
ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ- ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ
ಸಪ್ತಸಾಗರ ವಾರ್ತೆ,ವಿಜಯಪುರ,ಆ. 20: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಎನ್.ಆರ್.ಎಲ್.ಎಮ್ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿ ಶ್ರಮಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಹೇಳಿದರು.ಬುಧವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಾದಕ ವ್ಯಸನ ಮುಕ್ತ ಕರ್ನಾಟಕ ಕುರಿತು ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯದಾದ್ಯಂತ ಎರಡು ತಿಂಗಳ ಕಾಲ ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನವನ್ನು ಆರಂಭಿಸಲಾಗಿದ್ದು, ಅಭಿಯಾನದ ಭಾಗವಾಗಿ ಮಾದಕ ವಸ್ತುಗಳ ಬಳಕೆಯನ್ನು…