಾಗೂ ವಿಜಯಪುರ ಜಿಲ್ಲಾ ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿಗಳಿಗೆ ಶನಿವಾರ ಮನವಿ ಸಲ್ಲಿಸಲಾಯಿತು.ವೇದಿಕೆಯ ರಾಜ್ಯಾಧ್ಯಕ್ಷ ಶೇಷರಾವ ಮಾನೆ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕೆ. ಆನಂದ ಅವರಿಗೆ ಮನವಿ ಸಲ್ಲಿಸಲಾಯಿತು.ಗೌರವ ಅಧ್ಯಕ್ಷ, ನ್ಯಾಯವಾದಿ ಎಂ.ಎಂ. ಖಲಾಸಿ ಮಾತನಾಡಿ, ಪ್ರಸಕ್ತ ಸಾಲಿಗಾಗಿ ಕರ್ನಾಟಕ ಸರಕಾರವು ಪುಸ್ತಕ ಖರೀದಿಗಾಗಿ ಬಿಡುಗಡೆ ಮಾಡಿದ ಅನುದಾನ ಸದ್ಭಳಕೆಯಾಗದೆ ಜಿಲ್ಲೆಯ ಸಮಸ್ತ…

Read More

ಡೋಣಿ ನದಿಗೆ ಜಿಲ್ಲಾಧಿಕಾರಿ ಭೇಟಿ, ಪ್ರವಾಹ ತಡೆಗೆ ಕ್ರಮಗಳ ಕುರಿತು ಪರಿಶೀಲನೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಶನಿವಾರ ಜಿಲ್ಲೆಯ ಸಾರವಾಡ ಬಳಿ ಡೋಣಿ ನದಿಗೆ ಭೇಟಿ ನೀಡಿ ಪರಿಶೀಲಿಸಿದರು.ಡೋಣಿ ನದಿಯ ಪ್ರವಾಹ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಾ. ಆನಂದ ಅವರು ಜಿಲ್ಲಾ ಪಂಚಾಯತಿಯ‌ ಮುಖ್ಯ‌ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರೊಂದಿಗೆ ಜಂಟಿಯಾಗಿ ಜಿಲ್ಲೆಯ ಸಾರವಾಡದ ಹತ್ತಿರದ ಡೋಣಿ ನದಿಯ ಸೇತುವೆಯ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಪ್ರವಾಹ ತಡೆಗೆ ಅನುಸರಿಸಬೇಕಾದ ಕ್ರಮಗಳ…

Read More

ಅವೈಜ್ಞಾನಿಕ ಮೀಸಲಾತಿ ಕೈಬಿಡಿ, ಎಲ್ಲರಿಗೂ ಸಮಾನ ಮೀಸಲಾತಿ ನೀಡಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30 :ಒಳಮೀಸಲಾತಿ ವರ್ಗೀಕರಣ ಅವೈಜ್ಞಾನಿಕವಾಗಿದೆ. ಅವೈಜ್ಞಾನಿಕ ಒಳಮೀಸಲಾತಿ ರದ್ದುಗೊಳಿಸಿ, ಕಲ್ಪಿಸುವುದಾದರೆ ಎಲ್ಲರಿಗೂ ಸಮಾನವಾಗಿ ಮೀಸಲಾತಿ ನೀಡಿ ಎಂದು ಬಂಜಾರಾ, ಕೊರಚ, ಕೊರಮ, ಭೋವಿ ಸಮುದಾಯದ ಮುಖಂಡರು ಸರ್ಕಾರಕ್ಕೆ ಒತ್ತಾಯಿಸಿದರು.ವಿವಿಧ ಸಮಾಜ ಮುಖಂಡರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರಕ್ಕೆ ಒತ್ತಾಯಿಸಿದರು.ಈ ಎಲ್ಲ ಸಂದೇಶವನ್ನು ಸರ್ಕಾರಕ್ಕೆ ತಲುಪಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ ೧೦ ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂಬ ಮಾಹಿತಿಯನ್ನು ತಿಳಿಸಿದರು.ಮಾಜಿ ಶಾಸಕ ಮನೋಹರ ಐನಾಪೂರ, ಸ್ಪೃಶ್ಯ, ಅಸ್ಪೃಶ್ಯ ಎಂಬ…

Read More

ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಲು ಸಚಿವ ಶಿವಾನಂದ ಪಾಟೀಲರಿಗೆ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30:ವಿಜಯಪುರ ನಗರದಲ್ಲಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಬೇಡ. ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಬೇಕು ಎಂದು ಹೋರಾಟ ಸಮಿತಿ ಪದಾಧಿಕಾರಿಗಳು ಶನಿವಾರ ಜವಳಿ, ಕಬ್ಬು, ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.ಸರಕಾರದಿಂದ ಉದ್ದೇಶಿತ ಪಿಪಿಪಿ ಮಾದರಿಯಡಿ ಖಾಸಗಿ ಸಹಭಾಗಿತ್ವದಡಿ ವೈದ್ಯಕೀಯ ಕಾಲೇಜು ಆರಂಭಿಸುವ ಹುನ್ನಾರವನ್ನು ಕೈ ಬಿಡಬೇಕು ಎಂದು ಮನವಿ ಸಲ್ಲಿಸಲಾಯಿತು. ಜೊತೆಗೆ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಮುಖ್ಯಂತ್ರಿ ಮೇಲೆ…

