saptsagar_admin

ಪ್ರಿ ಕ್ವಾರ್ಟರ್ ಫೈನಲ್ ತಲುಪಿದ ಮಹಿಳಾ ವಿವಿ ಖೋಖೋ ತಂಡ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 6: ದಾವಣಗೆರೆ ವಿವಿಯಲ್ಲಿ ಏ.1ರಿಂದ 4ವರೆಗೆ ನಡೆದ ದಕ್ಷಿಣ ವಲಯ ಅಂತರ್ ಮಹಾವಿದ್ಯಾಲಯಗಳ ಖೋಖೋ ಪಂದ್ಯದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿವಿ ತಂಡ ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿ ವಿವಿ ಕೀರ್ತಿ ಹೆಚ್ಚಿಸಿದೆ.ತಂಡದ ಸಾಧನೆಗೆ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.ಆಂಧ್ರದ ತಿರುಪತಿ ವಿವಿ, ತಮಿಳುನಾಡಿನ ಭಾರತೀಯರ ವಿವಿ ಹಾಗೂ ಕೇರಳದ ಕಣ್ಣೂರು ವಿವಿ ವಿರುದ್ಧ ಪಂದ್ಯದಲ್ಲಿ ಮಹಿಳಾ ವಿವಿ ತಂಡ ಜಯಗಳಿಸುವ ಮೂಲಕ ರಾಜ್ಯ ಪ್ರತಿನಿಧಿಸಿ ಸಾಧನೆ ಮೆರೆದಿದೆ.ತಂಡದ ನಾಯಕಿ, ಎಂಪಿಇಡಿ…

Read More

ಜನಗಣತಿ‌ ಯಶಸ್ವಿಗೊಳಿಸಲು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 5: ಜನಗಣತಿ-2027ರಡಿ ಮನೆಗಳ ಪಟ್ಟಿ ಮತ್ತು ಮನೆ ಗಣತಿಯನ್ನು ಏ. 16 ರಿಂದ ಮೇ 15ರವರೆಗೆ 30 ದಿನಗಳ ಕಾಲ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಅವರು ತಿಳಿಸಿದ್ದಾರೆ.‌ಈಗಾಗಲೇ ಏ. 1ರಿಂದ ಸ್ವಯಂ ಗಣತಿಗೆ ಅಧಿಕೃತ‌ ಚಾಲನೆ ಸಿಕ್ಕಿದ್ದು, ಏ. 15 ರವರೆಗೆ ಅವಕಾಶ ಕಲ್ಪಿಸಲಾಗಿದೆ ತಿಳಿಸಿದರು.ಜನಗಣತಿಯು ಅತ್ಯಂತ ತಳಮಟ್ಟದ ಆಡಳಿತ ಘಟಕಗಳಿಗೆ, ಅಂದರೆ, ಗ್ರಾಮೀಣ ಪ್ರದೇಶದ ಹಳ್ಳಿಗಳು ಮತ್ತು ನಗರ ಪ್ರದೇಶಗಳಲ್ಲಿನ ಪಟ್ಟಣ, ವಾರ್ಡ್ ಗಳಿಗೆ ವಸತಿ ಸ್ಥಿತಿ,…

Read More

ಜಗಜೀವನ ರಾಮರ ಕೊಡುಗೆ ಅಪಾರ:ಲೋಣಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 5:ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ 119 ನೇ ಜನ್ಮದಿನಾಚರಣೆಯನ್ನು ಭಾನುವಾರ ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರು ಮಾತನಾಡಿ, ಡಾ. ಬಾಬು ಜಗಜೀವನ ರಾಂ ಅವರು ಸ್ವಾತಂತ್ರ್ಯ ಹೋರಾಟಗಾರ, ಅಸ್ಪೃಸತೆಯ ನಿವಾರಣಾ ಹೋರಾಟದ ಮುಂಚೂಣಿ ನಾಯಕ, ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿಗಳಾಗಿ ದೇಶಕ್ಕಾಗಿ ಅಪಾರ ಸೇವೆ…

Read More

ಬಾಬು ಜಗಜೀವನ ರಾಮ ಸಮ ಸಮಾಜ ನಿರ್ಮಾಣದ ಹರಿಕಾರ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 5: ಹಸಿವು ಮುಕ್ತ ಭಾರತಕ್ಕೆ ಶ್ರಮಿಸಿದ ಬಾಬುಜಿ ಅವರು ಹಸಿರು ಕ್ರಾಂತಿಗೆ ಅಡಿಪಾಯ ಹಾಕಿ, ಸರ್ವ ಜನಾಂಗದ ಕಲ್ಯಾಣಕ್ಕೆ ಶ್ರಮಿಸಿ, ಸಮ ಸಮಾಜ ನಿರ್ಮಾಣಕ್ಕೆ ಬದುಕಿನುದ್ದಕ್ಕೂ ಹೋರಾಡಿದ್ದರು. ಅವರ ಚಿಂತನೆಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ರವಿವಾರ ಬಾಬು ಜಗಜೀವನ ರಾಮ ಅವರ 119 ನೇ ಜಯಂತಿ ನಿಮಿತ್ತ ಹಮ್ಮಿಕೊಂಡ ಸಮತಾ ದಿವಸಕ್ಕೆ ಚಾಲನೆ ನೀಡಿ…

