saptsagar_admin

ಬೆಳೆಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 26:ಮಳೆಯಿಂದ ಹಾನಿಗೊಳಗಾದ ಬೆಳೆ ಹಾನಿಯ ಜಂಟಿ ಸಮೀಕ್ಷೆ ಈಗಾಗಲೇ ಕೈಗೊಳ್ಳಲಾಗಿದ್ದು, ಎರಡು ದಿನಗಳಲ್ಲಿ ಬೆಳೆ ಹಾನಿಯ ಬಗ್ಗೆ ಪೂರ್ಣ ಪ್ರಮಾಣದ ಸಮಗ್ರ ಸಮೀಕ್ಷೆ ವರದಿಯನ್ನು ಸಲ್ಲಿಸುವಂತೆಯೂ. ಈ ಸಮೀಕ್ಷೆಯಲ್ಲಿ ಯಾವೊಬ್ಬ ಅರ್ಹ ರೈತರು ಹೊರ ಉಳಿಯದಂತೆ ಕಾಳಜಿವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮಂಗಳವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕುರಿತ ಸಭೆ ನಡೆಸಿ, ಮಾತನಾಡಿದ ಅವರು, ಬೆಳೆ…

Read More

ಆ. 29ರಂದು ಮಧುಮೇಹ ಜಾಗೃತಿ ಜಾಥಾ

ಸಪ್ತಸಾಗರ ವಾರ್ತೆ ವಿಜಯಪುರ, ಆ. 26: ನಗರದ ಪ್ರತಿಷ್ಠಿತ ಬಿ.ಎಲ್.ಡಿ.‌ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ್ ಪಬ್ಲಿಕ್ ಶಾಲೆಯ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಆ. 29 ರಂದು ಶುಕ್ರವಾರ ಮಧುಮೇಹ ಜಾಗೃತಿ ಜಾಥಾ ನಡೆಯಲಿದೆ.ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಈ ಜಾಗೃತಿ ಜಾಥಾ ನಡೆಯಲಿದೆ. ಸಕ್ಕರೆ ಕಾಯಿಲೆ ಹಲವು ರೋಗಗಳ ತವರಾಗಿದ್ದು, ಚಿಕ್ಕ ವಯಸ್ಸಿನಲ್ಲಿ ಅನೇಕ ಜನ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಅವರೆಲ್ಲರಲ್ಲಿ ಆರೋಗ್ಯದ ಜಾಗೃತಿಯನ್ನು ಉಂಟು ಮಾಡಲು ಈ…

Read More

ಕನಕ ಪಬ್ಲಿಕ್ ಶಾಲೆಯಲ್ಲಿ “ಮಾತೃ ಸಂಗಮ” ಕಾರ್ಯಕ್ರಮ

ಸಪ್ತಸಾಗರ ವಾರ್ತೆ ವಿಜಯಪುರ, ಆ. 26:ತಾನು ಕಷ್ಟಪಟ್ಟು ತನ್ನ ಮಕ್ಕಳು ಸುಖವಾಗಿ ಬಾಳಲಿ ಎಂದು ಮಕ್ಕಳಿಗೋಸ್ಕರ ಜೀವನವನ್ನು ಮುಡುಪಾಗಿಟ್ಟ ಈ ಜಗತ್ತಿನ ಶ್ರೇಷ್ಠ ತ್ಯಾಗ ಜೀವಿ ಅವ್ವ, ಅವ್ವನ ವ್ಯಕ್ತಿತ್ವವನ್ನು ವರ್ಣಿಸಲು ಪದಗಳೇ ಸಾಲದು, ನಮ್ಮ ಕಣ್ಣು ಮುಂದೆ ಕಾಣುವ ನಿಜವಾದ ದೇವತೆ ತಾಯಿ ಎಂದು ವಾಗ್ಮಿ ಸಾಹಿತಿ, ಅಶೋಕ ಹಂಚಲಿ ಹೇಳಿದರು.ಇಂದು ನಗರದ ಕರ್ನಾಟಕ ಕನಕದಾಸ ಶಿಕ್ಷಣ ಸಂಸ್ಥೆಯ ಕನಕ ಪೂರ್ವ ಪ್ರಾಥಮಿಕ ಪಬ್ಲಿಕ್ ಶಾಲೆ ಹಾಗೂ ಕನಕ ನವೋದಯ ಕೋಚಿಂಗ್ ಸೆಂಟರ್ ನಲ್ಲಿ ಹಮ್ಮಿಕೊಂಡ…

