saptsagar_admin

ಸೆ. 1ರಿಂದ ಬಸವ ಸಂಸ್ಕೃತಿ ಅಭಿಯಾನ ಆರಂಭ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28 :ಬಸವ ಸಂಸ್ಕೃತಿ ವಿಶ್ವ ಸಂಸ್ಕೃತಿ. ಈ ಸಂಸ್ಕೃತಿಯ ಶ್ರೇಷ್ಠತೆಯ ಪ್ರಸಾರಕ್ಕಾಗಿ ಬಸವ ಸಂಸ್ಕೃತಿ ಅಭಿಯಾನವನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ನೇತೃತ್ವದಲ್ಲಿ ಸಂಘಟಿಸಲಾಗಿದ್ದು, ಸೆ.೧ ರಿಂದ ಬಸವ ಜನ್ಮಭೂಮಿ ಬಸವನ ಬಾಗೇವಾಡಿಯಿಂದ ಈ ಅಭಿಯಾನ ಆರಂಭಗೊಳ್ಳಲಿದ್ದು ಅ.೧ರವರೆಗೆ ಬಸವ ಸಂಸ್ಕೃತಿ ಅಭಿಯಾನ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಲುಪಲಿದೆ ಎಂದು ಬಸವನ ಬಾಗೇವಾಡಿ ವಿರಕ್ತಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಗಳು ಹೇಳಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಾದಿ ಶರಣರ ಆಶಯಗಳನ್ನು ಬಿತ್ತುವ ದೃಷ್ಟಿಯಿಂದ ಈ…

Read More

ವಿಡಿಸಿಸಿ ಬ್ಯಾಂಕ್ ಗೆ ೨೫.೧೮ ಕೋಟಿ ರೂ. ನಿವ್ವಳ ಲಾಭ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28 :ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ೨೫.೧೮ ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಹಾಗೂ ಸಚಿವ ಶಿವಾನಂದ ಪಾಟೀಲ ತಿಳಿಸಿದರು.ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಸಕ್ತ ವರ್ಷ ಬ್ಯಾಂಕು ಗಳಿಸಿರುವ ನಿವ್ವಳ ಲಾಭದ ಪ್ರಮಾಣ ಬ್ಯಾಂಕಿನ ಇತಿಹಾಸದಲ್ಲಿಯೇ ಗರಿಷ್ಠವಾಗಿದ್ದು, ವಾಸ್ತವವಾಗಿ ಬ್ಯಾಂಕು ೩೩.೭೧ ಕೋಟಿ ರೂ. ಲಾಭ ಗಳಿಸಿದ್ದು, ಅದರಲ್ಲಿ ೮.೫೩…

Read More

ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ವಿರೋಧಿಸಿ ಹೋರಾಟ ಸಮಿತಿ ಅಸ್ತಿತ್ವಕ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 28:ಜಿಲ್ಲೆಗೆ ಖಾಸಗಿ ಸಹಭಾಗಿತ್ವದಲ್ಲಿ ಆರಂಭಗೊಳ್ಳಲಿರುವ ವೈದ್ಯಕೀಯ ಮಹಾ ವಿದ್ಯಾಲಯಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಗುರುವಾರ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲೆಯ ಸಾಹಿತಿಗಳು, ಚಿಂತಕರು, ದಲಿತ ಮತ್ತು ಕನ್ನಡಪರ ಹೋರಾಟಗಾರರು, ಕಾರ್ಮಿಕ, ವಿದ್ಯಾರ್ಥಿ ಯುವಜನ ಮಹಿಳಾ ಸಂಘಟನೆಯ ಮುಖಂಡರುಗಳು ಸಭೆ ಸೇರಿ ಖಾಸಗಿ ಸಹಭಾಗಿತ್ವವನ್ನು ವಿರೋಧಿಸಬೇಕು ಇದರ ವಿರುದ್ದ ಹೋರಾಟ ಮಾಡಬೇಕು ಎಂದು ಒಮ್ಮತದಿಂದ ನಿರ್ಧರಿಸಲಾಯಿತು.ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಸಂಘಟನೆಗಳನ್ನೊಳಗೊಂಡ ‘ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿ, ವಿಜಯಪುರ’ ಸಮಿತಿಯನ್ನು ರಚಿಸಲಾಯಿತು….

