saptsagar_admin

ಪ್ರೊ.ಭಗವಾನ್ ವಿರುದ್ಧ ಕಠಿಣ ಕ್ರಮಕ್ಕೆ ಸ್ವರಾಜ್ಯ ಸೇನಾ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 17:ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರನ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ ಪ್ರೊ.ಕೆ.ಎಸ್.ಭಗವಾನ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಜಯಪುರ ಸ್ವರಾಜ್ಯ ಸೇನಾ ವತಿಯಿಂದ ಮಂಗಳವಾರ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಕಿರಣ ಕಾಳೆ, ಇಡೀ ವಿಶ್ವಕ್ಕೆ ಆದರ್ಶವಾಗಿರುವ ಶ್ರೀ ರಾಮನ ಬಗ್ಗೆ ಮತ್ತು ಹಿಂದೂ ಸಂಸ್ಕೃತಿ ಬಗ್ಗೆ ಪ್ರೊ. ಕೆ.ಎಸ್.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ್ದು ಖಂಡನೀಯ. ಚುನಾವಣೆ ಸಮಯದಲ್ಲಿ ನನ್ನ…

Read More

ಗುಂಟಾ ಪ್ಲಾಟ್‌ಗಳಿಗೆ ವಿದ್ಯುತ್ ಮೀಟರ್ ನೀಡದ ಸರ್ಕಾರದ ಕ್ರಮ ಖಂಡನೀಯ: ಅಪ್ಪುರಾಜ್ ನಿಮಾದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 17:ಕರ್ನಾಟಕ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಗುಂಟಾ ಪ್ಲಾಟ್‌ಗಳಿಗೆ ವಿದ್ಯುತ್ ಮೀಟರ್‌ಗಳನ್ನು ನೀಡದೇ ಇರುವ ಸರ್ಕಾರದ ನೀತಿಯನ್ನು ಭೀಮ್ ರಾಜ್ಯ ದಲಿತ ಸೇವಾ ಸಮಿತಿ (ರಿ) ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ ತೀವ್ರವಾಗಿ ಖಂಡಿಸಿದ್ದಾರೆ.ರಾಜ್ಯದ ವಿವಿಧ ಭಾಗಗಳಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರು ತಮ್ಮ ಜೀವನಪೂರ್ತಿ ದುಡಿದು ಖರೀದಿಸಿರುವ ಸಣ್ಣ-ಸಣ್ಣ ಗುಂಟಾ ಪ್ಲಾಟ್‌ಗಳಲ್ಲಿ ಮನೆ ನಿರ್ಮಿಸಿ ವಾಸಿಸಲು ಮುಂದಾಗಿದ್ದಾರೆ. ಆದರೆ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿದರೂ ಮೀಟರ್ ನೀಡದೇ ಅಧಿಕಾರಿಗಳು ಹಾಗೂ ಸರ್ಕಾರ…

Read More

ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಹಿರಿದು- ಶ್ರೀನಿವಾಸ ಬಿದರಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 17: ತಲೆತಲಾಂತರದಿಂದ ಬಂದ ಆಸ್ತಿಗಳನ್ನು ನಮ್ಮ ಹಿರಿಯರು ದಾನ ನೀಡಿದ್ದರ ಫಲವಾಗಿ ಆರಂಭಗೊಂಡ ಶಿಕ್ಷಣ ಸಂಸ್ಥೆಗಳು ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸಿವೆ ಎಂದು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ಮುಖ್ಯ ಪ್ರಧಾನ ಆಯುಕ್ತರಾಗಿರುವ ವಿಜಯಪುರದ ಶ್ರೀನಿವಾಸ ಬಿದರಿ ಹೇಳಿದರು.ಆದಾಯ ತೆರಿಗೆ ಇಲಾಖೆಯಲ್ಲಿ ಪ್ರಧಾನ ಆಯುಕ್ತರಿಂದ ಮುಖ್ಯ ಪ್ರಧಾನ ಆಯುಕ್ತರೆಂದು ಬಡ್ತಿ ಪಡೆದಿರುವ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಅವರ ಸ್ನೇಹಿತರು, ಶಾಲಾ-ಕಾಲೇಜು ಸಹಪಾಠಿಗಳು ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿಜಯಪುರದ ದರ್ಬಾರ್, ಪಿಡಿಜೆ,…