Read More

ಜೀವನದಲ್ಲಿ ಗುರಿ ಮುಖ್ಯ: ಸಾಧನೆಗೆ ಪರಿಶ್ರಮ ಅಗತ್ಯ-ಶಂಕರಗೌಡ ಸೋಮನಾಳ

ಸಪ್ತಸಾಗರ ವಾರ್ತೆ, ವಿಜಯಪುರ,ಆ.25:ಜೀವನದಲ್ಲಿ ಗುರಿ ಮುಖ್ಯ. ನಿಗದಿಪಡಿಸಿಕೊಂಡ ಗುರಿಯೊಂದಿಗೆ ತಮ್ಮ ಕನಸನ್ನು ನನಸಾಗಿಸಿಕೊಳ್ಳಲು ಪರಿಶ್ರಮ ಅಗತ್ಯ ಎಂದು ಮಹಿಳಾ ವಿಶ್ವ ವಿದ್ಯಾಲಯದ ರಜಿಸ್ಟ್ರಾರ್ ಶಂಕರಗೌಡ ಸೋಮನಾಳ ಅವರು ಹೇಳಿದರು.ಸೋಮವಾರ ಪರ್ಲ್ಸ್ ಕ್ಯಾಂಪಸ್‌ನಲ್ಲಿರುವಸರಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಪರಿಶಿಷ್ಟ ಪಂಗಡ ಉಪಯೋಜನೆಯಡಿಶಾಲಾ ವಿದ್ಯಾರ್ಥಿನಿಯರಿಗೆ ಆರು ತಿಂಗಳ ಕಾಲ ನೃತ್ಯಕಲಾ ತರಬೇತಿ ಶಿಬಿರದ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.ಎಲ್ಲರಲ್ಲೂ ಅಗಾಧವಾದ…

Read More

ಮನೆ ಮನೆಗೂ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಕ್ಕೆ ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.25:ನಗರದ ಪ್ರಸಿದ್ಧ ಕಾಮಿತಾರ್ಥಪ್ರದ ಶ್ರೀನಿವಾಸ ದೇವಸ್ಥಾನದ ಆವರಣದಲ್ಲಿ ನಡೆಯುವ ಭವ್ಯ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ಮತ್ತು ಮನೆ ಮನೆಗೂ ಶ್ರೀನಿವಾಸ ಕಾರ್ಯಕ್ರಮಕ್ಕೆ ಗುರುಗಳು ಚಾಲನೆ ನೀಡಿದರು.ಶ್ರೀಪಂ. ಸಂಜೀವ ಆಚಾರ ಮಧಬಾವಿ ಅವರ ನೇತೃತ್ವದಲ್ಲಿ ಮತ್ತು ಸಂಜೀವ ದೇಸಾಯಿ ಅವರ ಮಾರ್ಗದರ್ಶನದಿಂದ ಕಾರ್ಯಕ್ರಮ ಜರುಗುವುದು.ಗುರುಗಳ ಮಂತ್ರಾಕ್ಷತೆ ಅನುಗ್ರಹದಿಂದ ಬರುವ ಗುರುವಾರದಿಂದ ಕಾರ್ಯಕ್ರಮ ನಡೆಯುತ್ತಿದೆ. ಭಾಗ್ಯನಗರಕೆ ನಮ್ಮ ತಂಡದವರು ಆಗಮಿಸಿದ್ದರು. ಸಂಚಾಲಕ ಸಂಜೀವ ದೇಸಾಯಿ ಹಾಗೂ ಸದ್ಯಸರಾದ ಕೃಷ್ಣಾಜೀ ಕುಲಕರ್ಣಿ, ಗೋವಿಂದರಾಜ ದೇಶಪಾಂಡೆ, ಆನಂದ ಕುಲಕರ್ಣಿ, ಗುರುರಾಜ…

Read More

ಪರೀಕ್ಷೆಗಳಿಗೆ ಭಯ ಬೇಡ, ಸಿದ್ಧತೆ ಇರಲಿ-ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಆ.25: ನಿರಂತರ ಓದಿನಲ್ಲಿ ಯಶಸ್ಸಿನ ಗುಟ್ಟು ಅಡಗಿದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದುವ ಮೂಲಕ ಗುರಿ ಸಾಧನೆಯಡೆಗೆ ಸಾಗುವುದರೊಂದಿಗೆ ಸತತ ಅಧ್ಯಯನ ಪರಿಶ್ರಮದ‌ ಮೂಲಕ ಗುರಿ ತಲುಪಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಹೇಳಿದರು.ಭಾನುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಇವರ ಸಹಯೋಗದೊಂದಿಗೆ ಹಮ್ಮಿಕೊಂಡ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ವಿಷಯದ ಕುರಿತಾಗು ನಡೆದ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿ…

Read More

ಸಾರವಾಡಕ್ಕೆ ಎಲ್ಲ ಬಸ್‌ಗಳ ನಿಲುಗಡೆಗೆ ಕ್ರಮ: ಗ್ರಾಮಸ್ಥರಿಂದ ಹರ್ಷ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 25 : ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ, ವಾಯವ್ಯ ಕರ್ನಾಟಕ ಸಾರಿಗೆ ಬಸ್‌ಗಳ ನಿಲುಗಡೆಗೆ ಆಗ್ರಹಿಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ ಅನುಕೂಲ ಕಲ್ಪಿಸಲು ಕಳೆದ ಆಗಸ್ಟ್ 14 ರಂದು ಗ್ರಾಮಸ್ಥರು ಮೂರು ಗಂಟೆಗಳ ಕಾಲ ಸಾರವಾಡ ಗ್ರಾಮದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬಸ್‌ ನಿಲುಗಡೆಗೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಲಿಖಿತ ಭರವಸೆ ನೀಡಿದ್ದರು. ಭರವಸೆ ಈಡೇರಿಸಲು ವಿಫಲವಾದ ಹಿನ್ನೆಲೆಯಲ್ಲಿ ಆಗಷ್ಟೇ 26…

