saptsagar_admin

ಆಗಸ್ಟ್‌ನಲ್ಲಿ ಅದ್ದೂರಿ ರಾಯಣ್ಣ ಉತ್ಸವ: ಸಿದ್ಧತೆ ಆರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 14:ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಸ್ಮರಣಾರ್ಥ ರಾಯಣ್ಣ ಉತ್ಸವವನ್ನು ಆಗಸ್ಟ್ ತಿಂಗಳಲ್ಲಿ ವಿಜಯಪುರ ನಗರದ ದರಬಾರ ಪ್ರೌಢಶಾಲೆ ಮೈದಾನದಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುವುದು ಎಂದು ಹುಲಜಂತಿ ಪಟ್ಟದ ಮಹಾಳಿಂಗರಾಯ ಮಹಾರಾಯರು ತಿಳಿಸಿದರು.ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ಸವವನ್ನು ಯಶಸ್ವಿಯಾಗಿ ನಡೆಸಲು ಇಂದಿನಿಂದಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಲಾಗಿದ್ದು, ಸಮಾಜದ ಎಲ್ಲ ವರ್ಗಗಳ ಸಹಕಾರ ಅಗತ್ಯ ಎಂದರು.ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ…

Read More

ಜಿಲ್ಲೆಯಲ್ಲಿ 19,07,583 ಗಣತಿ ನಮೂನೆ ವಿತರಣೆ.
ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ

ಸಪ್ತಸಾಗರ ವಾರ್ತೆ ವಿಜಯಪುರ: ಜು. 14 ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ.ಮತಗಟ್ಟೆ ಮಟ್ಟದ ಅಧಿಕಾರಿಗಳು ಜೂನ್ 30 ರಿಂದ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಯ ವಿತರಿಸುವ ಕಾರ್ಯ ಭರದಿಂದ ನಡೆಯುತ್ತಿದ್ದು, ಜುಲೈ 13 ರವರೆಗೆ ಜಿಲ್ಲೆಯ ಪ್ರಗತಿ ವರದಿಯ ಅನುಸಾರ 19,07,583 ಗಣತಿ ನಮೂನೆ ವಿತರಿಸಲಾಗಿದೆ. ಅವುಗಳಲ್ಲಿ 7,27,933 ಗಣಕೀಕರಣಗೊಂಡ ಗಣತಿ ನಮೂನೆಗಳಿವೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ತಿಳಿಸಿದ್ದಾರೆ.ಮತದಾರರ…

Read More

ಬಬಲೇಶ್ವರದಲ್ಲಿ ಎಸ್‌ ಐ ಆರ್‌ ಶೇ. 99.84 ರಷ್ಟು ಪ್ರಗತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 14:ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐಆರ್‌)ಗೆ ಸಂಬಂಧಿಸಿದಂತೆ ಮತಕ್ಷೇತ್ರದ ರಾಜಕೀಯ ಪಕ್ಷದ ಮುಖಂಡರೊಂದಿಗೆ ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಯಿತು.ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಮಾತನಾಡಿ, ಬಬಲೇಶ್ವರ ಮತಕ್ಷೇತ್ರದ ಒಟ್ಟು 2,25,779 ಮತದಾರರ ಪೈಕಿ 2,25,421 ಮತದಾರರಿಗೆ ಗಣತಿ ನಮೂನೆ ವಿತರಿಸಲಾಗಿದ್ದು, ಶೇ. 99.84 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.ಮತದಾರರಿಂದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ರುಜು ಪಡೆದು ಮರಳಿ ಬಿ.ಎಲ್.ಓ ತಂತ್ರಾಂಶದಲ್ಲಿ…

Read More

ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯ: ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಜು. 14: ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು.ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವ ಗುರಿ ಹೊಂದಿದ್ದು, ಆಡಳಿತ ಹಾಗೂ ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ವ್ಯಾಪಕವಾಗಿ ಅಳವಡಿಸಲಾಗುವುದು ಎಂದು ತಿಳಿಸಿದರು.ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯದ ಮೂಲಕ ಎಐ…