Read More

ಶೀಘ್ರದಲ್ಲೇ ಹುಬ್ಬಳ್ಳಿಯಲ್ಲಿರಾಜ್ಯ ಮಟ್ಟದ ಅಹಿಂದ ವಿಚಾರ ಸಂಕಿರಣ:ಸೆ. 2ರಂದು ಪೂರ್ವಭಾವಿ ಸಭೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ಶೀಘ್ರದಲ್ಲೇ ಹುಬ್ಬಳ್ಳಿಯಲ್ಲಿ. ನಡೆಯಲಿರುವ ರಾಜ್ಯ ಮಟ್ಟದ ವಿಚಾರ ಸಂಕಿರಣದ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಪೂರ್ವಭಾವಿ ಸಭೆ ಸೆ. 2ರಂದು ಬೆಳಗ್ಗೆ 11 ಗಂಟೆಗೆ ಆಲಮಟ್ಟಿ ಸರ್ಕ್ಯೂಟ್ ಹೌಸ್ ನಲ್ಲಿ ನಡೆಯಲಿದೆ.ಅಹಿಂದ ಶುರುವಿನಲ್ಲಿ ದುಡಿದವರು, ಜೊತೆಗೆ ನಡೆದವರು ಮತ್ತು ಈಗ ಅದರ ಆಶಯಗಳನ್ನು ಹೊತ್ತು ಸಾಗುತ್ತಿರುವವರು ಈ ಸಭೆಯಲ್ಲಿ ತಪ್ಪದೇ ಭಾಗವಹಿಸಬೇಕು ಎಂದು ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ವ್ಯವಸ್ಥಿತವಾಗಿ ಸಮೀಕ್ಷೆ ಕಾರ್ಯ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ.ಆನಂದ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.29:ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ ಕೈಗೊಳ್ಳಲು ಈಗಾಗಲೇ ಜಿಲ್ಲೆಯಲ್ಲಿ ಮೊದಲನೆ ಹಂತವಾಗಿ ಜಿಯೋ ಟ್ಯಾಗಿಂಗ್ ಕಾರ್ಯ ಪ್ರಗತಿಯಲ್ಲಿದ್ದು, ಎರಡನೇ ಹಂತದಲ್ಲಿ ಸೆಪ್ಟಂಬರ್ 20 ರಿಂದ ಅಕ್ಟೋಬರ್ 7 ರವರೆಗೆ ಸಮೀಕ್ಷಾ ಕಾರ್ಯ ನಡೆಯಲಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಗಣತಿದಾರರನ್ನು ನೇಮಿಸಿ ಪಟ್ಟಿಯನ್ನು ಅಂತಿಮಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿವಿಧ ಅಧಿಕಾರಿಗಳೊಂದಿಗೆ…

Read More

ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿ:ಕೋರಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಕ್ರೀಡಾ ವಿಭಾಗದ ನಿರ್ದೇಶಕ ಎಸ್.ಎಸ್. ಕೋರಿ ಹೇಳಿದ್ದಾರೆ.ಶುಕ್ರವಾರ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ಪಬ್ಲಿಕ್ ಸಿ.ಬಿ.ಎಸ್.ಇ ಶಾಲೆಯ ವತಿಯಿಂದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಧುಮೇಹ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಕ್ರೀಡೆ ಮತ್ತು ಆರೋಗ್ಯ ಒಂದಕ್ಕೊಂದು ಪೂರಕವಾಗಿವೆ….

Read More

ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಕ್ರೀಡೆಗಳು ಪೂರಕ:ಜಯರಾಜ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 29: ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂರಕವಾಗಿವೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ. ಶುಕ್ರವಾರ ಡೀಮ್ಡ್ ವಿಶ್ವವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವಪ್ರಸಿದ್ಧ ಹಾಕಿ ಕ್ರೀಡಾಪಟು ಮೇಜರ್ ಧ್ಯಾನಚಂದ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಮಾತನಾಡಿದರು.ಇದೇ ವೇಳೆ ವಿದ್ಯಾರ್ಥಿಗಳಿಗಾಗಿ ಬ್ಯಾಸ್ಕೆಟ್‌ಬಾಲ್ ಮತ್ತು ಚೆಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸುಭಗಾ ಅವರು ಫಿಟ್ ಇಂಡಿಯಾ…

Read More