
ಯುಕೆಪಿ 3ನೇ ಹಂತದ ಅನುಷ್ಠಾನಕ್ಕೆ ಸಮರ್ಪಕ ಪರಿಹಾರ ನಿಗದಿ ಅನುಕೂಲ: ಸಚಿವ ಎಂ.ಬಿ. ಪಾಟೀಲ
ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ. 23:ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಸಂತ್ರಸ್ತರಿಗೆ ಸರಕಾರ ಒಪ್ಪಿಗೆ ಸೂತ್ರದಡಿ ಸಮರ್ಪಕ ಪರಿಹಾರ ಘೋಷಣೆ ಮಾಡಿದ್ದು, ಇದರಿಂದ ಆಲಮಟ್ಟಿ ಜಲಾಷಯದ ಎತ್ತರವನ್ನು ಹೆಚ್ಚಿಸಿ ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತೀತರ ಜಿಲ್ಲೆಗಳ ಬಾಕಿ ಭೂಮಿಗೆ ನೀರಾವರಿ ಕಲ್ಪಿಸಲು ಅನುಕೂಲವಾಗಲಿದೆ ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಸೋಮವಾರ ಮುಸ್ಸಂಜೆ ಬಬಲೇಶ್ವರ ತಾಲೂಕಿನ ದೇವರ ಗಣ್ಣೂರಿನಲ್ಲಿ ಕೃಷ್ಣ ಮೇಲ್ದಂಡೆ ಹಂತ-3ರ ಯೋಜನಾ ಸಂತ್ರಸ್ತರಿಗೆ…