saptsagar_admin

ಆಡುಗೋಡಿಯಲ್ಲಿ ಸಿಲಿಂಡರ್ ಸ್ಪೋಟ: ಓರ್ವ ಬಾಲಕ ಸಾವು, ಹಲವರಿಗೆ ಗಾಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 15:ರಾಜ್ಯವೂ ಸೇರಿದಂತೆ ಇಡೀ ದೇಶದ ತುಂಬೆಲ್ಲ 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಜನತೆ ಮುಳುಗಿರುವಾಗಲೇ ನಗರದ ಆಡುಗೋಡಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ಬಾಲಕ ಮೃತಪಟ್ಟು ಹಲವರು ಗಾಯಗೊಂಡಿರುವ ದಾರುಣ ದುರಂತ ನಡೆದು ಜನರ ಮನ ಕಲಕುವಂತೆ ಮಾಡಿದೆ.ಮುಬಾರಕ್ (8) ಎಂಬ ಬಾಲಕ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಪಟ್ಟಿದ್ದು, ಇತರ 8 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.ಆಡುಗೋಡಿಯ ತಿಮ್ಮರಾಜು ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ…

Read More

ಬೆಂಗಳೂರಿನಲ್ಲಿ ಆ. 17ರಂದು ರಾಜ್ಯಮಟ್ಟದ ರೋಲ್ ಬಾಲ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 15: ಪ್ರಸಕ್ತ ಸಾಲಿನ 8 ನೇ ರಾಜ್ಯಮಟ್ಟದ ರೋಲ್ ಕ್ರೀಡಾಕೂಟವು ಆ. 17 ರಂದು ಸ್ಕೆಟಿಂಗ್ ಅಕಾಡೆಮಿ ಮಲ್ಲಸಂದ್ರ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಸುಪರ ಮಿನಿ 9 ವರ್ಷದ ಒಳಗಡೆ, ಮಿನಿ, 11 ವರ್ಷದ ಒಳಗಡೆ ಮತ್ತು 14 ವರ್ಷದ ಒಳಗಡೆ ಬಾಲಕ, ಬಾಲಕಿಯರು ಈ ಕ್ರೀಡಾಕೂಟದಲ್ಲಿ ವಿಜಯಪುರ ಜಿಲ್ಲಾ ರೊಲ ಬಾಲ ಕ್ರೀಡಾಪಟುಗಳು ಭಾಗವಹಿಸಬೇಕೆಂದು ವಿಜಯಪುರ ಜಿಲ್ಲಾ ರೋಲ್ ಬಾಲ ಸಂಸ್ಥೆ ಯ, ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ…

Read More

ಶೀಘ್ರವೇ ವಿಜಯಪುರದಲ್ಲಿ ಉಕ್ಕಿನಹಕ್ಕಿ ಹಾರಾಟ ಆರಂಭ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 15:ನಮಗೆ ಸಿಕ್ಕಿರುವ ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು ನಾವೆಲ್ಲರೂ ಸುಖವಾಗಿದ್ದೇವೆ. ಇದನ್ನು ನಾವು ಎಂದಿಗೂ ಮರೆಯದೆ, ಆ ಹಿರಿಯರಿಗೆ ಕೃತಜ್ಞರಾಗಿರಬೇಕು ಮತ್ತು ಈ ಸಂದೇಶವನ್ನು ನಮ್ಮ ಕಿರಿಯ ತಲೆಮಾರಿಗೂ ಮುಟ್ಟಿಸಬೇಕು. ಇದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ…

Read More

ವಿಜಯಪುರ ಜಿಲ್ಲೆಯನ್ನು 371 ಜೆ ಅಡಿ ಮೀಸಲಾತಿಗೆ ಸೇರಿಸಲು ಇಂಡಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 14:ಹೈದ್ರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಶ್ರೀ ಸ್ವಾಮಿ ರಮಾನಂದ ತೀರ್ಥರ ತವರು ವಿಜಯಪುರ ಜಿಲ್ಲೆಯನ್ನು ೩೭೧ ಜೆ ಮೀಸಲಾತಿಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ರೈತ ಭಾರತ ಪಕ್ಷದಿಂದ ಇಂಡಿ ಉಪ ವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳು, ಪ್ರಧಾನ ಮಂತ್ರಿ, ಕೇಂದ್ರ ಗೃಹಮಂತ್ರಿ, ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಸ್ವಾತಂತ್ರ್ಯ ಯೋಧಅಖಂಡ ಹೈದ್ರಾಬಾದ್ ಪ್ರಾಂತಕ್ಕೆ ಅಂದಿನ ಪ್ರದೇಶ ಕಾಂಗ್ರೆಸ್…

Read More

ಶಾಲಾ ಮಕ್ಕಳಿಗೆ ಉಚಿತ ಕಂಪ್ಯೂಟರ್ ವಿತರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 14:ಸರಕಾರಿ ಶಾಲೆಗಳು ಬೆಳೆಯಬೇಕು ಅಂದಾಗ ಮಾತ್ರ ಬಡ ಮಕ್ಕಳು ಬೆಳೆದು ಸಾಧನೆ ಮಾಡಲು ಸಾಧ್ಯ ಎಂದು ಡಾ.ಎಲ್.ಎಚ್ ಬಿದರಿ ಹೇಳಿದರು.ನಗರದ ಸರಕಾರಿ ಗಂಡು ಮಕ್ಕಳ ಶಾಲೆ ನಂ ೫ ರಲ್ಲಿ ಎಚ್.ಟಿ.ಬಿದರಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಶಾಲೆಯ ಮಕ್ಕಳಿಗೆ ಕಂಪ್ಯೂಟರ್ ಹಾಗೂ ಟೆಬಲ್‌ಗಳ ದೇಣಿಗೆ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಅವರು ಮಾತನಾಡಿದರು.ಇದು ನಾನು ಕಲಿತ ಶಾಲೆ ನನ್ನ ಶಾಲೆ ಮೇಲೆ ನನಗೆ ಹಮ್ಮೆ ಇದೆ. ಅದಕ್ಕಾಗಿ ನಾನು ನಮ್ಮ ಎಚ್.ಟಿ.ಬಿದರಿ…

