saptsagar_admin

ಶಾಲಾ ಮಕ್ಕಳಿಗೆ ಒಣದ್ರಾಕ್ಷಿ ಯೋಜನೆ : ವಿಜಯಪುರ ಸಂಪುಟ ಸಭೆಯಲ್ಲಿ ಚರ್ಚೆ: ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 27 :ಶಾಲಾ ಮಕ್ಕಳಿಗೆ ಆರೋವರ್ಧಕವಾಗಿರುವ ಒಣದ್ರಾಕ್ಷಿ ವಿತರಣೆ ಕುರಿತು ವಿಜಯಪುರದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಜವಳಿ, ಕೃಷಿ ಮಾರುಕಟ್ಟೆ ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದ್ದಾರೆ.ಭಾನುವಾರ ನಗರದಲ್ಲಿ ಮಹಾರಾಷ್ಟ್ರದ ಪುಣೆಯ ರಾಷ್ಟ್ರೀಯ ದ್ರಾಕ್ಷಿ ಬೆಳೆಗಾರರ ಮಹಾಮಂಡಳ, ರಾಷ್ಟ್ರೀಯ ದ್ರಾಕ್ಷಿ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ದ್ರಾಕ್ಷಿ ಹಾಗೂ ಒಣದ್ರಾಕ್ಷಿ ಉತ್ಪಾದನೆಯಲ್ಲಿ ಇತ್ತೀಚಿನ ಬೆಳವಣಿಗೆಗಳ ಕುರಿತು ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಅವರು…

Read More

ಕೋರ್ಟ್ ಮೆಟ್ಟಿಲೇರಿ ಬಿ.ಎಂ. ಪಾಟೀಲರು ಜಿಲ್ಲೆಗೆ ಮೆಡಿಕಲ್ ಕಾಲೇಜ್ ತಂದಿದ್ದಾರೆ- ಖರ್ಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 27:ಬಿ.ಎಂ. ಪಾಟೀಲ್ ಅವರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ್ದಾರೆ. ಸಚಿವ ಎಂ.ಬಿ. ಪಾಟೀಲ್ ಅವರು ಬಿ ಎಲ್ ಡಿ ಇ ಅಧ್ಯಕ್ಷರಾದ ಬಳಿಕ ಹೊಸ ರೂಪ ನೀಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು.ಬಿಎಲ್ಡಿಇ ಸಂಸ್ಥೆ ಕಟ್ಟಿ ಬೆಳೆಸಿದ ಮಹನೀಯರಾದಬಂಥನಾಳ ಸಂಗನಬಸವ ಶ್ರೀಗಳು, ಡಾ ಫ ಗು ಹಳಕಟ್ಟಿ, ಬಂಗಾರಮ್ಮ ಸಜ್ಜನ ಹಾಗೂ ಬಿ ಎಂ ಪಾಟೀಲ್ ಅವರ ಸ್ಮರಣೆಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು.ಧಾರವಾಡದ…

Read More

ಬಿ. ಎಂ. ಪಾಟೀಲ ಫೌಂಡೇಶನ್ ಫಾರ್ ಇನೊವೆಷನ್ ಆ್ಯಂಡ್ ಇನಕ್ಯೂಬೇಶನ್ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 27:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಕ್ಯಾಂಪಸ್‌ ನಲ್ಲಿ ಬಿ. ಎಂ. ಪಾಟೀಲ ಫೌಂಡೇಶನ್ ಫಾರ್ ಇನೊವೆಷನ್ ಆ್ಯಂಡ್ ಇನಕ್ಯೂಬೇಶನ್ ನ್ನು ಬೆಂಗಳೂರು ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭಾವ ಚರಮೂರ್ತಿ ಶಿವರುದ್ರ ಮಹಾಸ್ವಾಮಿ ರವಿವಾರ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಮಾತನಾಡಿ, ಇದು ಹೊಸ ಆವಿಷ್ಕಾರ ಮತ್ತು ಸ್ಟಾರ್ಟ್‌ಅಪ್ ಎಕೋಸಿಸ್ಟಮ್‌ಗೆ ಮೊದಲ ಮೈಲಿಗಲ್ಲು ಆಗಿದೆ…

