saptsagar_admin

ಉದ್ಯೋಗ ಮೇಳದಲ್ಲಿ ಬಿಎಲ್ಡಿಇ ಕಾಲೇಜಿನ 23 ವಿದ್ಯಾರ್ಥಿಗಳು ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 21:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಜೂನ್ 9ರಂದು ಬೆಂಗಳೂರಿನ ಸೆಂಟಮ್ ಎಲೆಕ್ಟ್ರಾನಿಕ್ಸ್ ಮತ್ತು ಬೆಳಗಾವಿಯ ಏಕಸ್ ಸಂಸ್ಥೆಗಳು ನಡೆಸಿದ ಕ್ಯಾಂಪಸ್ ಉದ್ಯೋಗ ಮೇಳದಲ್ಲಿ ಕಾಲೇಜಿನ ಒಟ್ಟು 23 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಸೆಂಟಮ್ ಎಲೆಕ್ಟ್ರಾನಿಕ್ಸ್ ಸಂಸ್ಥೆಗೆ 17 ಮತ್ತು ಏಕಸ್ ಸಂಸ್ಥೆಗೆ ಆರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಬೆಂಗಳೂರಿನ ಸೆಂಟಮ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ವತಿಯಿಂದ ಸಹಾಯಕ ವ್ಯವಸ್ಥಾಪಕ ಮತ್ತು ಮಾನವ ಸಂಪನ್ಮೂಲ ಅಧಿಕಾರಿ ಅಂಶಿತ್ ಸಿ. ಡಿ. ಅವರು ಖುದ್ದಾಗಿ ಆಗಮಿಸಿ…

Read More

ಜಿಲ್ಲೆಯಲ್ಲಿ ಲಸಿಕಾ ಅಭಿಯಾನಕ್ಕೆ ಸಕಲ ಸಿದ್ಧತೆ:2.92 ಲಕ್ಷ ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಹಾಕುವ ಗುರಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20: ಜಿಲ್ಲೆಯಲ್ಲಿ ಜೂನ್‌ 28 ರಿಂದ ಜುಲೈ 1ರವರೆಗೆ ರಾಷ್ಟ್ರೀಯ ಪಲ್ಸ್‌ ಪೊಲಿಯೋ ಲಸಿಕಾ ಅಭಿಯಾನಕ್ಕಾಗಿ ಅಗತ್ಯ ಸಿದ್ಧತೆ ಕೈಗೊಂಡು ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ.ಕೆ ಅವರು ಹೇಳಿದರು.ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರಮುಖವಾಗಿ 5 ವರ್ಷದೊಳಗಿನ ಒಟ್ಟು 2,92,495 ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮ…

Read More

ಗಾಂಧಿ ವೃತ್ತದಲ್ಲಿ ಸಿಗ್ನಲ್ ಕೆಳಗೇ ಆಟೋ ಹಾಗೂ ಸಿಟಿ ಬಸ್ ನಿಲುಗಡೆಗೆ ಅವಕಾಶ: ಸಾರ್ವಜನಿಕರ ಆಕ್ರೋಶ

ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20:ನಗರದ ಪ್ರಮುಖ ಸಂಚಾರ ಕೇಂದ್ರವಾಗಿರುವ ಗಾಂಧಿ ವೃತ್ತದಲ್ಲಿ ಸಿಗ್ನಲ್ ವ್ಯವಸ್ಥೆ ಇದ್ದರೂ, ಅದರ ಕೆಳಭಾಗದಲ್ಲೇ ಆಟೋ ರಿಕ್ಷಾ ಹಾಗೂ ಸಿಟಿ ಬಸ್‌ಗಳ ನಿಲುಗಡೆ ವ್ಯವಸ್ಥೆ ಮಾಡಿರುವುದರಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗುತ್ತಿದೆ. ಇದರಿಂದ ಪ್ರತಿನಿತ್ಯ ಸಾವಿರಾರು ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.ಗಾಂಧಿ ವೃತ್ತವು ನಗರದ ಹೃದಯಭಾಗವಾಗಿದ್ದು, ಇಲ್ಲಿಂದ ವಿವಿಧ ಪ್ರದೇಶಗಳಿಗೆ ವಾಹನಗಳು ಸಂಚರಿಸುತ್ತವೆ. ಆದರೆ ಸಿಗ್ನಲ್ ಸಮೀಪವೇ ಆಟೋಗಳ ನಿಲುಗಡೆ ಮತ್ತು ಪ್ರಯಾಣಿಕರ ಏರಿಳಿತ ನಡೆಯುತ್ತಿರುವುದರಿಂದ ವಾಹನಗಳ…