Read More

ಸಾಂಸ್ಕೃತಿಕ ಪರಂಪರೆ-ಶೈಕ್ಷಣಿಕ ತಿಳಿವಳಿಕೆ ಹೇಳುವ ಗಣೇಶ ಹಬ್ಬ: ಶಂಕರ ಹುಣಶ್ಯಾಳ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಗಣೇಶ ಹಬ್ಬವು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು, ತಂಡದ ಭಾವನೆ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸುತ್ತದೆ ಎಂದು ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಹೇಳಿದರು.ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಈ ಹಬ್ಬವು ಆಧ್ಯಾತ್ಮಿಕತೆ, ಸಾಂಸ್ಕೃತಿಕ ಪರಂಪರೆ ಮತ್ತು ಶೈಕ್ಷಣಿಕ ತಿಳುವಳಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸ್ವಾತಂತ್ರ್ಯ…

Read More

ಸಾಂಸ್ಕೃತಿಕ ಪರಂಪರೆ-ಶೈಕ್ಷಣಿಕ ತಿಳಿವಳಿಕೆ ಹೇಳುವ ಗಣೇಶ ಹಬ್ಬ: ಶಂಕರ ಹುಣಶ್ಯಾಳ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಗಣೇಶ ಹಬ್ಬವು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು, ತಂಡದ ಭಾವನೆ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸುತ್ತದೆ ಎಂದು ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಹೇಳಿದರು.ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಈ ಹಬ್ಬವು ಆಧ್ಯಾತ್ಮಿಕತೆ, ಸಾಂಸ್ಕೃತಿಕ ಪರಂಪರೆ ಮತ್ತು ಶೈಕ್ಷಣಿಕ ತಿಳುವಳಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸ್ವಾತಂತ್ರ್ಯ…

Read More

ಧಾರಾಕಾರ ಮಳೆ: ಮನೆ ಕುಸಿದು ಮೂವರಿಗೆ ಗಾಯ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಜಿಲ್ಲೆಯಲ್ಲಿ ಗುರುವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿಮುದ್ದೇಬಿಹಾಳ ತಾಲೂಕಿನ ಹಿರೇಮುರಾಳ ಗ್ರಾಮದಲ್ಲಿ ಮನೆ ಕುಸಿದು ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.ಮಲ್ಲವ್ವ ರುದ್ರಪ್ಪ ಗುಂಡುಪಲ್ಲೆ, ರುದ್ರಪ್ಪ ತಮ್ಮಣ್ಣ ಗುಂಡುಪಲ್ಲೆ ಹಾಗೂ ಶಾರದಾ ರುದ್ರಪ್ಪ ಗುಂಡುಪಲ್ಲೆ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಿರೇಮುರಾಳ ಗ್ರಾಮದಲ್ಲಿ ಸುಮಾರು ರಾತ್ರಿ 12-30 ಗಂಟೆ ಸುಮಾರಿಗೆ ಮನೆಯಲ್ಲಿ ಮಲಗಿದ್ದ ಜನರ ಮೇಲೆ ಮನೆ ಕುಸಿದಿದೆ. ಮೂವರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ.