Read More

ಉಪರಾಷ್ಟ್ರಪತಿ ರಾಜೀನಾಮೆ ವಿವರ ಗೊತ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸಪ್ತಸಾಗರ ವಾರ್ತೆ ವಿಜಯಪುರ, ಜು.27ಉಪರಾಷ್ಟ್ರಪತಿ ಜಗದೀಪ ಧನಕರ್ ಅವರ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ. ವಿವರವನ್ನು ಅವರಿಗೆ ಕೇಳಿ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು.ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಧನಕರ್ ಅವರು ಯಾವಾಗಲೂ ಸರ್ಕಾರದ ಪರವಾಗಿಯೇ ಇರುತ್ತಿದ್ದರು. ರಾಜೀನಾಮೆ ನೀಡಿರುವ ಕಾರಣವನ್ನು ಅವರೇ ಹೇಳಬೇಕು ಎಂದರು.ರೈತರ ಸಮಸ್ಯೆಗಾಳಾಗಲಿ, ಬಡವರ ಸಮಸ್ಯೆಗಳಾಗಲಿ, ಅಂತರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಮಾತನಾಡಲು ನಮಗೆ ಅವರು ಅವಕಾಶ ನೀಡುತ್ತಿರಲಿಲ್ಲ.ಲೋಕಸಭೆಯಲ್ಲಿ ಬಡವರ ಸಮಸ್ಯೆಗಳ ಬಗ್ಗೆ…

Read More

ಬಿ.ಎಲ್. ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆ ಕಾರ್ಯಾರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 27:ನಗರದ ಬಿ.ಎಲ್.ಡಿ.ಇ.ಸಂಸ್ಥೆಯ ಎ.ವಿ.ಎಸ್.ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಆವರಣದಲ್ಲಿ‌ ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನವನ್ನು ಬೆಂಗಳೂರಿನ‌ ಶ್ರೀ ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಉದ್ಘಾಟಿಸಿದರು.ಬಿ.ಎಲ್.ಡಿ.ಇ. ಆಸ್ಪತ್ರೆಯ ನಗರ ಆರೋಗ್ಯ ಕೇಂದ್ರ ನೂತನ ವಿಸ್ತರಣೆ ಘಟಕ ಆರಂಭಿಸಿ ವಿಜಯಪುರ ನಗರದ ದಕ್ಷಿಣ ಭಾಗದ ಜನತೆಗೆ ಒಂದೇ ಸೂರಿನಡಿ ಆಯುರ್ವೇದ ಹಾಗೂ ಅಲೋಪಥಿ ಸೇವೆಗಳು ಇಲ್ಲಿ ಲಭ್ಯವಿದ್ದು, ಆಯುರ್ವೇದ ಮತ್ತು‌ ಅಲೋಪಥಿ‌‌ ಎರಡೂ ಸೇವೆಗಳು…

Read More

ಬಡಮಕ್ಕಳ ಅಕ್ಷರ ದಾಹ ನೀಗಿಸಿದ ಬಂಥನಾಳದ ಸಂಗನಬಸವ ಶಿವಯೋಗಿಗಳು-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 27:ಶೈಕ್ಷಣಿಕ ಕ್ರಾಂತಿಯ ಹರಿಕಾರ, ಅಕ್ಷರ ದಾಸೋಹಿ ಬಂಥನಾಳದ ಲಿಂ.ಸಂಗನಬಸವ ಶ್ರೀಗಳು ಎರಡನೇ ಬಸವಣ್ಣನಂತಿದ್ದರು. ದೇಹದ ಆರೋಗ್ಯಕ್ಕಿಂತ ಸಮಾಜದ ಆರೋಗ್ಯವೇ ಮುಖ್ಯ ಎಂದರಿತ ಶ್ರೀಗಳ ಜೀವನವೇ ನಮ್ಮ ಬದುಕಿಗೆ ದಾರಿದೀಪ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ರವಿವಾರ ತಾಲೂಕಿನ ನಾಗಠಾಣ ಗ್ರಾಮದ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡ ‘ಸಂತ ಸಂಗನಬಸವ ಶಿವಯೋಗಿಗಳ 125 ನೇ ಜಯಂತ್ಯೋತ್ಸವ’ಕ್ಕೆ ಚಾಲನೆ ನೀಡಿ ಮಾತನಾಡಿದರು.ವಿದ್ಯಾರ್ಥಿಗಳೇ ದೇವರು, ವಿದ್ಯಾಲಯವೇ ದೇವಾಲಯ ಎಂಬ ಮಂತ್ರದೊಂದಿಗೆ ಭಕ್ತರು ಕೊಟ್ಟ ಕಾಣಿಕೆಯಲ್ಲೇ ಬಡ…

