
ಆಯುಷ್ ಆಸ್ಪತ್ರೆಗಳಲ್ಲಿನ ಆರೋಗ್ಯ ಸೇವೆಯ ಗುಣಮಟ್ಟವನ್ನು ಹೆಚ್ಚಿಸಿ: ವೇಣುಗೋಪಾಲ
ಸಪ್ತಸಾಗರ ವಾರ್ತೆ,ವಿಜಯಪುರ, ಆ. 30: ಆಯುಷ್ ಆಸ್ಪತ್ರೆಗಳಲ್ಲಿನ ಆರೋಗ್ಯ ಸೇವೆಯ ಗುಣಮಟ್ಟವನ್ನು ಹೆಚ್ಚಿಸಿ, ರಾಷ್ಟ್ರೀಯ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಲು ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ(QCI) ಮಾರ್ಗದರ್ಶನ ಮಾಡುತ್ತಿದೆ ಎಂದು ಕ್ಯೂಸಿಐ ದಕ್ಷಿಣ ಭಾರತ ಮುಖ್ಯಸ್ಥ ವೇಣುಗೋಪಾಲ ಸಿ ತಿಳಿಸಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಕ್ಯೂಸಿಐ ಮತ್ತು ನ್ಯಾಷನಲ್ ಅಕ್ರಡಿಟೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ಅಂಡ್ ಹೆಲ್ತ್ಕೇರ್ ಪ್ರೊವೈಡರ್ಸ್ (NABH) ಸಹಯೋಗದಲ್ಲಿ ಆಯೋಜಿಸಲಾಗಿದ್ದ ಗುಣವತ್ತಾ ಯಾತ್ರೆ…