Read More

ಕಾಮಗಾರಿಗಳ ಸಮರ್ಪಕ ಅನುಷ್ಠಾನಕ್ಕೆ ಜಿಯೋ ಫೆನ್ಸಿಂಗ್ ಮೊಬೈಲ್ ಆ್ಯಪ್ ಕಡ್ಡಾಯ- ಡಾ.ವಿಜಯಕುಮಾರ ಆಜೂರ

ಸಪ್ತಸಾಗರ ವಾರ್ತೆ, ವಿಜಯಪುರ, ಆ.25: ಮನರೇಗಾ ಯೋಜನೆಯ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಕೇಂದ್ರ ಸರ್ಕಾರವು ಹೊಸ ವಿಧಾನವಾಗಿ ಜಿಯೋ ಫೆನ್ಸಿಂಗ್ ಮೊಬೈಲ್ ಆ್ಯಪ್ ಮೂಲಕ ಜಿಪಿಎಸ್ ಅವಕಾಶ ಕಲ್ಪಿಸಿದೆ ಎಂದು ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಡಾ. ವಿಜಯಕುಮಾರ ಆಜೂರ ಹೇಳಿದರು.ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳ್ಳುವ ಕಾಮಗಾರಿಗಳಿಗೆ ಜಿಯೋ ಫೆನ್ಸಿಂಗ್ ಆ್ಯಪ್ ಮೂಲಕ ಅದರ ಪ್ರಕ್ರಿಯೆಗಳ ಬಗ್ಗೆ ಕರ್ತವ್ಯ ನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಏರ್ಪಡಿಸಿದ ಒಂದು ದಿನದ ತರಬೇತಿ…

Read More

ನಾಳೆ ವಿಜಯಪುರ- ಬಬಲೇಶ್ವರ ಎರಡು ಬಸ್ಸುಗಳ ಸೇವೆ ಆರಂಭ

ಸಪ್ತಸಾಗರ ವಾರ್ತೆ ವಿಜಯಪುರ, ಆ. 25: ನಾಳೆ ಮಂಗಳವಾರದಿಂದ ವಿಜಯಪುರ- ಬಬಲೇಶ್ವರ ಮತ್ತು ಬಬಲೇಶ್ವರ- ವಿಜಯಪುರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭವಾಗಲಿದೆ.ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಸೂಚನೆ ಮೇರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಪ್ರತಿದಿನ‌ ಸಾರಿಗೆ ಎರಡು ಬಸ್ಸುಗಳನ್ನು ಈ ಮಾರ್ಗದಲ್ಲಿ ಓಡಿಸಲಿದೆ. ಒಂದು ಬಸ್ಸು ವಿಜಯಪುರ- ಖತಿಜಾಪುರ- ಸಾರವಾಡ ಮಾರ್ಗವಾಗಿ ಬಬಲೇಶ್ವರಕ್ಕೆ ಸಂಚರಿಸಿದರೆ ಮತ್ತೊಂದು ಬಸ್ಸು ಬಬಲೇಶ್ವರ- ಸಾರವಾಡ-…

Read More

ವಿಜಯಪುರ ಚಾ ಲಂಬೋದರನ ಭವ್ಯ ಮೆರವಣಿಗೆ ನಾಳೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 25:ಕೆ.ಎಸ್.ಆರ್.ಟಿ.ಸಿ, ದಾನೇಶ್ವರಿ ಹಾಗೂ ಮಹಾತ್ಮ ಗಾಂಧಿ ಕಾಲೊನಿಯ ವರದ ಹನುಮಾನ್ ಗಜಾನನ ತರುಣ ಮಂಡಳಿ ವತಿಯಿಂದ ನಾಳೆ ಆ.26 ರಂದು ನಗರದಲ್ಲಿ ವಿಜಯಪುರ ಚಾ ಲಂಬೋದರನ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.ಕೇಂದ್ರದ ಮಾಜಿ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ಸಂಜೆ 4 ಕ್ಕೆ ಛತ್ರಪತಿ ಶಿವಾಜಿ ಮಹಾರಾಜ್ ವೃತ್ತದಲ್ಲಿ ಮೆರವಣಿಗೆಗೆ ಚಾಲನೆ ನೀಡಲಿದ್ದು, ನೇತಾಜಿ ಸುಭಾಸಚಂದ್ರ ಭೋಸ್ ರಸ್ತೆ ಮೂಲಕ ಶ್ರೀ ವರದ ಹನುಮಾನ್ ದೇವಸ್ಥಾನ ವರೆಗೆ ಸಾಗಲಿದೆ.ಕಾರಣ…

Read More