Read More

ವಿಜಯಪುರ ಸೈನಿಕ ಶಾಲೆಯಲ್ಲಿಕಾರ್ಗಿಲ್ ವಿಜಯ ದಿವಸ ಆಚರಣೆ

ಸಪ್ತಸಾಗರ ವಾರ್ತೆ ವಿಜಯಪುರ, ಜು. 26:ಕಾರ್ಗಿಲ್ ವಿಜಯ ದಿವಸದ 26 ನೇ ವಾರ್ಷಿಕೋತ್ಸವವನ್ನು ನಗರದ ಸೈನಿಕ ಶಾಲೆ ಆವರಣದಲ್ಲಿ ಶನಿವಾರ ಆಚರಿಸಲಾಯಿತು.ಇಂದು ನಮ್ಮ ದೇಶಭಕ್ತಿಯನ್ನು ಪ್ರದರ್ಶಿಸುವ ಮತ್ತು ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಯೋಧರನ್ನು ಸ್ಮರಿಸುವ ದಿನವಾಗಿದೆ. 1999 ರ ಕಾರ್ಗಿಲ್ ಯುದ್ಧದ ಸಮಯದಲ್ಲಿ ದೇಶಕ್ಕಾಗಿ ಜೀವ ತ್ಯಾಗ ಮಾಡಿದ ಭಾರತೀಯ ಸೈನಿಕರ ಶೌರ್ಯಕ್ಕೆ ಗೌರವ ಸಲ್ಲಿಸಲು ಪ್ರತಿ ವರ್ಷ ಜುಲೈ 26 ರಂದು ‘ಕಾರ್ಗಿಲ್ ವಿಜಯ ದಿವಸ್’ ವನ್ನು ಆಚರಿಸಲಾಗುತ್ತದೆ. ಈ ಘಟನೆಯು ಭಾರತ ಮತ್ತು ಪಾಕಿಸ್ತಾನದ…

Read More

ಗ್ಯಾರಂಟಿಗಳಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿ.ಎಂ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಅರಸೀಕೆರೆ, ಜು.26:ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ನುಡಿದರುಕ್ಷೇತ್ರದ ಜನಪರ ಅಭಿವೃದ್ಧಿ ಕೆಲಸ ಮಾಡುವುದರಲ್ಲಿ, ಸದನದಲ್ಲಿ ಕ್ಷೇತ್ರದ ಬಗ್ಗೆ ಧ್ವನಿ ಎತ್ತುವುದರಲ್ಲ ಶಾಸಕ ಶಿವಲಿಂಗೇಗೌಡರು ಮುಂದಿದ್ದಾರೆ. ನಾಲ್ಕು ಬಾರಿ ಚುನಾವಣೆಯಲ್ಲಿ ಗೆದ್ದಿರುವ ಅವರು ಮುಂದಿನ ಚುನಾವಣೆಯಲ್ಲೂ ಗೆಲ್ಲುವುದು ಶತಸಿದ್ಧ ಎಂದು…

Read More

ನಾಳೆ ಬಿ.ಎಲ್.ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆ ಉದ್ಘಾಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 26:ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ ಜು. 27 ರಂದು ನಗರದಲ್ಲಿ ನಡೆಯಲಿದೆ.ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್.ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಶ್ರೀ ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಜಿ ಉದ್ಘಾಟನೆ ನೆರವೇರಿಸಲಿದ್ದಾರೆ.ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ…

Read More

ಫೋಟೋಗ್ರಾಫರ್ಸ್ ಅಕಾಡೆಮಿ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ: ಸಚಿವ ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 26:ಛಾಯಾಗ್ರಾಹಕರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿದೆ ಎಂದು ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ಼್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ‌ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ‌ ತಂತ್ರಜ್ಞಾನ‌ ಯುಗದಲ್ಲಿ ಛಾಯಾಗ್ರಾಹಕರಿಗೂ ಅನೇಕ‌ ಸವಾಲುಗಳಿದ್ದು, ಆರ್ಟಿಫಿಶಿಯಲ್ ಇಂಟಲಿಜನ್ಸ್ ಮತ್ತು ಡಿಜಿಟಲ್ ತಂತ್ರಜ್ಞಾನಕ್ಕೆ ಬದಲಾವಣೆಗೆ ತಕ್ಕಂತೆ ವೃತ್ತಿಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು. ಹಿಂದಿನ ದಿನಗಳಲ್ಲಿ ನಮ್ಮ ಹಿರಿಯ ಛಾಯಾಗ್ರಾಹಕರಿಗೆ…

Read More