saptsagar_admin

ಯುವನಿಧಿ: ಸ್ವಯಂ ಘೋಷಣೆಗೆ ಸೂಚನೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ.8:ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡಿರುವ ಫಲಾನುಭವಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ತಮ್ಮ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು.ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳ ಸ್ವಯಂ ಘೋ಼ಷಣೆಯನ್ನು ಆಗಸ್ಟ್ 25ರೊಳಗಾಗಿ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು.ಯುವನಿಧಿ ಯೋಜನೆ ನೋಂದಣಿ‌ ಮಾಡಿಕೊಂಡಿರುವವರು ತಮ್ಮ ಅರ್ಜಿಯನ್ನುhttps://sevadindhuservices.karnataka.gov.in ವೆಬ್‌ಸೈಟ್‌ ಮೂಲಕ ಪರಿಶೀಲಿಸಿಕೊಳ್ಳಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08352-250383 ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗ…

Read More

ಆ. 11 ರಂದು ಬಿ.ಎಲ್.ಡಿ.ಇ ಲೈಫ್ ಕೇರ್ ಪ್ರೊಡಕ್ಟ್ಸ್ ಘಟಕ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 8: ನಗರದ ಬಿ.ಎಲ್.ಡಿ.ಇ ಲೈಫ್ ಕೇರ್ ಪ್ರೊಡಕ್ಟ್ಸ್ ಗಳ ಘಟಕವಾದ ಆರೋಗ್ಯ ಫಾರ್ಮಸಿ ಉದ್ಘಾಟನೆ ಕಾರ್ಯಕ್ರಮ ಆಗಷ್ಡ 11ರಂದು ಸೋಮವಾರ ನಡೆಯಲಿದೆ.770 ಲಿಂಗದ ಗುಡಿ ಹತ್ತಿರವಿರುವ ಬಿ.ಎಲ್.ಡಿ ಸೌಹಾರ್ದ ಸಹಕಾರಿ ಶಾಖೆಯ ನೆಲ ಅಂತಸ್ತಿನಲ್ಲಿ ಕಟ್ಟಡದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ…

Read More

ಪರಿಸರ ಸ್ನೇಹಿ ಗಣೇಶ ವಿಗ್ರಹಗಳ ಬಳಕೆ ಕುರಿತು ಸೂಕ್ತ ತಿಳುವಳಿಕೆ ಮೂಡಿಸಿ- ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 8:ಜಿಲ್ಲೆಯಾದ್ಯಂತ ಆಚರಿಸುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪಿಒಪಿ ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳನ್ನು ಬಳಸುವುದು ನಿಷೇಧದ ಬಗ್ಗೆ ಹಾಗೂ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಕುರಿತು ಜನರಲ್ಲಿ ಸೂಕ್ತ ತಿಳಿವಳಿಕೆ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಅವರು ಸೂಚಿಸಿದ್ದಾರೆ.ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪರಿಸರಕ್ಕೆ ಹಾನಿಯನ್ನುಂಟು ಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ…

Read More

ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ: ಸಿ.ಎಂ

ಸಪ್ತಸಾಗರ ವಾರ್ತೆ,ಬೆಂಗಳೂರು ಆ.8:ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು.ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ…

Read More

ಬಂಜಾರ ಅಭಿವೃದ್ಧಿ ನಿಗಮ ಕಚೇರಿಗೆ ಮುತ್ತಿಗೆ ಯತ್ನ: 40ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಬಂಧನ, ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 8: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಿರಿಸಿದ ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿರುವ ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಭಾರತೀಯ ಜನತಾ ಪಕ್ಷ ರಾಜ್ಯದಾದ್ಯಂತ ಪ್ರತಿಭಟನೆಗೆ ಅಣಿಯಾದ ಹಿನ್ನೆಲೆಯಲ್ಲಿ ಹೋರಾಟದ ಭಾಗವಾಗಿ ಬಿಜೆಪಿ ಕಾರ್ಯಕರ್ತರು ಬಂಜಾರಾ ಅಭಿವೃದ್ಧಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ತಡೆಯಲು ಮುಂದಾದರು. ಈ ವೇಳೆ ಕೆಲ ಕಾಲ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ…

