saptsagar_admin

ಬಸವ ಸಂಸ್ಕೃತಿ ಅಭಿಯಾನಕ್ಕೆ ಕ್ಷಣ ಗಣನೆ: ಅಂತಿಮ ಸಿದ್ಧತೆ ಪರಿಶೀಲಿಸಿದ ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ಬಸವನ ಬಾಗೇವಾಡಿ, ಆ. 31:ಬಸವಜನ್ಮಭೂಮಿ ಬಸವನ ಬಾಗೇವಾಡಿ ಪಟ್ಟಣದಿಂದ ಚಾಲನೆ ಪಡೆಯಲಿರುವ ಬಸವ ಸಂಸ್ಕೃತಿ ಅಭಿಯಾನಕ್ಕೆ ಕ್ಷಣ ಗಣನೆ ಆರಂಭಗೊಂಡಿದೆ. ಸೋಮವಾರ ಸೆ.1ರಂದು ಅಭಿಯಾನಕ್ಕೆ ಚಾಲನೆ ಪಡೆಯಲಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಅಂತಿಮ ಸಿದ್ಧತೆ ಪರಿಶೀಲಿಸಿದರು.ಭಾನುವಾರ ಮಧ್ಯಾಹ್ನ ಪಟ್ಟಣದ ಸಿಬಿಎಸ್ ಶಾಲಾ ಆವರಣದಲ್ಲಿ ಅಭಿಯಾನ ವೇದಿಕೆ ಹಾಗೂ ಪ್ರಸಾದ ವ್ಯವಸ್ಥೆಯ ಅಂತಿಮ ಸಿದ್ಧತೆ ಪರಿಶೀಲಿಸಿದ ಸಚಿವರು, ಸಲಹೆ,…

Read More

ಮೂಲೆ ನಿವೇಶನ ಸಿಎಂ ಸಿದ್ಧರಾಮಯ್ಯ ಹಂಚಿಕೆ

ಸಪ್ತಸಾಗರ ವಾರ್ತೆ, ಮೈಸೂರು, ಆ. 31: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಕಳೆದ 20 ವರ್ಷಗಳಿಂದ ಹಂಚಿಕೆಯಾಗದೆ ಬಾಕಿ ಉಳಿದಿದ್ದ ಮುಡಾದ 63 ಮೂಲೆ ನಿವೇಶನಗಳನ್ನು ಸರ್ಕಾರದ ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿ, ಆದೇಶ ಪ್ರತಿ ಹಸ್ತಾಂತರಿಸಿದರು.ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಕ್ಷಿತ್ ಉಪಸ್ಥಿತರಿದ್ದರು.

Read More

ನಮ್ಮ ಸರ್ಕಾರ ಜಾತಿ ನೋಡಲ್ಲ, ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ: ಸಿ.ಎಂ.ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಆ 31:ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ, “ಉಪ್ಪಾರ ಸಮುದಾಯ ಭವನದ” ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ಈ ನೆಲದ ದಾರ್ಶನಿಕರು, ಮಹಾನುಭಾವರ ಮನುಕುಲದ ಕೊಡುಗೆ ಗಮನಿಸಿ ಅವರೆಲ್ಲರ ಜಯಂತಿಯನ್ನು ಸರ್ಕಾರವೇ ಆಚರಿಸುತ್ತಿದೆ. ಜೊತೆಗೆ ಇವರೆಲ್ಲರೂ ಜಾತ್ಯತೀತ ಮನೋಭಾವದಿಂದ ನೀಡಿದ…