Read More

ಸಮಾಜ ಕಾರ್ಯದಲ್ಲಿ ಕೌಶಲ್ಯ ಎಂಬುದು ಜ್ಞಾನವನ್ನು ಕ್ರಿಯೆಗೆ ತಿರುಗಿಸುವ ಸೇತುವೆ : ಸಂತೋಷ ಹಳೆಮನಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 16:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದಸಮಾಜ ಕಾರ್ಯ ವಿಭಾಗದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಹಾಗೂ ವೃತ್ತಿ ಅವಕಾಶಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ವೃತ್ತಿ ಮಾರ್ಗದರ್ಶನಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಸಂತೋಷ ಹಳೆಮನಿ ಮಾತನಾಡಿ, ಸಮಾಜ ಕಾರ್ಯ ಎಂದರೆ ಕೇವಲಪುಸ್ತಕದಲ್ಲಿರುವ ಸಿದ್ಧಾಂತವಲ್ಲ. ಅದು ಬದುಕಿನ ನಡುವೆ ಇಳಿದು, ಜನರ ನೋವಿಗೆ ಕಿವಿಯಾಗಿ, ಅವರ ಶಕ್ತಿಯಾಗುವ ಪ್ರಯೋಗ ಶಾಲೆ ಎಂದರು. ನಂತರ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆಪ್ರಸ್ತುತ ಉದ್ಯೋಗಾವಕಾಶಗಳು, ವೃತ್ತಿಪರ ರೆಸ್ಯೂಮ್ತಯಾರಿಕೆ, ಸಂದರ್ಶನ ಕೌಶಲ್ಯಗಳು, ಸಂವಹನ ಮತ್ತುವ್ಯಕ್ತಿತ್ವ…

Read More

ಕ್ರೀಡಾ ವಸತಿ ಶಾಲೆಗೆ ಅಬುಜಿರ್ ಮಕಾನದಾರ ಆಯ್ಕೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 16 : ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯ 7ನೇ ವರ್ಗದ ವಿದ್ಯಾರ್ಥಿ ಅಬುಜಿರ್ ಮಕಾನದಾರ ಈತನು ಹಾವೇರಿ ಜಿಲ್ಲೆಯ ಕ್ರೀಡಾ ವಸತಿ ಶಾಲೆಗೆ ಆಯ್ಕೆಯಾಗಿದ್ದಾನೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ವೈ. ಬಿ. ಗಿರಣಿವಡ್ಡರ ತಿಳಿಸಿದ್ದಾರೆ.ತಾಲೂಕು ಮಟ್ಟ, ಜಿಲ್ಲಾ ಮಟ್ಟ, ಬೆಳಗಾವಿ ವಿಭಾಗಮಟ್ಟದಲ್ಲಿ ಯುವ ಜನ ಸೇವಾ ಇಲಾಖೆಯ ವತಿಯಿಂದನಡೆದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿಜೇತನಾದಬಳಿಕ ಕ್ರೀಡಾ ವಸತಿ ಶಾಲೆಗೆ ಆಯ್ಕೆಯಾಗಿದ್ದಾನೆ.ಈತನ ಸಾಧನೆಗೆ ಶಾಲೆಯ ಸಹ ಶಿಕ್ಷಕ…

