saptsagar_admin

ಸೆ. 26ರಂದು ಐಫೋನ್ ಕಂಪನಿ ಫಾಕ್ಸ್ ಕಾನ್ ಸಿಬ್ಬಂದಿ ನೇಮಕಕ್ಕೆ ವಿಜಯಪುರಕ್ಕೆ ಆಗಮನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ವಿಶ್ವಾದ್ಯಂತ ಮೊಬೈಲ್ ಪ್ರೀಯರು ಹೊಸ ಮಾದರಿ ಐಫೋನ್ ಖರೀದಿಗೆ ನಾನಾ ಮಹಾನಗರಗಳಲ್ಲಿ ಸಾಲಿನಲ್ಲಿ ನಿಲುತ್ತಿದ್ದಾರೆ. ಇಂಥ ಐಫೋನ್ ತಯಾರಿಸುವ ಅಂತಾರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್, ತನ್ನ ಕಂಪನಿಯಲ್ಲಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಬಸವನಾಡು ವಿಜಯಪುರಕ್ಕೆ ಆಗಮಿಸುತ್ತಿರುವುದು ಗಮನ ಸೆಳೆದಿದೆ.ಈ ಕಂಪನಿ ಬಿ.ಎಲ್.ಡಿ.ಇ ಸಂಸ್ಥೆ ಸಹಯೋಗದಲ್ಲಿ ನಗರದ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಸೆಪ್ಟೆಂಬರ್ 26 ರಂದು ಶುಕ್ರವಾರ ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ…

Read More

ಸಾಹಿತಿ ಭೈರಪ್ಪ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ಪದ್ಮಭೂಷಣ, ಪದ್ಮಶ್ರೀ ಸೇರಿದಂತೆ ಹಲವು ಗೌರವ, ಪುರಸ್ಕಾರಗಳಿಗೆ ಭಾಜನರಾಗಿದ್ದ ಖ್ಯಾತ ಕಾದಂಬರಿಕಾರ, ನಾಡೋಜ ಎಸ್‌.ಎಲ್‌. ಭೈರಪ್ಪ ಅವರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ ಮಿಡಿದಿದ್ದಾರೆ.ಕನ್ನಡ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಮಹನೀಯರಲ್ಲಿ ಒಬ್ಬರಾದ ಎಸ್‌. ಎಲ್‌. ಭೈರಪ್ಪ ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ಹಾನಿ ಉಂಟಾಗಿದೆ. ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್‌ ಗೌರವ ತಂದು ಕೊಟ್ಟ ಹೆಗ್ಗಳಿಕೆ ಅವರದ್ದು ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.ಭೈರಪ್ಪನವರ…

Read More

ಏಕತಾರಿ ರಾಮಯ್ಯನವರಿಗೆ ರಾಜ್ಯ ಪ್ರಶಸ್ತಿ ನೀಡಲು ಸಿಎಂಗೆ ಯತ್ನಾಳ್ ಒತ್ತಾಯ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ಜಾನಪದ ಗಾಯಕ, ತಂತಿ ವಾದ್ಯಗಳ ತಯಾರಕರಾದ ಏಕತಾರಿ ರಾಮಯ್ಯನವರ ಅವರಿಗೆ ರಾಜ್ಯ ಪ್ರಶಸ್ತಿ ನೀಡುವಂತೆ ಒತ್ತಾಯಿಸಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು, ಮುಖ್ಯಮಂತ್ರಿಗಳಾದ ಸಿದ್ದರಾಯಯ್ಯನವರಿಗೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.ಬೆಂಗಳೂರಿನ ಗೊಲ್ಲಹಳ್ಳಿ ಹೋಬಳಿಯ ಕೆಂಚನಪಾಳ್ಯ ಗ್ರಾಮದ ನಿವಾಸಿಯಾಗಿರುವ ಜಾನಪದ ಗಾಯಕ ಏಕತಾರಿ ರಾಮಯ್ಯನವರು ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ಪ್ರತಿಭೆಯ ಮೂಲಕ ಜಾನಪದ ಲೋಕಕ್ಕೆ ಸಾಕಷ್ಟು…