Read More

ಯೋಜನೆಗಳ ಜಾರಿಗೆ ಅನುದಾನ ನೀಡದ ಸರ್ಕಾರ: ಕಾರಜೋಳ ಟೀಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 8: ಸಾಮಾಜಿಕ ಯೋಜನೆಗಳ ಜಾರಿಗೆ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಉದಾಸೀನ ತೋರುತ್ತಿದೆ. ಸಾಮಾಜಿಕ ಯೋಜನೆಗಳನ್ನು ಅನುಷ್ಠಾನಗೊಳಿಸುವ ಅನೇಕ ನಿಗಮಗಳಲ್ಲಿ ಭ್ರಷ್ಟಾಚಾರ ದೊಡ್ಡ ಮಟ್ಟದಲ್ಲಿ ನಡೆದಿದೆ. ಗಂಗಾ ಕಲ್ಯಾಣ, ಸ್ವಯಂ ಉದ್ಯೋಗಕ್ಕಾಗಿ ನೇರ ಸಾಲ ಯೋಜನೆ ಸೇರಿದಂತೆ ಯಾವ ಯೋಜನೆಗಳಿಗೂ ಸಮರ್ಪಕವಾಗಿ ಅನುದಾನವನ್ನೇ ಸರ್ಕಾರ ಬಿಡುಗಡೆ ಮಾಡಿಲ್ಲ. ಸರ್ಕಾರ ಕೂಡಲೇ ಈ ಯೋಜನೆಗಳಿಗೆ ಸಂಬಂಧಿಸಿದಂತೆ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನಕಾರ್ಯದರ್ಶಿ ಉಮೇಶ ಕಾರಜೋಳ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.ಈ…

Read More

ಬಿಎಲ್ ಡಿಇ ಡೀಮ್ಡ್ ವಿವಿಗೆ ರ‍್ಯಾಂಕ್

ಸಪ್ತಸಾಗರ ವಾರ್ತೆ, ವಿಜಯಪುರ, ಆ. 8: ದೇಶದ ಹೆಸರಾಂತ ನಿಯತಕಾಲಿಕ ಔಟಲುಕ್-ಐಸಿಎಆರ್‌ಇ ನಡೆಸಿದ ವಿಶ್ವವಿದ್ಯಾಲಯ ರ‍್ಯಾಂಕ್ ಕಿಂಗ್ – 2025ರ ಸಮೀಕ್ಷೆಯಲ್ಲಿ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮೂರು ವಿಭಾಗಗಳಲ್ಲಿ ರ‍್ಯಾಂಕ್(Rank) ಪಡೆದಿದೆ.ದೇಶದ 15 ಖಾಸಗಿ ವೈದ್ಯಕೀಯ ವಿಶ್ವವಿದ್ಯಾಲಯಗಳಲ್ಲಿ 4ನೇ ‌ರ‍್ಯಾಂಕ್(Rank), ದೇಶದ 25 ಮಲ್ಟಿ-ಡಿಸಿಪ್ಲಿನರಿ ಡೀಮ್ಡ್ ವಿವಿಗಳಲ್ಲಿ 10ನೇ ‌ರ‍್ಯಾಂಕ್(Rank), ಹಾಗೂ ದೇಶದ 15 ಡೀಮ್ಡ್ ವಿವಿ ನ್ಯಾಶನಲ್ ಎಮಿನನ್ಸ್ ವಿಭಾಗದಲ್ಲಿ 10ನೇ ರ‍್ಯಾಂಕ್ (Rank) ಪಡೆಯುವ ಮೂಲಕ ಗಮನ ಸೆಳೆದಿದೆ.ವಿವಿಯ ಈ ಸಾಧನೆಗೆ…

