saptsagar_admin

ಜಿಲ್ಲಾಧಿಕಾರಿ ಡಾ.ಆನಂದ ವಿವಿಧೆಡೆ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ,ಆ. 7: ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ವಿಜಯಪುರ ನಗರದ ಶಿವಾಜಿ ಸರ್ಕಲ್ ಹತ್ತಿರ, ರಾಮನಗರ ರಸ್ತೆ, ನವಬಾಗ ರಸ್ತೆ, ಮನಗೂಳಿ ಅಗಸಿ, ಜುಮ್ಮಾ ಮಸೀದಿ, ಕಸ್ತೂರಿ ಕಾಲನಿ, ರೇಲ್ವೆ ಸ್ಟೇಶನ್ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗುರುವಾರ ಬೆಳಿಗ್ಗೆ ನಗರದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಗರದಾದ್ಯಂತ ಇರುವ ಕೋಟೆಗೋಡೆ ಆವರಣಗಳಲ್ಲಿ ಮಳೆ ನೀರು ನಿಲ್ಲದಂತೆ ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡಬೇಕು. ಮುಳ್ಳುಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತೆ…

Read More

ಡಿ.ದೇವರಾಜ ಅರಸು ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಯೋಜಿಸಲು ನಿರ್ಧಾರ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ.7 :ಹಿಂದುಳಿದ ವರ್ಗಗಳ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಆ.20ರಂದು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ದೇವರಾಜ್ ಅರಸು ಅವರ 110ನೇ ಜನ್ಮ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 9-30ಕ್ಕೆ ನಗರದ…

Read More

ಸಂಸದ ರಮೇಶ ಜಿಗಜಿಣಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲಕುಮಾರ್ ಶಿಂಧೆ ಜೊತೆಗೆ ಸೌಹಾರ್ದ ಭೇಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 7: ಕೇಂದ್ರದ ಮಾಜಿ ಸಚಿವ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ ಶಿಂಧೆ ಅವರನ್ನು ನವದೆಹಲಿ ನಿವಾಸದಲ್ಲಿ ಸಂಸದ ರಮೇಶ ಜಿಗಜಿಣಗಿ ಭೇಟಿ ಮಾಡಿ ಉಭಯಕುಶಲೋಪರಿ ವಿಚಾರಿಸಿದರು.ಸಂಸದ ಜಿಗಜಿಣಗಿ ಅವರು ಶಿಂಧೆ ಅವರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ನಡೆಸಿ ಸೌಹಾರ್ದಯುತ ಮಾತುಕತೆ ನಡೆಸಿದರು.

Read More

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಸಾವು

ಸಪ್ತಸಾಗರ ವಾರ್ತೆ ವಿಜಯಪುರ, ಆ. 7:ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿಗಳ ಮಧ್ಯೆ ಕಲಹ ಉಂಟಾಗಿ ಓರ್ವ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಅಸು ನೀಗಿದ ಘಟನೆ ನಗರ ಹೊರ ವಲಯದ ಯೋಗಾಪುರ ಗ್ರಾಮದಲ್ಲಿ ನಡೆದಿದೆ.ಶ್ರೀ ಸತ್ಯ ಸಾಯಿಬಾಬಾ ಶಾಲೆಯ ವಿದ್ಯಾರ್ಥಿ ಅನ್ಸ್ (11) ಮೃತಪಟ್ಟಿದ್ದಾನೆ. ಬಿಹಾರ ಮೂಲದ ಸುನೀಲ್ ಪುತ್ರ ಅನ್ಸ್5ನೇ ತರಗತಿಯಲ್ಲಿ ಓದುತ್ತಿದ್ದ. ಕೈಯಲ್ಲಿ ಕಟ್ಟುವ ವಾಚ್ ಗಾಗಿ ಬಾಲಕ ಅನ್ಸ್ ಈತನ ಮೇಲೆ 9ನೇ ತರಗತಿ ಬಾಲಕರು ಹಲ್ಲೆ ನಡೆಸಿದ್ದು, ಗಾಯಗೊಂಡಿದ್ದ ಅನ್ಸ್ ಈತನನ್ನು ಅವರ ಪೋಷಕರು…