Read More

ಡಾ.ಬಾಬು ಜಗಜೀವನ ರಾಂ ಜಯಂತ್ಯುತ್ಸವ: ಪ್ರತಿಮೆಗೆ ಮಾಲಾರ್ಪಣೆ

ಸಪ್ತಸಾಗರ ವಾರ್ತೆ,ವಿಜಯಪುರ,ಏ. 5:ಭಾರತದ ಮಾಜಿ ಉಪಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ 119ನೇ ಜಯಂತಿ ಹಿನ್ನೆಲೆಯಲ್ಲಿ, ಏಪ್ರಿಲ್ 5ರಂದು ನಗರದ ಸೆಟ್‌ಲೈಟ್ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಡಾ.ಬಾಬು ಜಗಜೀವನ ರಾಂ ಪ್ರತಿಮೆಗೆ ಶಾಸಕ ವಿಠ್ಠಲ ಕಟಕಧೋಂಡ, ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ, ಜಿಲ್ಲಾಧಿಕಾರಿ ಡಾ.ಆನಂದ ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾಲಾರ್ಪಣೆ‌ ಮಾಡಿ,ಗೌರವ‌ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ,…

Read More

ಅನಗತ್ಯ ನೀರು ಪೋಲು ಮಾಡಿದರೆ 2 ಸಾವಿರ ರೂ. ದಂಡ: ಅನಧಿಕೃತ ಸಂಪರ್ಕ ಹೊಂದಿದ್ದರೆ 5 ಸಾವಿರ ರೂ. ದಂಡ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 4: ಅನವಶ್ಯಕವಾಗಿ ಕುಡಿಯುವ ನೀರು ಪೋಲು ಮಾಡುವರಿಗೆ 2 ಸಾವಿರ ರೂ. ಹಾಗೂ ಅನಧಿಕೃತ ನಳ ಸಂಪರ್ಕ ಪಡೆದುಕೊಳ್ಳುವ ಹಾಗೂ ಪಡೆದುಕೊಂಡವರಿಗೆ ಹೊಸ ನಳದ ಶುಲ್ಕದ ಜೊತೆಗೆ ಹೆಚ್ಚುವರಿ 5 ಸಾವಿರ ರೂ. ದಂಡ ವಿಧಿಸಲಾಗುವುದು ಕರ್ನಾಟಕ ನಗರ ನೀರು‌ ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.ನಗರದ ವಿವಿಧ ವಲಯ, ವಾರ್ಡಗಳಲ್ಲಿ ಪೂರೈಕೆಯಾಗುವ ನೀರನ್ನು ಕುಡಿಯುವ ಸಲುವಾಗಿ ಮಾತ್ರ ಪರಿಗಣಿಸಿ ನೀರಿನ ಪ್ರಮಾಣವನ್ನು ಅಂದಾಜಿಸಲಾಗಿರುತ್ತದೆ.ದಿನಂಪ್ರತಿ ಪ್ರತಿಯೊಬ್ಬರಿಗೆ ತಲಾ 135…

Read More

ವಿವಿಧ ರಾಜಕೀಯ ಪಕ್ಷಗಳ ಒಕ್ಕೂಟ ಕಾಮನ್ ಮಿನಿಮಮ್ ಪ್ರೋಗ್ರಾಂ ಅಡಿಯಲ್ಲಿ ಮುನ್ನಡೆಯುವುದು ಅಗತ್ಯ:ಎಂಬಿಪಿ

ಸಪ್ತಸಾಗರ ವಾರ್ತೆ,ದಾವಣಗೆರೆ, ಎ. 4: ಮೀಸಲಾತಿ ಸೌಲಭ್ಯಗಳಿಂದ ಲಿಂಗಾಯತ ಬಡಮಕ್ಕಳು ವಂಚಿತರಾಗಿದ್ದು, ಸಾಮಾನ್ಯ ಲಿಂಗಾಯತರಿಗೆ ಸರ್ಕಾರದ ಎಲ್ಲ ಸೌಲಭ್ಯಗಳು ದೊರೆಯುವ ನಿಟ್ಟಿನಲ್ಲಿ ವಿರಕ್ತ ಮಠಾಧೀಶರು ಮತ್ತು ಪಂಚಪೀಠಾಧೀಶರರು ವಿವಿಧ ರಾಜಕೀಯ ಪಕ್ಷಗಳ ಒಕ್ಕೂಟ ಕಾಮನ್ ಮಿನಿಮಮ್ ಪ್ರೋಗ್ರಾಂ ರೀತಿಯಲ್ಲಿ ಸಮಾಜದ ಒಕ್ಕೂಟ್ಟು ಮತ್ತು ಏಳ್ಗಿಗಾಗಿ ಅದರನಗುಣವಾಗಿ ಮುನ್ನಡೆಯುವ ಅಗತ್ಯತೆ ಇದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ದಾವಣಗೆರೆ ದೊಡ್ಡಪೇಟೆ ವಿರಕ್ತಮಠದಲ್ಲಿ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಾವಣಗೆರೆಯಲ್ಲಿ ನಡೆದ ಅಖಿಲಭಾರತ ವೀರಶೈವ…