Read More

ಭೀಮಾ ನದಿಗೆ ಅಪಾರ ಪ್ರಮಾಣದ ನೀರು: ಪ್ರಭಾವದ ಭೀತಿಯಲ್ಲಿ ಜನರು

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 24:ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯಗಳಿಂದ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು,ಭೀಮಾನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಇದರಿಂದ ನದಿ ದಂಡೆ ಗ್ರಾಮಗಳ ನಿವಾಸಿಗಳಿಗೆ ಪ್ರವಾಹ ಭೀತಿ ಎದುರಾಗಿದೆ.ಚಡಚಣ, ಇಂಡಿ, ಆಲಮೇಲ ತಾಲೂಕಿನ ನದಿ ದಂಡೆ ಗ್ರಾಮದ ಜನತೆಯಲ್ಲಿ ಪ್ರವಾಹದ ಭೀತಿ ಉಂಟಾಗಿದೆ.ಭೀಮಾನದಿಗೆ ಅಡ್ಡಲಾಗಿ ನಿರ್ಮಿಸಿದ ಬ್ರಿಡ್ಜ್ ಕಂ ಬ್ಯಾರೇಜ್ ಗಳು ಜಲಾವೃತವಾಗಿವೆ.ಕರ್ನಾಟಕ, ಮಹಾರಾಷ್ಟ ಸರ್ಕಾರಗಳುಭೀಮಾ ನದಿಗೆ ಅಡ್ಡಲಾಗಿ ಸಮಾನಾಂತರವಾಗಿ ನಿರ್ಮಾಣ…

Read More

ಕೇಸಾಪುರದಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ: ರೈತರಿಗೆ ಆತಂಕ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.24:ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ ಗ್ರಾಮದ ಜಮೀನಿನಲ್ಲಿ ಬೃಹತ್ ಗಾತ್ರದ ಮೊಸಳೆ ಜಮೀನಿನಲ್ಲಿ ಪತ್ತೆಯಾಗಿದೆ.ಅಶೋಕ ಹಂಗರಗೊಂಡ ಎಂಬುವವರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು,ರೈತರು ಭಯಭೀತರಾಗಿದ್ದಾರೆ.ತೊಗರಿ ಬೆಳೆ ಮಧ್ಯೆ ಮೊಸಳೆ ಅವಿತುಕೊಂಡಿದೆ.ಬೃಹತ್ ಗಾತ್ರದ ಈ ಮೊಸಳೆಯನ್ನು ರೈತರು ಹರ ಸಾಹಸ ಮಾಡಿ ಹಗ್ಗದಿಂದ ಕಟ್ಟಿ ಹಾಕಿ ಸೆರೆ ಹಿಡಿದಿದ್ದಾ.ಅಶೋಕ ಹಗರಗೊಂಡ, ಮುದಕಪ್ಪ ಪೂಜಾರಿ, ಗದ್ದೆಪ್ಪ ಬೋಯಾರ, ಅಕ್ಬರ್ , ರಫೀಕ್ ಹಾಗೂ ಆಸೀಫ್ ತಾಳಿಕೋಟೆ ಎಂಬುವವರು ಸೇರಿಕೊಂಡು ಮೊಸಳೆ ಸೆರೆ ಹಿಡಿದು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಸುದ್ದಿ…

Read More

ಭಾಗ್ಯಲಕ್ಷ್ಮಿ ಯೋಜನೆ: ದಾಖಲೆ‌ ಸಲ್ಲಿಸಲು ಸೂಚನೆ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 23:2006-07ನೇ ಸಾಲಿನಲ್ಲಿ ಜನಿಸಿದ ಹೆಣ್ಣು ಮಕ್ಕಳಿಗೆ ಪ್ರಸಕ್ತ ಸಾಲಿನಲ್ಲಿ 18 ವರ್ಷ ಪೂರ್ಣಗೊಂಡಿದ್ದು, ಭಾಗ್ಯಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ಯೋಜನೆಯ ಮೊತ್ತ ಪಡೆಯಲು ಅಗತ್ಯ ದಾಖಲಾತಿಗಳನ್ನು ಅಕ್ಟೋಬರ್ 30ರೊಳಗಾಗಿ ವಿಜಯಪುರ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆಯೂ ಈ‌‌ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ವಿಜಯಪುರ ಐತಿಹಾಸಿಕ ಸ್ಮಾರಕ ತಾಜಬಾವಡಿಗೆ ಜಿಲ್ಲಾಧಿಕಾರಿ ಡಾ. ಆನಂದ‌ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ,ಸೆ.23:ನಗರದಲ್ಲಿ ಇರುವ ಐತಿಹಾಸಿಕ ಬಾವಿಯಾದ ತಾಜಬಾವಡಿ ಸ್ಮಾರಕಕ್ಕೆ ಜಿಲ್ಲಾಧಿಕಾರಿ ಡಾ. ಆನಂದ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು.ಅಡಾಪ್ಟ ಎ ಮೊನೊಮೆಂಟ್ ಯೋಜನೆಯಡಿ ತಾಜಬಾವಡಿ ಸ್ಮಾರಕವನ್ನು World Monument Fund India Associations Mumbai ಸಂಸ್ಥೆ ಅವರು ದತ್ತು ಪಡೆದಿದ್ದು, ಈ ಸ್ಮಾರಕದಲ್ಲಿ ಸಂರಕ್ಷಣೆ ಮತ್ತು ಪ್ರವಾಸಿ ಮೂಲಭೂತ ಸೌಕರ್ಯಗಳು, ಸೌಂದರೀಕರಣ, ಸುಧಾರಿತ ಪ್ರವಾಸಿ ಸೌಕರ್ಯಗಳನ್ನು ಒದಗಿಸಿ ದೇಶಿ-ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲು ಹಲವು ಯೋಜನೆ ರೂಪಿಸಿ ಹಮ್ಮಿಕೊಂಡಿರುತ್ತಾರೆ.ತಾಜಬಾವಡಿ ಅಭಿವೃದ್ಧಿಗೆ ಹಾಗೂ ಮೂಲಭೂತ ಸೌಕರ್ಯ ಒದಗಿಸಲು…

