saptsagar_admin

ಸಂಭ್ರಮದಿಂದ ನಡೆದ ರಾಯರ ಉತ್ತಾರಾರಾಧನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 12 : ಗುರು ಸಾರ್ವಭೌಮರ 354 ನೇ ಆರಾಧನಾ ಮಹೋತ್ಸವದ ಅಂಗವಾಗಿ ಇಲ್ಲಿನ ದಿವಟಗೇರಿ ಗಲ್ಲಿಯ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸನ್ನಿಧಾನದಲ್ಲಿ ಕಳೆದೆರಡು ದಿನಗಳಿಂದ ನಡೆಯುತ್ತಿದ್ದ ಗುರು ರಾಯರ ಆರಾಧನಾ ಮಹೋತ್ಸವವು ಮಂಗಳವಾರ ಉತ್ತಾರಾರಾಧನೆ ಮೂಲಕ ಸಂಪನ್ನಗೊಂಡಿತು.ಬೆಳಗ್ಗೆ ಸುಪ್ರಭಾತ, ವಿವಿಧ ಅರ್ಚಕರ ನೇತೃತ್ವದಲ್ಲಿ ರಥಾಂಗ ಹವನ, ಶ್ರೀಹರಿ-ವಾಯುಸ್ತುತಿ ಪುನಶ್ಚರಣ, ಶ್ರೀಗುರುಸ್ತೋತ್ರ ಅಷ್ಟೋತ್ತರ ಶತಃಪಠಣಪೂರ್ವಕ ಶ್ರೀಗುರುಸಾರ್ವಭೌಮರಿಗೆ 108 ಕಲಶದಿಂದ ವಿವಿಧ ಹಣ್ಣು ಹಂಪಲಗಳ ಕ್ಷೀರಾಭಿಷೇಕ ಹಾಗೂ ಮಹಾಪಂಚಾಮೃತಾಭಿಷೇಕ ನೆರವೇರಿಸಲಾಯಿತು.ನಂತರ ಶ್ರೀಮಠದ ಪ್ರಾಂಗಣದಲ್ಲಿ ಪಲ್ಲಕ್ಕಿ…

Read More

ತಿರಂಗಾ ಜನಯಾತ್ರೆ ಅಭಿಯಾನಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 12:ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಹರ್-ಘರ್ ತಿರಂಗಾ ಅಭಿಯಾನದಡಿ ಐತಿಹಾಸಿಕ ಗೋಲಗುಮ್ಮಟದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಸೈಕಲ್ ರ್ಯಾಲಿ ಹಾಗೂ ತಿರಂಗಾ ಜನಯಾತ್ರೆ ಜಿಲ್ಲಾಧಿಕಾರಿ ಕಚೇರಿಯವರೆಗೆ ಹಮ್ಮಿಕೊಳ್ಳಲಾಯಿತು.ಗೋಳಗುಮ್ಮಟ ಆವರಣದಿಂದ ನಡೆದ ಈ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ ನೀಡಿದರು.ಕಮಾಂಡೋ ಅಕಾಡೆಮಿಯ‌ ಹಾಗೂ ನಗರದ ಸೈಕ್ಲಿಸ್ಟ್ ಅವರು ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಜಾಥಾ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ‌ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ, ಹಿಂದುಳಿದ ವರ್ಗಗಳ ಕಲ್ಯಾಣ…

Read More

ಬಿಎಲ್ ಡಿಇ ಡೀಮ್ಡ್ ವಿವಿ ವತಿಯಿಂದ ಹರ್ ಘರ್ ತಿರಂಗಾ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 12: ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಮಂಗಳವಾರ ಹರ್ ಘರ್ ತಿರಂಗಾ ರ‍್ಯಾಲಿ ನಡೆಯಿತು.ಡೀಮ್ಡ್ ವಿವಿ‌ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಅವರು ತಿರಂಗಾ ರ‍್ಯಾಲಿಗೆ ಚಾಲನೆ ನೀಡಿದರು.ಈ ರ‍್ಯಾಲಿಯು ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಮುಂಭಾಗದ ಸೋಲಾಪೂರ ರಸ್ತೆಯಿಂದ 770 ಲಿಂಗದ ದೇವಸ್ಥಾನ, ಸಂಗನಬಸವ ಕಲ್ಯಾಣ ಮಂಟಪ ಮಾರ್ಗವಾಗಿ ಬಿ.ಎಲ್.ಡಿ.ಇ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಏನ್.ಆರ್.ಐ ಹಾಸ್ಟೇಲ್ ಮಾರ್ಗವಾಗಿ ಮರಳಿ ವಿಶ್ವವಿದ್ಯಾಲಯದಲ್ಲಿ…