Read More

ವಿಜಯಪುರದಲ್ಲಿ ಆಟೋ ಚಾಲಕನ ಭೀಕರ ಹತ್ಯೆ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 20:ನಗರದ ಬಂಜಾರ ಕ್ರಾಸ್ ಸಮೀಪ ಆಟೋ ಚಾಲಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆಗೈದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.ಹತ್ಯೆಯಾದ ವ್ಯಕ್ತಿಯನ್ನು ಖಾಜಾ ಅಮೀನ್ ದರ್ಗಾ ನಿವಾಸಿ ಹಾಗೂ ಆಟೋ ಚಾಲಕರಾಗಿದ್ದ ವಿಲಾಸ ನಡುವಿನಮನಿ (30) ಎಂದು ಗುರುತಿಸಲಾಗಿದೆ. ಕುಟುಂಬದ ನಿರ್ವಹಣೆಗಾಗಿ ಆಟೋ ಚಾಲನೆ ಮಾಡುತ್ತಿದ್ದ ವಿಲಾಸ ಅವರು ಬಂಜಾರ ಕ್ರಾಸ್ ಪ್ರದೇಶದಲ್ಲಿ ಇದ್ದ ವೇಳೆ ದುಷ್ಕರ್ಮಿಗಳ ದಾಳಿಗೆ ಗುರಿಯಾಗಿದ್ದಾರೆ ಎಂದು ತಿಳಿದುಬಂದಿದೆ.ದುಷ್ಕರ್ಮಿಗಳು ನಡೆಸಿದ ಮಾರಣಾಂತಿಕ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ವಿಲಾಸ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ…

Read More

ವಿಜಯಪುರದಲ್ಲಿ ಬಿಜೆಪಿ ಓಬಿಸಿ ಮೋರ್ಚಾದಿಂದ ಸಂಭ್ರಮಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20:ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿಜಯಪುರ ಜಿಲ್ಲಾ ಓಬಿಸಿ ಮೋರ್ಚಾ ವತಿಯಿಂದ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ನೂತನವಾಗಿ ರಾಜ್ಯಸಭೆಗೆ ಆಯ್ಕೆಯಾದ ಪ್ರೊ. ಎಂ. ನಾಗರಾಜ ಹಾಗೂ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ರಘು ಕೌಟಿಲ್ಯ ಮತ್ತು ಲಿಂಗರಾಜ ಪಾಟೀಲ ಅವರನ್ನು ಅಭಿನಂದಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಸಿದ್ದು ಬುಳ್ಳಾ, ಪ್ರಾಧ್ಯಾಪಕರಾಗಿ ಹಾಗೂ ಪಕ್ಷದ ಮಾಜಿ ಉಪಾಧ್ಯಕ್ಷರಾಗಿ ದಶಕಗಳ ಕಾಲ ಸೇವೆ ಸಲ್ಲಿಸಿರುವ ಪ್ರೊ….

Read More

ನೀರಿಗಾಗಿ ಖಾಲಿ ಕೊಡಗಳೊಂದಿಗೆ ತೆಗ್ಗೆಹಳ್ಳಿ ಮಹಿಳೆಯರ ಪ್ರತಿಭಟನೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 20: ತಾಲೂಕಿನ ತೆಗ್ಗೆಹಳ್ಳಿ ಗ್ರಾಮದ ಹೊಸ ಊರಿನಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ನೂರಾರು ಮಹಿಳೆಯರು ಖಾಲಿ ಕೊಡಗಳೊಂದಿಗೆ ಆಡಳಿತ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ತೆಗ್ಗೆಹಳ್ಳಿ ಗ್ರಾಮದ ಹೊಸ ಊರಿನಲ್ಲಿ ಸುಮಾರು 300 ಕುಟುಂಬಗಳು ವಾಸವಾಗಿದ್ದು, ಕುಡಿಯುವ ನೀರಿಗಾಗಿ ಕೇವಲ ಒಂದು ಬಾವಿಯನ್ನೇ ಅವಲಂಬಿಸಬೇಕಾಗಿದೆ. ಈ ಬಾವಿಯಿಂದ ದಿನಕ್ಕೆ ಕೇವಲ 15 ನಿಮಿಷಗಳ ಕಾಲ ಮಾತ್ರ ನೀರು ಪೂರೈಕೆಯಾಗುತ್ತಿದೆ. ನಂತರ ನೀರಿನ ಅಗತ್ಯಕ್ಕಾಗಿ ಗ್ರಾಮಸ್ಥರು ಸುತ್ತಮುತ್ತಲಿನ ತೋಟಗಳಿಗೆ ತೆರಳಿ…