Read More

ಚಿತ್ರದುರ್ಗದಲ್ಲಿ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ” ಕುರಿತು ವಿಚಾರಸಂಕಿರಣ

ಸಪ್ತಸಾಗರ ವಾರ್ತೆ ಬೆಂಗಳೂರು, ಆ. 28:ಕರ್ನಾಟಕ ಮಾಧ್ಯಮ ಅಕಾಡೆಮಿಯು ಚಿತ್ರದುರ್ಗ ಪತ್ರಕರ್ತರ ಭವನದ ಡಾ. ಬಿ.ಆರ್.‌ ಅಂಬೇಡ್ಕರ್‌ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್‌.ಸಿ. ಎಸ್‌.ಟಿ. ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಗಸ್ಟ್‌ 30 ರಂದು “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ” ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಖಾತೆ ಹಾಗೂ ಚಿತ್ರದುರ್ಗ ಜಿಲ್ಲಾ…

Read More

ಕಳುವಾದ ಅಡಿವಿಟ್ಟ ಚಿನ್ನಕ್ಕೆ ಪ್ರಸ್ತುತ ಮಾರುಕಟ್ಟೆ ಬೆಲೆ ನೀಡಬೇಕೆಂದು ಆಗ್ರಹಿಸಿ ಗ್ರಾಹಕರಿಂದ ಬ್ಯಾಂಕ್ ಎದುರು ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಬ್ಯಾಂಕಿನಲ್ಲಿ ಕಳುವಾದ ಚಿನ್ನಕ್ಕೆ ಪರಿಹಾರ ರೂಪದಲ್ಲಿ ಪ್ರಸ್ತುತ ಮಾರುಕಟ್ಟೆ ಬೆಲೆ ನೀಡಬೇಕೆಂದು ಆಗ್ರಹಿಸಿ ಗ್ರಾಹಕರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಕೆನೆರಾ ಬ್ಯಾಂಕ್ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ.ಕಳೆದ ಮೇ 25ರಂದು ಮನಗೂಳಿ ಕೆನರಾ ಬ್ಯಾಂಕ್ ನಲ್ಲಿ ಕಳ್ಳತನ ಪ್ರಕರಣ ನಡೆದಿತ್ತು. ಕಳ್ಳರು ಈ ಬ್ಯಾಂಕಿನಿಂದ 58 ಕೆಜಿಗೂ ಅಧಿಕ ಚಿನ್ನ, 5 ಲಕ್ಷ ನಗದು ಹಣ ಕದ್ದು ಪರಾರಿಯಾಗಿದ್ದ‌ರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಮ್ಯಾನೇಜರ್ ಸೇರಿ 15…

Read More

ಅಸ್ಮಿತ ಖೇಲೋ ಇಂಡಿಯಾ ಯೋಗಸನ ಕ್ರೀಡಾಕೂಟದಲ್ಲಿ ಜಿಲ್ಲೆಗೆ ಬಂಗಾರ ಪದಕ

ಸಪ್ತಸಾಗರ ವಾರ್ತೆ ವಿಜಯಪುರ, ಆ. 27:ಚಿತ್ರದುರ್ಗದ ಮುರುಘಾಮಠದ ಅನುಭವ ಮಂಟಪದಲ್ಲಿ ಆ.22 ಮತ್ತು 23 ರಂದು ನಡೆದ ಅಸ್ಮಿತ ಖೇಲೋ ಇಂಡಿಯಾ ಮಹಿಳಾ ಯೋಗಾಸನ ಕ್ರೀಡಾಕೂಟದಲ್ಲಿ ಜಿಲ್ಲೆಯ ಬಾಲಿಕೆಯರು ಚಿನ್ನದ ಪದಕ ಪಡೆದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.18 ವರ್ಷದ ಒಳಗಿನ ಬಾಲಕಿಯರ ಆಟಿಸ್ಟಿಕ್ಕ ವಿಭಾದಲ್ಲಿ ಬಂಗಾರ ಪದಕ ಪಡೆದಿದ್ದು, ಕುಮಾರಿಯರಾದ ಶ್ರೀ ಲಕ್ಷ್ಮಿ ಮ್ಯಾಗೇರಿ, ಮರಿಯಮ್ಮ ಹರಿಜನ, ಪ್ರಿಯಾ ಚವ್ಹಾಣ, ಸುಮನ ಪೋಹಿಟೆ, ಹರ್ಷಿತಾ ಹರಿಜನ ತಂಡದೊಂದಿಗೆ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ….

Read More