Read More

ವಿಜಯಪುರ ಜಿಲ್ಲಾ ಕೊರಮ ಕ್ಷೇಮಾಭಿವೃದ್ಧಿ ಸಂಘದ ನೂತನ ಜಿಲ್ಲಾ ಪದಾಧಿಕಾರಿಗಳ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 13:ಜಿಲ್ಲೆಯ ಕೊರಮ ಜನಾಂಗದ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸುತ್ತಿರುವ ವಿಜಯಪುರ ಜಿಲ್ಲಾ ಕೊರಮ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಪದಾಧಿಕಾರಿಗಳನ್ನು ಭಾನುವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣ ತೆರಿಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನೂತನ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ ಕೃಷ್ಣಜಿ. ಜಾಧವ್, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಬಸಪ್ಪ ಭಜಂತ್ರಿ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಹಣಮಂತ ಭಜಂತ್ರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನೂತನ ಪದಾಧಿಕಾರಿಗಳು ಕೊರಮ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಹೆಚ್ಚಿನ…

Read More

ಬರ ಅಧ್ಯಯನಕ್ಕೆ ನಿಖಿಲ್ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ತಂಡ ನಾಳೆ ವಿಜಯಪುರ ಜಿಲ್ಲೆ ಪ್ರವಾಸ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 13:ಕರ್ನಾಟಕ ಪ್ರದೇಶ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಅಧ್ಯಯನ ತಂಡವು ಜುಲೈ 14ರಂದು ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಲಿದೆ.ಈ ಪ್ರವಾಸವು ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಅಧ್ಯಯನದ ಭಾಗವಾಗಿದೆ.ತಂಡದಲ್ಲಿ ಜನತಾದಳ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಪ್ರಮುಖ ಮುಖಂಡರು…

Read More

ಎಸ್‌ಸಿ ಮಹಿಳೆಗೆ ಮೀಸಲಾತಿ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.13: ನಾಗರಿಕ ವಿಧಾನಸಭಾ ಕ್ಷೇತ್ರದ ಅಲಿಯಾಬಾದ್ ಗ್ರಾಮ ಪಂಚಾಯತ್ ವಾರ್ಡ್ ಸಂಖ್ಯೆ-2ರ ಮೀಸಲಾತಿಯನ್ನು ನಿಯಮಾನುಸಾರ ಮರು ಪರಿಶೀಲಿಸಿ, ಪರಿಶಿಷ್ಟ ಜಾತಿ (ಎಸ್‌ಸಿ) ಮಹಿಳೆಗೆ ಮೀಸಲಾತಿ ಕಲ್ಪಿಸುವಂತೆ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.ಜಿಲ್ಲಾ ಅಧ್ಯಕ್ಷ ನಾಗರಾಜ ಕಬಾಡೆ ಅವರ ನೇತೃತ್ವದಲ್ಲಿ ಸಲ್ಲಿಸಲಾದ ಮನವಿಯಲ್ಲಿ, ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ-2 ಎಸ್‌ಸಿ ಪುರುಷರಿಗೆ ಮೀಸಲಾಗಿತ್ತು. ಪ್ರಸ್ತುತ ಮೀಸಲಾತಿ ಸರಣಿಯ ನಿಯಮಗಳ ಪ್ರಕಾರ ಈ…

Read More

ವಿದ್ಯಾರ್ಥಿ ನಾಯಕರಿಗೆ ಪ್ರಮಾಣ ವಚನ: ನಾಯಕತ್ವದಿಂದ ದೇಶ ಕಟ್ಟುವ ಕನಸು – ಡಿವೈಎಸ್ಪಿ ನಾಗರಾಜ ಜಿ.