Read More

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 8:ಜಿಲ್ಲೆಯ ತಿಕೋಟಾ ತಾಲೂಕಿನ ಲೋಹಗಾಂವ ಗ್ರಾಮದಲ್ಲಿ ಬುಧವಾರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಜರುಗಿತು.ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಗುರುಪಾದಗೌಡ ದಾಶ್ಯಾಳ ಅವರು ಮಾತನಾಡಿ, ಹೆಣ್ಣು ಮಕ್ಕಳಿಗೆ ಶಿಕ್ಷಣ ಒದಗಿಸಲೂ ಸಹ ಹಿಂದೇಟು ಹಾಕುವಂತಹ ವ್ಯವಸ್ಥೆ ಆಗಿನ ಕಾಲದಲ್ಲಿತ್ತು. ಈ ನಿಟ್ಟಿನಲ್ಲಿ ಆರ್ಥಿಕ ಅಸಮಾನತೆ, ಸಾಮಾಜಿಕ ಅಸಮಾನತೆ, ಲಿಂಗ ಅಸಮಾನತೆ ಮತ್ತು ಶೈಕ್ಷಣಿಕ ಅಸಮಾನತೆ ವ್ಯವಸ್ಥೆಯನ್ನು ಹೋಗಲಾಡಿಸಲು ಮತ್ತು ಉತ್ತಮ…

Read More

ಆ. ೧೨ರಿಂದ೧೪ ರವರೆಗೆ ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನಾ ಧರಣಿ

ಸಪ್ತಸಾಗರ ವಾರ್ತೆ, ವಿಜಯಪುರ,ಆ.7:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.೧೨, ೧೩ ಹಾಗೂ ೧೪ರಂದು ರಾಜ್ಯಾದ್ಯಂತ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಎಂದು ಆಶಾ ಸಂಘಟನೆ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ. ಅವರು ತಿಳಿಸಿದ್ದಾರೆ.ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಆರೋಗ್ಯದ ಆಶಾಕಿರಣ. ಆರೋಗ್ಯ ಸೇವೆಗಳನ್ನು ಪಡೆಯಲು ಕಷ್ಟಪಡುವ ಗ್ರಾಮೀಣ ಜನತೆಯ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಯಾವುದೇ ಆರೋಗ್ಯ ಸಂಬಂಧಿತ ಬೇಡಿಕೆಗಳಿಗೆ ಆಶಾ ಮೊದಲ ಕರೆ ಕೇಂದ್ರವಾಗಿದೆ. ಜನತೆಯ…

Read More

ಪ್ರವಾಹ ಪರಿಸ್ಥಿತಿಯಾಗದಂತೆ ಮುನ್ನಚ್ಚರಿಕೆ ಕ್ರಮ ವಹಿಸಿ : ಜಿಪಂ ಸಿಇಒ ರಿಷಿ ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 7: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಗುರುವಾರ ತಿಕೋಟಾ ಮತ್ತು ಬಬಲೇಶ್ವರ ತಾಲೂಕಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.ತಿಕೋಟಾ ಪಟ್ಟಣದ ಕೆ.ಜಿ.ಎಸ್ ಶಾಲೆಗೆ ಭೇಟಿ ನೀಡಿ, ಶಾಲೆಯ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿದ ಅವರು, ಶಿಥಿಲಾವಸ್ಥೆಗೊಂಡಿರುವ ಶಾಲಾ ಕೊಠಡಿಗಳಲ್ಲಿ ಮಕ್ಕಳಿಗೆ ಪಾಠ ಭೋಧನೆ ಮಾಡದೇ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಪಾಠ ಭೋಧನೆ ಮಾಡಲು ಉಸ್ತುವಾರಿ ಸಚಿವರ ನಿರ್ದೇಶನದಂತೆ ಕ್ರಮ ವಹಿಸಬೇಕು. ಶಾಲೆಯಲ್ಲಿನ ಕಂಪ್ಯೂಟರ್ ಗಳನ್ನು…

Read More