Read More

ಮೂರು ದಿನಗಳ ಆಶಾಗಳ ಹೋರಾಟ ಅಂತ್ಯ

ಸಪ್ತಸಾಗರ ವಾರ್ತೆ, ವಿಜಯಪುರ,ಆ.14:ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಗುರುವಾರ ಮುಕ್ತಾಯಗೊಂಡಿತು.ವಿದ್ಯಾರ್ಥಿ,ಯುವಜನ, ದಲಿತ ಸಂಘಟನೆ, ಸರ್ಕಾರಿ ನಿವೃತ್ತಿ ಅಧಿಕಾರಿಗಳ ಸಂಘಟನೆ, ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆ, ಸಿಐಟಿಯು ಕಾರ್ಮಿಕ ಸಂಘಟನೆ ಹಾಗೂ ಜಿಲ್ಲೆಯ ಹಿರಿಯ ಸಾಹಿತಿಗಳಿಂದ ಹೋರಾಟಕ್ಕೆ ಬೆಂಬಲ ವ್ಯಕ್ತವಾಯಿತು.ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ನಿವೃತ್ತ ಅಧಿಕಾರಿ ಸುರೇಶ ಜೆ.ಬಿ ಮಾತನಾಡಿ, ಕನಿಷ್ಠ ಜೀವನ ನಡೆಸಲು ೧೫೦೦೦ ಸಂಬಳ…

Read More

ವಿಜಯಪುರದಲ್ಲಿ 300 ಮೀಟರ್ ಉದ್ದದ ತಿರಂಗಾ ಯಾತ್ರೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 14: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 300 ಮೀ ಉದ್ದದ ಬೃಹತ್ ತಿರಂಗಾ ಯಾತ್ರೆಯನ್ನು ಗುರುವಾರ ಏರ್ಪಡಿಸಿತ್ತು.ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು “ಭಾರತ್ ಮಾತಾ ಕೀ ಜೈ” “ವಂದೇ ಮಾತರಂ” ದೇಶ ಮೊದಲು ಎನ್ನುವ ಘೋಷಣೆಗಳನ್ನು ಕೂಗುತ್ತಾ ತಿರಂಗವನ್ನು ಹಿಡಿದು ನಗರದ ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದ ಮೂಲಕ ಸಿದ್ದೇಶ್ವರ ದೇವಸ್ಥಾನದವರೆಗೆ ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ…

Read More

ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವವರಿಗೆ ಅವಕಾಶ

ಸಪ್ತಸಾಗರ ವಾರ್ತೆ,ಬೆಂಗಳೂರು, ಆ. 14: ಕರ್ನಾಟಕ ವೃತ್ತಿಪರ ತರಬೇತಿ ಹಾಗೂ ಕೌಶಲ್ಯ ನಿಗಮ ವತಿಯಿಂದ ಆ. 17ರಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ 2025 ನೇ ಸಾಲಿನ ವಿದೇಶಗಳಲ್ಲಿ ಅಧ್ಯಯನ ಮೇಳ ಆಯೋಜಿಸಿದೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ( ಶಿವಕಾಂತಮ್ಮ) ನಾಯಕ ತಿಳಿಸಿದ್ದಾರೆ.ಎಕ್ಸ್‌ಪೋದಲ್ಲಿ 60 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದ್ದು, ವಿಶ್ವವಿದ್ಯಾಲಯದ ಪ್ರತಿನಿಧಿಗಳೊಂದಿಗೆ ಒನ್-ಆನ್-ಒನ್ ಸೆಷನ್, ಸ್ಪಾಟ್ ವಿದ್ಯಾರ್ಥಿ ವೇತನಗಳು ಮತ್ತು ಅರ್ಹತಾ ಮೌಲ್ಯಮಾಪನಗಳು, ವೀಸಾ…

Read More

ಸೆ. 13 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್:ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ-ಜಿಲ್ಲಾ ನ್ಯಾಯಾಧೀಶ ಹರೀಶ್

ಸಪ್ತಸಾಗರ ವಾರ್ತೆ ವಿಜಯಪುರ, ಆ. 14: ಜಿಲ್ಲಾ ಕೇಂದ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 13ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‌ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿರುವುದರಿಂದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ. ಎ ಅವರು ತಿಳಿಸಿದರು.ಗುರುವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಕಟ್ಟಡದಲ್ಲಿ…

Read More

ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲು

ಸಪ್ತಸಾಗರ ವಾರ್ತೆ, ವಿಜಯಪುರ,ಆ. 13:ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಗಾಂಧಿ ಚೌಕ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಾಗಿದೆ.ಇತ್ತೀಚೆಗೆ ಕೊಪ್ಪಳದಲ್ಲಿ ನಡೆದ ಗವಿಸಿದ್ದಪ್ಪ ನಾಯಕ್ ಎಂಬ ಯುವಕನ ಕೊಲೆ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಹೋದ ಸಂದರ್ಭದಲ್ಲಿ ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ 5 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಶಾಸಕ ಯತ್ನಾಳ್ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕದಡುವಂತಿದೆ. ಹಾಗಾಗಿ ಶಾಸಕರ ವಿರುದ್ಧ ಕಾನೂನು…

Read More