Read More

ಶಿಫಾಗೆ ಮತ್ತೊಂದು ಜಾಗತಿಕ ಗೌರವ: ರಷ್ಯಾದ ಪರಮಾಣು ಶಕ್ತಿ ವಿಶ್ವ ಸಮ್ಮೇಳನದಲ್ಲಿ ಭಾರತದ ಪ್ರತಿನಿಧಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20:ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆದ ವಿಶ್ವ ಯುವ ಶೃಂಗಸಭೆಯಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿ ಗಮನ ಸೆಳೆದಿದ್ದ ವಿಜಯಪುರದ ಕುಮಾರಿ ಶಿಫಾ ಜಮಾದಾರ ಅವರು ಇದೀಗ ಮತ್ತೊಂದು ಮಹತ್ವದ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಏಜೆನ್ಸಿ (IAEA) ಹಾಗೂ ರಷ್ಯಾ ಸರ್ಕಾರದ ಸಹಯೋಗದಲ್ಲಿ ರಷ್ಯಾದ ಆಬ್ನಿನ್ಸ್ಕ್ ನಗರದಲ್ಲಿ ಜೂನ್ 25ರಿಂದ ಮೂರು ದಿನಗಳ ಕಾಲ ನಡೆಯಲಿರುವ ಪರಮಾಣು ಶಕ್ತಿಯ ಶಾಂತಿಯುತ ಬಳಕೆ, ಹಸಿವು ನಿವಾರಣೆ ಹಾಗೂ ಜಾಗತಿಕ ಅಭಿವೃದ್ಧಿಗೆ ಪರಮಾಣು…

Read More

ಸುಳ್ಳು ಫೈರಿಂಗ್ ಪ್ರಕರಣ ಬಯಲು – ದೂರುದಾರ ಸೇರಿ ಮೂವರ ಬಂಧನ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 19:ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಫೈರಿಂಗ್ ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು ದೊರೆತಿದ್ದು, ದೂರುದಾರನೇ ಸುಳ್ಳು ಕಥೆ ಸೃಷ್ಟಿಸಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.ಜೂ. 3ರಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 255/2026 ದಾಖಲಿಸಲಾಗಿತ್ತು. ಇಟ್ಟಂಗಿಹಾಳ ದೊಡ್ಡಿಯ ನಿವಾಸಿ ದಯವಂತ ಡೇರೆ ಅವರು, ತೊರವಿ ಗ್ರಾಮದ ಹದ್ದಿಯಲ್ಲಿರುವ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರು ಅಪರಿಚಿತರು ಮುಖ ಮುಚ್ಚಿಕೊಂಡು ಬಂದು ಗುಂಡು ಹಾರಿಸಿ ಗಾಯಗೊಳಿಸಿದ್ದಾರೆ ಎಂದು…

Read More

ಕ್ಯಾಂಪಸ್ ಸಂದರ್ಶನ:ಬಿಎಲ್ಡಿಇ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 18:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ನಲ್ಲಿ ಜೂನ್ 16 ಮಂಗಳವಾರ ಮತ್ತು ಜೂನ್ 17 ಬುಧವಾರ ಎರಡು ದಿನ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ 46 ಡಿಪ್ಲೋಮಾ ಮತ್ತು 48 ಐಟಿಐ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಧಾರವಾಡದ ನಿಡೆಕ್(NIDEK) ಸಂಸ್ಥೆ ಮತ್ತು ಬಿ.ಎಲ್.ಡಿ.ಇ ಪಾಲಿಟೆಕ್ನಿಕ್ ಹಾಗೂ ಐಟಿಐ ವತಿಯಿಂದ ಆಯೋಜಿಸಲಾದ ಈ ಕ್ಯಾಂಪಸ್ ಸಂದರ್ಶನದಲ್ಲಿ ನಿಡೆಕ್ ಮುಖ್ಯ ವ್ಯವಸ್ಥಾಪಕ ಸೋಮಶೇಖರ, ವ್ಯವಸ್ಥಾಪಕ ಮಂಜುನಾಥ, ಮಾನವ ಸಂಪನ್ಮೂಲ ವಿಭಾಗದ ಚಂದನಾ ಹಾಗೂ ನಿಶ್ಮಿತಾ ಸಂದರ್ಶನ…

Read More

ಜೀವ ಬೆದರಿಕೆ ಹಿನ್ನೆಲೆಯಲ್ಲಿ ಶ್ರೀ ಪ್ರಣವಾನಂದರಾಮ್ ಮಹಾಸ್ವಾಮಿಗಳಿಗೆ ಭದ್ರತೆ ನೀಡಿ: ಸ್ವಾಮೀಜಿಗಳಿಂದ ಸಿಎಂಗೆ ಮನವಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ.17:ಈಡಿಗ ಸಮುದಾಯದ ಗುರುಗಳಾದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಕಲಬುರ್ಗಿ ಶ್ರೀ ಶರಣಬಸವೇಶ್ವರ ಮಠ ಹಾವೇರಿ ಪೀಠಾಧಿಪತಿಗಳಾದ ಶ್ರೀ ಪ್ರಣವಾನಂದರಾಮ್ ಮಹಾಸ್ವಾಮಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಜೀವ ಬೆದರಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸ್ವಾಮೀಜಿಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಟ್ರಸ್ಟ್ ಹಾಗೂ ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ಸ್ವಾಮೀಜಿಗಳು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.ಮುಖ್ಯಮಂತ್ರಿಗಳ ಸದಾಶಿವನಗರ ನಿವಾಸಕ್ಕೆ ಸ್ವಾಮೀಜಿಗಳು ಬುಧವಾರ ಭೇಟಿ ನೀಡಿ ಮನವಿ ಮಾಡಿದರು. ಸರ್ವಧರ್ಮ…

Read More