Read More

ಬಿಎಲ್ ಡಿಇ ಆಯುರ್ವೇದ ಕಾಲೇಜಿನಲ್ಲಿ ಉಚಿತ ಕಾಯ ಚಿಕಿತ್ಸೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 23: ನಗರದ ಬಿ.ಎಲ್‌.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಸೆಪ್ಟೆಂಬರ 26 ಮತ್ತು‌ 27 ರಂದು ಎರಡು ದಿನಗಳ ಕಾಲ ಉಚಿತ ತಪಾಸಣೆ ಶಿಬಿರ ನಡೆಯಲಿದೆ.ಈ ಶಿಬಿರದಲ್ಲಿ ಸ್ಥೂಲ ಕಾಯ (obesity) ಕುರಿತು ಉಚಿತ ತಪಾಸಣೆ ನೀಡಲಾಗುವುದು. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಮೊಬೈಲ್: 9343877670 ಅಥವಾ ಆಸ್ಪತ್ರೆಯ ಮೊಬೈಲ್: 9513397413 ಗೆ ಸಂಪರ್ಕಿಸುತೆ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ…

Read More

ಯುಕೆಪಿ 3ನೇ ಹಂತದ ಅನುಷ್ಠಾನಕ್ಕೆ ಸಮರ್ಪಕ ಪರಿಹಾರ ನಿಗದಿ ಅನುಕೂಲ: ಸಚಿವ ಎಂ.ಬಿ. ಪಾಟೀಲ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ. 23:ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಸಂತ್ರಸ್ತರಿಗೆ ಸರಕಾರ ಒಪ್ಪಿಗೆ ಸೂತ್ರದಡಿ ಸಮರ್ಪಕ ಪರಿಹಾರ ಘೋಷಣೆ ಮಾಡಿದ್ದು, ಇದರಿಂದ ಆಲಮಟ್ಟಿ ಜಲಾಷಯದ ಎತ್ತರವನ್ನು ಹೆಚ್ಚಿಸಿ ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತೀತರ ಜಿಲ್ಲೆಗಳ ಬಾಕಿ ಭೂಮಿಗೆ ನೀರಾವರಿ ಕಲ್ಪಿಸಲು ಅನುಕೂಲವಾಗಲಿದೆ ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಸೋಮವಾರ ಮುಸ್ಸಂಜೆ ಬಬಲೇಶ್ವರ ತಾಲೂಕಿನ ದೇವರ ಗಣ್ಣೂರಿನಲ್ಲಿ ಕೃಷ್ಣ ಮೇಲ್ದಂಡೆ ಹಂತ-3ರ ಯೋಜನಾ ಸಂತ್ರಸ್ತರಿಗೆ…

Read More

ಸ್ವಚ್ಚತೆ ಕಾಪಾಡುವ ಪೌರಕಾರ್ಮಿಕರ ಪಾತ್ರ ಮಹತ್ವವಾಗಿದೆ -ಮಡಿವಾಳಪ್ಪ ಕರಡಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 23:ಗ್ರಾಮ, ಪಟ್ಟಣ ಹಾಗೂ ನಗರವನ್ನು ಸ್ವಚ್ಛವಾಗಿರಿಸಿ ಸುಂದರವಾಗಿಸುವಲ್ಲಿ ಪೌರ ಕಾರ್ಮಿಕರ ಕಾರ್ಯ ಮಹತ್ವದ್ದಾಗಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರ ಮಡಿವಾಳಪ್ಪ ಕರಡಿ ಹೇಳಿದರು.ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ‌ ಇವರ ಸಹಯೋಗದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರದ ಸ್ವಚ್ಚತೆ ಹಾಗೂ ನೈರ್ಮಲ್ಯ ಕಾಪಾಡಲು ಪ್ರತಿನಿತ್ಯ ಶ್ರಮಿಸುವ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ. ಸ್ವಚ್ಛತಾ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ…

Read More