ಸಪ್ತಸಾಗರ ವಾರ್ತೆ,ವಿಜಯಪುರ, ಜು. 13: ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀ ಬಿ.ಎಂ. ಪಾಟೀಲ ಪಬ್ಲಿಕ್ ಸಿಬಿಎಸ್‌ಇ ಶಾಲೆಯಲ್ಲಿ ವಿದ್ಯಾರ್ಥಿ ಚುನಾವಣೆಯಲ್ಲಿ ಆಯ್ಕೆಯಾದ ಪದಾಧಿಕಾರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ಶನಿವಾರ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಜಯಪುರ ನಗರ ಡಿವೈಎಸ್ಪಿ ನಾಗರಾಜ ಜಿ. ಮಾತನಾಡಿ, “ಶಾಲಾ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು ಹಾಗೂ ಹೊಣೆಗಾರಿಕೆಯ ಗುಣಗಳನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂದು ಶಾಲೆಯನ್ನು ಮುನ್ನಡೆಸುವ ಮುಖ್ಯ ಬಾಲಕ-ಬಾಲಕಿಯರು ನಾಳೆ ದೇಶದ ನಾಯಕತ್ವ ವಹಿಸುವ ವ್ಯಕ್ತಿಗಳಾಗಬಹುದು” ಎಂದು…

Read More

ಕನಸಿನ ಮನೆಗೆ ‘ಎಂ. ಬಿ. ಪಾಟೀಲ ನಿಲಯ’ ಹೆಸರು: ಕೃತಜ್ಞತೆಯ ಮೂಲಕ ಗಮನ ಸೆಳೆದ ರೈತ ಕುಟುಂಬ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ಬರದ ನಾಡಿನಲ್ಲಿ ನೀರಾವರಿಯಿಂದ ಬದುಕು ಬದಲಾದ ಕೃತಜ್ಞತೆಯ ಸಂಕೇತವಾಗಿ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ಗ್ರಾಮದ ಹಿರೇಮಠ ಅವಿಭಕ್ತ ಕುಟುಂಬ ತಮ್ಮ ನೂತನ ಮನೆಗೆ ‘ಶ್ರೀ ಎಂ. ಬಿ. ಪಾಟೀಲ ನಿಲಯ’ ಎಂದು ನಾಮಕರಣ ಮಾಡಿ ಗಮನ ಸೆಳೆದಿದೆ.30 ಸದಸ್ಯರನ್ನು ಹೊಂದಿರುವ ಹಿರೇಮಠ ಕುಟುಂಬದ ಸಿದ್ದಯ್ಯ, ಸಾತಯ್ಯ, ಬಸಯ್ಯ ಹಾಗೂ ಮಲ್ಲಯ್ಯ ಸಹೋದರರು ವಿಜಯಪುರ ನಗರದ ಅಥಣಿ ರಸ್ತೆಯ ರಾಜಕುಮಾರ ಲೇಔಟ್‌ನ ಸುವರ್ಣನಗರದಲ್ಲಿ ಬೃಹತ್ ಮನೆ ನಿರ್ಮಿಸಿದ್ದು, ಭಾನುವಾರ ವಾಸ್ತುಶಾಂತಿ ಹಾಗೂ…

Read More

ರಾಜ್ಯ ಮಟ್ಟದ “ಬಾಲ ಸಾಹಿತ್ಯ ಪುರಸ್ಕಾರ”ಕ್ಕೆ ಕೃತಿಗಳ ಆಹ್ವಾನ

ಸಪ್ತಸಾಗರ ವಾರ್ತೆ,ಸಿಂದಗಿ, ಜು.12: ಸಿಂದಗಿಯ ವಿದ್ಯಾಚೇತನ ಪ್ರಕಾಶನವು ಪ್ರತಿವರ್ಷದಂತೆ 2025ನೇ ಸಾಲಿನ ರಾಜ್ಯ ಮಟ್ಟದ “ಬಾಲ ಸಾಹಿತ್ಯ ಪುರಸ್ಕಾರ” ಕ್ಕಾಗಿ ಮಕ್ಕಳ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಿದೆ.2025ರ ಜನವರಿ 1ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಪ್ರಥಮ ಮುದ್ರಣಗೊಂಡ ಮಕ್ಕಳ ಸಾಹಿತ್ಯ ಕೃತಿಗಳು ಮಾತ್ರ ಸ್ಪರ್ಧೆಗೆ ಅರ್ಹವಾಗಿವೆ. ಕಥೆ, ಕವನ ಹಾಗೂ ಕಾದಂಬರಿ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿ ವಿಭಾಗದ ವಿಜೇತರಿಗೆ ₹5,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.ಹದಿನೆಂಟು ವರ್ಷದೊಳಗಿನ ಬಾಲ ಲೇಖಕರೂ ತಮ್ಮ…

Read More