Read More

ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಗೌರವಧನ ಹೆಚ್ಚಳ ಕುರಿತು ಚರ್ಚೆಗೆ ಒಪ್ಪಿಗೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 12:ನಗರ ಸ್ಥಳೀಯ ಸಂಸ್ಥೆಗಳ ಮೇಯರ್, ಉಪಮೇಯರ್, ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಿಸುವ ಕುರಿತು ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರ ಮನವಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಒಪ್ಪಿಗೆ ನೀಡಿದ್ದಾರೆ.ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದಲ್ಲಿ ಇಂದು ಮಂಗಳವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಸುನೀಲಗೌಡ ಪಾಟೀಲ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಂ ಖಾನ್…

Read More

ಆಟವಾಡುತ್ತ ಬಾವಿಗೆ ಬಿದ್ದು ಬಾಲಕಿ ಸಾವು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 12: ಬಾಲಕಿಯೊಬ್ಬಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಇಂಡಿ ಪಟ್ಟಣ ಹೊರವಲಯದ ಧನಸಿಂಗ್ ತಾಂಡಾದಲ್ಲಿ ನಡೆದಿದೆ.ಅರ್ಚನಾ ರಾಠೋಡ (8) ಮೃತಪಟ್ಟ ಬಾಲಕಿ.ತಾಯಿಯೊಂದಿಗೆ ಕುರಿ ಮೇಯಿಸಲು ಹೋದಾಗ ಆಟವಾಡುತ್ತಾ ಆಕಸ್ಮಿಕವಾಗಿ ಬಾಲಕಿ ಅರ್ಚನಾ ಸೋಮವಾರ ಸಂಜೆ ಬಾವಿಯಲ್ಲಿ ಬಿದ್ದಿದ್ದಳು.ಅಗ್ನಿಶಾಮಕ ದಳದ ಸಿಬ್ಬಂದಿ ಮಿಂಚಿನ ಕಾರ್ಯಾಚರಣೆ ನಡೆಸಿ ಮಂಗಳವಾರ ಬಾಲಕಿ ಶವವನ್ನು ಹೊರ ತೆಗೆದಿದ್ದಾರೆ. ಇಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಂಬಿದ ಇಬ್ರಾಹಿಂಪುರ ಐತಿಹಾಸಿಕ ‘ಹಿರೇಬಾವಿ’ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಗ್ರಹಣ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 12 : ಇದು ವಿಜಯಪುರ ನಗರದ ಮನಗೂಳಿ- ಬಸವನ ಬಾಗೇವಾಡಿ ರಸ್ತೆ ಪಕ್ಕದ ಇಬ್ರಾಹಿಂಪುರ ಬಡಾವಣೆಯಲ್ಲಿರುವ ಪ್ರಾಚೀನವಾದ ಐತಿಹಾಸಿಕ ಹಿರೇಬಾವಿ. ಇದನ್ನು ವಿಜಯಪುರದ ಎರಡನೇ ‘ತಾಜ್ ಬಾವಡಿ’ ಎಂದರೂ ತಪ್ಪಾಗಲಿಕ್ಕಿಲ್ಲ.ಇಬ್ರಾಹಿಂಪುರದ ಹಿರೇಬಾವಿ ನೋಡಿದ ಯಾರಿಗೇ ಆಗಲಿ ಥಟ್ಟನೆ ‘ತಾಜ್ ಬಾವಡಿ’ ಅವರ ನೆನಪಿಗೆ ಬರದೇ ಇರದು.ತಾಜ್ ಬಾವಡಿಯಂತೆಯೇ ವಿಶಾಲವಾಗಿದೆ ಆದಿಲಶಾಹಿ ಕಾಲದ ಈ ಹಿರೇಬಾವಿ. ನೂರಕ್ಕೂ ಅಧಿಕ ಕಟ್ಟೆಗಳು, ಹಲವು ಕಮಾನುಗಳಿರುವ ಅದ್ಭುತ, ಸುಸಜ್ಜಿತ ಹಾಗೂ ಅತ್ಯಾಕರ್ಷಕ ಕಟ್ಟಡವನ್ನು ಈ ಹಿರೇಬಾವಿ ಹೊಂದಿದೆ.ಈ…