Read More

ಸಾಹಿತ್ಯ ಹರಿಯುವ ನೀರಿನಂತಾಗಬೇಕು- ಜಿಲ್ಲಾಧಿಕಾರಿ ಡಾ.ಕೆ ಆನಂದ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31: ಸಾಹಿತ್ಯದ ಬರವಣಿಗೆ ನಿರಂತರವಾಗಿರಬೇಕು ಮತ್ತು ಸಾಹಿತ್ಯ ಯಾವಾಗಲೂ ಹರಿಯುವ ನೀರಿನಂತಾಗಬೇಕು. ಒತ್ತಡದ ಸೇವೆಯ ಮಧ್ಯೆದಲ್ಲಿ ಸಾಹಿತ್ಯ ಕೃಷಿ ಮಾಡುತ್ತಿರುವ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಕಾಯ೯ ಅತ್ಯಂತ ಶ್ಲಾಘನೀಯ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ಕೆ.ಆನಂದ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಉದ್ಘಾಟನೆಗೊಂಡ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಹಾಗೂ ದೇವರಗೆಣ್ಣೂರ ಎಂಬ ಎರಡು ಕೃತಿಗಳ ಲೋಕಾರ್ಪಣೆ ಸಂದರ್ಭದಲ್ಲಿ ಮಾತನಾಡುತ್ತ ಕೃತಿಗಳು ಯುವಕರಿಗೆ ಸ್ಫೂರ್ತಿ ಮತ್ತು ಪ್ರೇರಣೆಯಾಗಲಿ ಎಂದರು.ಜಿಲ್ಲಾ…

Read More

ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31: ಗ್ರಾಮ ಪಂಚಾಯಿತಿಗಳು ದೇವಾಲಯಗಳಿದ್ದಂತೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇಲ್ಲಿಗೆ ಬರುವ ಜನರ ಸ್ಥಳೀಯ ಸಮಸ್ಯೆಗಳನ್ನು ಆಲಿಸಿ ಸೂಕ್ತವಾಗಿ ಸ್ಪಂದಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಕರೆ ನೀಡಿದ್ದಾರೆ.ರವಿವಾರ ತಿಕೋಟಾ ತಾಲೂಕಿನ ಸಿದ್ದಾಪುರ ಕೆ. ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಿದ! ಅಮೃತ ಗ್ರಾಮ ಪಂಚಾಯತ ನೂತನ ಕಚೇರಿಯ ಕಟ್ಟಡ ಹಾಗೂ ಗೋದಾಮು ಉದ್ಘಾಟನೆ ನೆರವೇರಿಸಿ…

Read More

ಸಂದೇಶ್ ನಾಗರಾಜ್ ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಸಾಧಿಸುತ್ತಾರೆ: ಸಿ.ಎಂ.ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 31: ಸಂದೇಶ್ ನಾಗರಾಜ್ ಸ್ನೇಹಮಯಿ ವ್ಯಕ್ತಿತ್ವದವರಾಗಿದ್ದು ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಅವರಿಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ವಿಧಾನ‌ ಪರಿಷತ್ ಮಾಜಿ ಸದಸ್ಯರಾದ ಚಿತ್ರ‌ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.80 ವರ್ಷ ಪೂರೈಸಿ ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದಾರೆ. ಇವರು ಶತಾಯುಷಿ ಮಾತ್ರವಲ್ಲ, ಅದಕ್ಕಿಂತ ಹೆಚ್ಚು ಕಾಲ ಆರೋಗ್ಯಕರವಾಗಿ ಜೀವಿಸಲಿ ಎಂದು ಹಾರೈಸಿದರು.ರಾಜಕೀಯವಾಗಿ ಇಬ್ಬರೂ ಬೇರೆ ಬೇರೆ…

Read More

ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಪ್ರಸ್ತಾವನೆ ಕೈಬಿಡಿ: ಹೋರಾಟ ಸಮಿತಿ ಒತ್ತಾಯ

ಸಪ್ತ ಸಾಗರ ವಾರ್ತೆ, ವಿಜಯಪುರ,ಆ. 31:ವಿಜಯಪುರದಲ್ಲಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕೈ ಬಿಟ್ಟು ಸಂಪೂರ್ಣವಾಗಿ ಸರ್ಕಾರವೇ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಹೋರಾಟ ಸಮಿತಿ ನಿಯೋಗ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿತು.ಹೋರಾಟ ಸಮಿತಿ ಪದಾಧಿಕಾರಿಗಳ ನಿಯೋಗ ಜಿಲ್ಲಾ ಉಸ್ತುವಾರಿ ಸಚಿವ ಎಮ್.ಬಿ. ಪಾಟೀಲ ಅವರ ಬಳಿ ತೆರಳಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಬೇಡ. ಸರ್ಕಾರಿ ವೈದ್ಯಕಿ ಕಾಲೇಜ್ ಸ್ಥಾಪಿಸಬೇಕು ಎಂದು ಕೇಳಿಕೊಳ್ಳಲಾಯಿತು.ಸರಕಾರಿ ವೈದ್ಯಕೀಯ ಕಾಲೇಜು…