Read More

ಮಲ್ಲಿಕಾರ್ಜುನ ಸ್ವಾಮಿಗಳು ಭಕ್ತರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ-ಸುನೀಲಗೌಡ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಎ. 4: ಸಮಾಜಮುಖಿ ಕಾರ್ಯಗಳ ಮೂಲಕ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಭಕ್ತರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಶುಕ್ರವಾರ ರಾತ್ರಿ ವಿಜಯಪುರ ತಾಲೂಕಿನ ಹೊನಗನಹಳ್ಳಿ- ಸವನಹಳ್ಳಿಯ ಶ್ರೀ ಆತ್ಮಾನಂದ ಆಶ್ರಮದಲ್ಲಿ ನಡೆಯುತ್ತಿರುವ ಪ. ಪೂ. ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳ 5ನೇ ಪುಣ್ಯಸ್ಮರಣೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಹಾಗೂ ಅಡ್ಡಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೋಂಡು ಅವರು ಮಾತನಾಡಿದರು.ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಜಾತ್ಯತೀತ ತತ್ವಗಳನ್ನು ಅಳವಡಿಸಿಕೊಂಡಿದ್ದರು. ಹಸಿದು ಬಂದವರಿಗೆ ಅನ್ನ…

Read More

ಜ್ಞಾನ-ಪರಿಜ್ಞಾನ ಇದ್ದಾಗ ಮಾತ್ರ ಪತ್ರಕರ್ತ ಯಶಸ್ಸು ಗಳಿಸಲು ಸಾಧ್ಯ: ಸಂತೋಷ ಚಿನಗುಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಎ. 3: ಪತ್ರಕರ್ತನಿಗೆ ಜ್ಞಾನ ಮತ್ತು ಪರಿಜ್ಞಾನ ಇದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಪ್ರಜಾವಾಣಿಯ ಬೆಳಗಾವಿ ಜಿಲ್ಲಾ ಹಿರಿಯ ವರದಿಗಾರ ಸಂತೋಷ ಚಿನಗುಡಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವುಮನ್ ಮೀಡಿಯಾ ಕ್ಲಬ್ ಉದ್ಘಾಟಿಸಿ ಅವರು ಮಾತನಾಡಿದರು.ಪತ್ರಿಕೋದ್ಯಮವು ಕೇವಲ ತರಗತಿ ಕೋಣೆಗೆ ಸೀಮಿತವಾಗಿರದೆ, ವಿದ್ಯಾರ್ಥಿಗಳು ಪ್ರಾಯೋಗಿಕ ಜ್ಞಾನವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ಪತ್ರಿಕೆಗಳನ್ನು ಕೇವಲ ನೋಡದೆ, ಅವನ್ನು ನಿಯಮಿತವಾಗಿ ಓದಿದಾಗ…

Read More

ಅಕಾಲಿಕ ಮಳೆ:ಬೆಳೆ ಹಾನಿ ಸಮೀಕ್ಷೆಗೆ ಎಂಬಿಪಿ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಎ. 3: ಜಿಲ್ಲೆಯಲ್ಲಿ ನಿನ್ನೆ ಗುರುವಾರ ಸುರಿದ ಅಕಾಲಿಕ ಮಳೆಯಿಂದಾಗಿ ಉಂಟಾಗಿರುವ ದ್ರಾಕ್ಷಿ ಬೆಳೆ ಹಾನಿಯ ಕುರಿತು ಕೂಡಲೇ ಸಮೀಕ್ಷೆ‌ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮಾರ್ಚ್ ತಿಂಗಳಲ್ಲಿ ಆಲಿಕಲ್ಲು ಮತ್ತು ಬಿರುಗಾಳಿ ಸಹಿತ ಮಳೆ ಸುರಿದ ಪರಿಣಾಮ ದ್ರಾಕ್ಷಿ ಸೇರಿದಂತೆ ನಾನಾ ಬೆಳೆಗಳು ಹಾನಿಯಾಗಿದ್ದವು. ‌ಈ ಕುರಿತು ಸಮಗ್ರ ಸಮೀಕ್ಷೆ ನಡೆಸುವಂತೆ ಮಾರ್ಚ್ 21 ರಂದು‌ ಜಿಲ್ಲಾಧಿಕಾರಿ,…

Read More