Read More

ದೋಣಿ ನದಿ ಪ್ರವಾಹ: ಸಾತಿಹಾಳ ಸೇತುವೆ ಜಲಾವೃತ, ರಸ್ತೆ ಸಂಚಾರಕ್ಕೆ ವ್ಯತ್ಯಯ

ಸಪ್ತಸಾಗರ ವಾರ್ತೆ, ವಿಜಯಪುರ, ಆ. ಮಳೆ ಅಬ್ಬರ ಕಡಿಮೆಯಾದರೂ ದೋಣಿ ನದಿ ಪ್ರವಾಹ ಇನ್ನು ಇಳಿಕೆಯಾಗಿಲ್ಲ. ಹೆಚ್ಚಾದ ನೀರಿನ ಹರಿವಿನಿಂದ ದೇವರ ಹಿಪ್ಪರಗಿ ತಾಲೂಕಿನ ಸಾತಿಹಾಳ ಬಳಿ ಸೇತುವೆ ಜಲಾವೃತಗೊಂಡಿದೆ. ಇದರಿಂದ ರಸ್ತೆ ಸಂಚಾರಕ್ಕೆ ತೀವ್ರ ಅಡಚಣಿಯಾಗಿದೆ.ನಿನ್ನೆ ರಾತ್ರಿ ದೋಣಿ ನದಿ ಉಗಮ ಸ್ಥಾನದಲ್ಲಿ ಭಾರಿ ಪ್ರಮಾಣದ ಮಳೆ ಸುರಿದಿದ್ದರಿಂದ ದೇವರ ಹಿಪ್ಪರಗಿ ತಾಲೂಕಿನಲ್ಲಿ ಹರಿದಿರುವ ದೋಣಿ ನದಿಗೆಇಂದು ಮಳೆ ಕಡಿಮೆಯಾಗಿದ್ದರೂ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸಾತಿಹಾಳ ಗ್ರಾಮದ ಬಳಿಯ ಸೇತುವೆ…

Read More

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಸಪ್ತ ಸಾಗರ ವಾರ್ತೆ, ವಿಜಯಪುರ,ಆ.6: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ವಿದ್ಯಾರ್ಥಿಗಳು https://scholarships.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ತಾಯಿಯ ಹಾಲು ಅಮೃತಕ್ಕೆ ಸಮಾನ : ಡಾ.ಶಿವಾನಂದ ಮಾಸ್ತಿಹೊಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ.6: ತಾಯಿ ಎದೆಹಾಲು ಅಮೃತಕ್ಕೆ ಸಮಾನವಾಗಿದ್ದು ಸದೃಢ ಮಗುವಿನ ಆರೋಗ್ಯದ ದೃಷ್ಠಿಯಿಂದ ತಾಯಂದಿರು ನವಜಾತ ಶಿಶುಗಳಿಗೆ ಎದೆಹಾಲು ನೀಡುವಲ್ಲಿ ನಿರ್ಲಕ್ಷ್ಯ ಮಾಡಬಾರದು ಎಂದು ಜಿಲ್ಲಾ ಸರಕಾರಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಕಿವಿಮಾತು ಹೇಳಿದರು.ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗರ್ಭಿಣಿ ಹಾಗೂ…

Read More

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 6:ರೈತರಿಗೆ ರಸಗೊಬ್ಬರ ಪೂರೈಸುವಲ್ಲಿ ವಿಫಲವಾದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಬುಧವಾರ ನಗರದ ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ನಂತರ ಪ್ರತಿಭಟನೆ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿಒಂದೇ ಒಂದು ರೈತಪರ ಯೋಜನೆ ಜಾರಿಗೊಳಿಸದೆ ತಾತ್ಸಾರ ಧೋರಣೆ ತಾಳಿರುವ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ರೈತರಿಗೆ ಪೊಳ್ಳು ಭರವಸೆ ಕೊಟ್ಟ…

Read More

ವಿಜಯಪುರ ವಿಮಾನ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.6:ನಗರದ ಹೊರ ವಲಯದ ಬುರಣಾಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವಿಮಾನದ ನಿಲ್ದಾಣದ ಟರ್ಮಿನಲ್ ಕಟ್ಟಡ, ಎಟಿಸಿ ಕಟ್ಟಡ, ಏಪ್ರೋನ್, ಐಸೋಲೇಶನ್ ಬೇ, ರನ್‍ವೇ ಮಾರ್ಗ ಹಾಗೂ ಇತರೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಅವರು ಪರಿಶೀಲನೆ ನಡೆಸಿದರು.ವಿಮಾನದ ನಿಲ್ದಾಣದ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಬಾಕಿ ಇರುವ ಅಡೆತಡೆಗಳನ್ನು ನಿವಾರಿಸಿಕೊಂಡು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.ಈ…

Read More

ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ:ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 6: ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ, ಹಾನಿಗೊಳಗಾಗುವ ಗ್ರಾಮ, ಪ್ರದೇಶಗಳಿಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರೀಶಿಲನೆ ನಡೆಸಿ ಕೂಡಲೇ ನಿಯಮಾನುಸಾರ ಪರಿಹಾರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಸೂಚನೆ ನೀಡಿದ್ದಾರೆ.ಜಿಲ್ಲೆಯಲ್ಲಿ ಕಳೆದ ರಾತ್ರಿ ವಾಡಿಕೆಗಿಂತ ಹೆಚ್ಚಾಗಿ ಅಂದರೆ 47ಎಂಎಂ ಮಳೆಯಾಗಿದ್ದು, ಅಲ್ಲದೇ, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಂಭವವಿರುತ್ತದೆ. ಈ…

Read More