Read More

ಓದುವ ಅಭಿಯಾನದಲ್ಲಿ ಒಂದು ಕೋಮಿನ ಹಬ್ಬಗಳ ಪರಿಚಯ ತೆಗೆದು ಹಾಕಿ: ಶಾಸಕ ಯತ್ನಾಳ ಒತ್ತಾಯ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31: 21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯಲ್ಲಿರುವ ಒಂದು ಕೋಮಿನ ಹಬ್ಬದ ತಿಳಿವಳಿಕೆ ವಿಷಯವನ್ನು ಕೂಡಲೇ ತೆಗೆದು ಹಾಕಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಒತ್ತಾಯಿಸಿದ್ದಾರೆ.21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯಲ್ಲಿ ಒಂದು ಕೋಮಿನ ಹಬ್ಬವನ್ನು ತಿಳಿದುಕೊಳ್ಳಲು ನಿರ್ದೇಶಿಸಲಾಗಿದೆ. ಓದುವ ಅಭಿಯಾನವನ್ನು ಸರ್ಕಾರ ಪರಿಚಯಿಸಿದ್ದರೆ ಅದರಲ್ಲಿ ಪ್ರಚಲಿತ ವಿದ್ಯಮಾನ, ಕನ್ನಡ ಸಾಹಿತ್ಯ, ವಿಜ್ಞಾನ, ನಮ್ಮ ಸಂಸ್ಕೃತಿ, ಇತಿಹಾಸವನ್ನು ಓದಲು ಉತ್ತೇಜಿಸಬೇಕೇ ಹೊರತು ಯಾವುದೋ ಒಂದು ಕೋಮಿನ…

Read More

ನನಗೂ ಪಿಪಿಪಿ ಮಾದರಿ ಸರ್ಕಾರಿ ಮೆಡಿಕಲ್ ಕಾಲೇಜ್ ಬೇಡ: ಸಚಿವ ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31:ವಿಜಯಪುರ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಬೇಕು ಎನ್ನುವ ಇರಾದೆ ನನ್ನದೂ ಇದೆ. ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಬರುವುದನ್ನು ನಾನು ವಿರೋಧಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದರು.ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ವಿಜಯಪುರ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಬರುವುದಕ್ಕೆ ನಾನು ವಿರೋಧಿಯಾಗಿದ್ದೇನೆ ಎಂಬ ಅರ್ಥ ಬರುವಂತೆ ಕೆಲವರು ಬಿಂಬಿಸುತ್ತಿದ್ದಾರೆ. ಆದರೆ ಇದರಲ್ಲಿ ನನ್ನ ಯಾವುದೇ ಪಾತ್ರ ಇಲ್ಲ. ನಾನು ಕೂಡಾ ವಿಜಯಪುರ ಜಿಲ್ಲೆಗೆ…

Read More

ವಿಜಯಪುರ ತಾಲೂಕು ರೈತ ಸಂಘದ ನೂತನ ಪದಾಧಿಕಾರಿಗಳ ನೇಮಕ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.ಮಹಾದೇವಪ್ಪ ತೇಲಿ (ಅಧ್ಯಕ್ಷ), ಜಯಸಿಂಗ್ ರಜಪೂತ ( ಪ್ರಧಾನ ಕಾರ್ಯದರ್ಶಿ) ಪ್ರಭುಲಿಂಗ ಕಾರಜೋಳ ( ಯುವ ಘಟಕ ಅಧ್ಯಕ್ಷ) ಅವರನ್ನು ಬೆಳಗಾವಿ ವಿಭಾಗದ ಉಪಾಧ್ಯಕ್ಷ ಬಸನಗೌಡ ಧರ್ಮಗೊಂಡ ಹಾಗೂ ರಾಜ್ಯ ಯುವ ಘಟಕದ ಸಂಚಾಲಕ ಸಿದ್ಧನಗೌಡ ಪಾಟೀಲ ಅವರು ಎಲ್ಲ ಪದಾಧಿಕಾರಿಗಳ ಸಮಕ್ಷಮದಲ್ಲಿ ಒಮ್ಮತದಿಂದ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More