
ಸೆ.27ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 25: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸೆ. 27ರ ಬೆಳಿಗ್ಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವನ್ನು ನಗರದ ಶಿವಗಿರಿಯಲ್ಲಿ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸಲಿದ್ದಾರೆ. ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹಾಗೂ ಜವಳಿ, ಕಬ್ಬು ಅಭಿವೃದ್ಧಿ ಮತ್ತು…