Read More

ನಿವೃತ್ತ ಯೋಧನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 16:ನಿವೃತ್ತ ಯೋಧನ ಮೇಲೆ ಮಾರಕಾಸ್ತ್ರಗಳಿಂದ ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆಜಿಲ್ಲೆಯ ಇಂಡಿ ನಗರದ ಕೆಇಬಿ ಎದುರಿಗಿನ ಮಸೂತಿ ಹತ್ತಿರ ನಡೆದಿದೆ.ಇಂಡಿ ತಾಲೂಕಿನ ಹಿರೇ ಮಸಳಿ ಗ್ರಾಮದ ನಿವೃತ್ತ ಯೋಧ ಮಾರುತಿ ಕ್ಷತ್ರಿ (45)ಎಂಬ ವ್ಯಕ್ತಿಯ ಮೇಲೆ ಭೀಕರ ಹಲ್ಲೆ ನಡೆದಿದೆ.ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮೂವರು ಮುಸುಕುಧಾರಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲಿಸಿದ್ದಾರೆ.ಇಂಡಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಟಿಪ್ಪರ್ – ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ: ಮಹಿಳೆ ಸೇರಿ ಮೂವರ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 16:ಟಿಪ್ಪರ್ ಹಾಗೂ ಸರ್ಕಾರಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಮೂವರು ಮೃತಪಟ್ಟು ಇತರ ಹತ್ತು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ.ಟಿಪ್ಪರ್ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಗೊತ್ತಾಗಿದೆ.ಟಿಪ್ಪರ್ ನಲ್ಲಿದ್ದ ಚಾಲಕ ಹಾಗೂ ಆತನ ಪತ್ನಿ ಮತ್ತು ಸರ್ಕಾರಿ ಬಸ್ ಚಾಲಕ ಸೇರಿ ಮೂವರು ಮೃತಪಟ್ಟಿದ್ದಾರೆ.ಟಿಪ್ಪರ್ ಚಾಲಕ ಅಶೋಕ ಉಟಗಿ ಹಾಗೂ ಪತ್ನಿ ರಾಧಾಬಾಯಿ…

Read More

ವೈದ್ಯರು ಕಣ್ಣಿಗೆ ಕಾಣುವ ದೇವರು: ಜನರ ನಂಬಿಕೆ ಉಳಿಸಿಕೊಳ್ಳಿ-ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ.16:“ವೈದ್ಯರು ಕಣ್ಣಿಗೆ ಕಾಣುವ ದೇವರು. ಜನ ಎಷ್ಟೇ ಕಷ್ಟ ಇದ್ದರೂ ಬಹಳ ನಂಬಿಕೆ ಹಾಗೂ ವಿಶ್ವಾಸದಿಂದ ವೈದ್ಯರ ಬಳಿ ಹೋಗುತ್ತಾರೆ. ನೀವು ಅವರ ನಂಬಿಕೆ ಉಳಿಸಿಕೊಂಡು ಸೇವೆ ಮಾಡಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ವೈದ್ಯ ಪದವೀಧರರಿಗೆ ಕಿವಿಮಾತು ಹೇಳಿದರು.ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಮಂಗಳವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವದಲ್ಲಿ ಶಿವಕುಮಾರ್ ಅವರು ಮಾತನಾಡಿದರು.ಇದೇ ಸಂದರ್ಭದಲ್ಲಿ ರಾಜ್ಯಪಾಲರ ಜತೆ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.“ಈ ವೃತ್ತಿಯಲ್ಲಿ…

Read More

ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 15 : ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು ‘ಕರ್ತವ್ಯ’ (KAAMS – Karnataka Advanced Attendance Management System) ಎಂಬ ನೂತನ ಮುಂದುವರಿದ ಹಾಜರಾತಿ ನಿರ್ವಹಣಾ ತಂತ್ರಜ್ಞಾನವನ್ನು ಜಾರಿಗೆ ತಂದಿದೆ.​ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಇಲಾಖಾ ಕಾರ್ಯದರ್ಶಿಗಳೊಂದಿಗೆ ನಡೆಸಿದ ಮೊದಲ ಸಭೆಯಲ್ಲೇ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಕಚೇರಿ ವೇಳೆಯಲ್ಲಿ ಕಡ್ಡಾಯವಾಗಿ ಶೇ.100ರಷ್ಟು ಹಾಜರಿರಬೇಕು ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು…

Read More

ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟೋಕ್ತಿ 

ಸಪ್ತಸಾಗರ ವಾರ್ತೆ ಬೆಂಗಳೂರು, ಜೂ.15: “ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ನಮ್ಮ ಸರ್ಕಾರ ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.ವೈದೇಹಿ ಆಸ್ಪತ್ರೆ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಪ್ರಚಾರ ಮಾಡುತ್ತಿವೆಯಲ್ಲ ಎಂದು ಕೇಳಿದಾಗ, “ಅವರುಗಳಿರುವುದೇ ಟೀಕೆ ಮಾಡಲು. ನಾವು ಏನೇ ಒಳ್ಳೆಯದು ಮಾಡಲು ಮುಂದಾದರೂ ಅದಕ್ಕೆ ಅಡ್ಡಗಾಲು ಹಾಕುವುದಕ್ಕೆ…

Read More