Read More

ಗೋಧಿ ದಾಸ್ತಾನು ಮಿತಿ ನಿಗದಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 11: ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ನಿರ್ದೇಶಕರ ಜೂನ್ 2ರ ಪತ್ರದ ಮೇರೆಗೆ ಮುಕ್ತ ಮಾರುಕಟ್ಟೆಯ ಸಗಟುದಾರರಿಗೆ 3 ಸಾವಿರ ಮೆಟ್ರಿಕ್ ಟನ್, ರಿಟೇಲರಗಳಿಗೆ 10 ಸಾವಿರ ಮೆಟ್ರಿಕ್ ಟನ್ ಹಾಗೂ ಉತ್ಪಾದಕರಿಗೆ ಅವರ ಉತ್ಪಾದನಾ ಸಾಮರ್ಥ್ಯದ ಶೇ. 70ರಷ್ಟು ಗೋಧಿ ದಾಸ್ತಾನು ಮಿತಿಯನ್ನು 31-03-2026ರವರೆಗೆ ನಿಗದಿ ಪಡಿಸಲಾಗಿದೆ.ಜಿಲ್ಲೆಯ ಗೋಧಿ ಸಗಟು ವ್ಯಾಪಾರಸ್ಥರು, ರಿಟೇಲರ್ಸ್ ಹಾಗೂ ಗೋಧಿ ಉತ್ಪಾದನೆ ಮಾಡುವವರು ತಮ್ಮಲಿರುವ ಗೋಧಿ ದಾಸ್ತಾನಿನ ಮಾಹಿತಿಯನ್ನು ತುರ್ತಾಗಿ…

Read More

ಇಬ್ರಾಹಿಂಪುರ ಸುಸಜ್ಜಿತ ರೈಲು ನಿಲ್ದಾಣ ಕಟ್ಟಡಕ್ಕೆ 1.50 ಕೋಟಿ ಮಂಜೂರು

ಸಪ್ತಸಾಗರ ವಾರ್ತೆ,ವಿಜಯಪುರ,ಆ. 11 : ನಗರದಲ್ಲಿರುವ ಇಬ್ರಾಹಿಂಪೂರ ರೈಲ್ವೆ ನಿಲ್ದಾಣದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕಾಗಿ ಅಂದಾಜು 1.50 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲಿಯೇ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಮಾಹಿತಿ ನೀಡಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ನಗರದ ಇಬ್ರಾಹಿಂಪೂರ ಭಾಗದ ಜನತೆಯ ಅನುಕೂಲಕ್ಕಾಗಿ ರೈಲ್ವೆ ನಿಲ್ದಾಣ ಇರಬೇಕು ಎನ್ನುವ ಕಾರಣಕ್ಕೆ ಆಗ ನಿಲ್ದಾಣ ಆರಂಭಿಸಲು ವಿಶೇಷ ಪ್ರಯತ್ನ ವಹಿಸಿ ಯಶಸ್ವಿಯಾಗಿದ್ದೆನು. ಈ ಇಬ್ರಾಹಿಂಪೂರ ರೈಲ್ವೆ ನಿಲ್ದಾಣ…

Read More

ಸುಕ್ಷೇತ್ರ ಧರ್ಮಸ್ಥಳದ ಅಪಪ್ರಚಾರದ ವಿರುದ್ಧ ಆಗಸ್ಟ್ 13ರಂದು ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 11:ಸುಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆದಿರುವ ಅಪಪ್ರಚಾರವನ್ನು ಖಂಡಿಸಿ ಆ. 13ರಂದು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಶ್ರೀಧರ್ಮಸ್ಥಳ ಭಕ್ತಾಭಿಮಾನಿ ಹಾಗೂ ಲಿಂಬೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು.ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಶ್ರೀ ಧರ್ಮಸ್ಥಳದ ಬಗ್ಗೆ ಷಡ್ಯಂತ್ರ ರೂಪಿಸಿ ಸುಕ್ಷೇತ್ರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ನಡೆದಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.ಆ. 13ರಂದು ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಡಾ….

Read More

ಗ್ರಾಮೀಣರ ಬದುಕು ಸುಧಾರಣೆಗೆ ಆದ್ಯತೆ ನೀಡಿ-ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 11: ಜಿಲ್ಲೆಯ ಗ್ರಾಮೀಣ ಜನರ ಜೀವನ ಸುಧಾರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ತತ್‌ಕ್ಷಣ ಸ್ಪಂದಿಸಿ, ಪರಿಹಾರ ಒದಗಿಸಲು ಹಾಗೂ ಮೂಲಸೌಲಭ್ಯಗಳನ್ನು ಆದ್ಯತೆ ಮೇಲೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗ್ರಾಮೀಣ ಭಾಗದ ಜನರು ಯಾವುದೇ ಮೂಲಭೂತ ಸೌಲಭ್ಯಗಳಿಂದ…

Read More