saptsagar_admin

ಗ್ರಾಮೀಣ ಭಾಗದಲ್ಲಿ ನೀರಾವರಿ ಜೊತೆಗೆ ಗುಣಮಟ್ಟದ ವಿದ್ಯುತ್ ಹಾಗೂ ಶಿಕ್ಷಣ ಒದಗಿಸಲು ಬದ್ಧ: ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 19:ಗ್ರಾಮೀಣ ಭಾಗದಲ್ಲಿ ನೀರಾವರಿ ಜೊತೆಗೆ ಗುಣಮಟ್ಟದ ವಿದ್ಯುತ್ ಹಾಗೂ ಶಿಕ್ಷಣ ಒದಗಿಸಲು ಕಾರ್ಯೋನ್ಮುಖನಾಗಿದ್ದೇನೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿಯಲ್ಲಿ ಚಂದ್ರಗಿರಿ ಸಿದ್ರಾಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ನೂರಾರು ವರ್ಷಗಳ ಇತಿಹಾಸ ಹೊಂದಿರುವ ಈ ಜಾತ್ರೆಗೆ ನಮ್ಮ ತಂದೆಯವರ ಕಾಲದಿಂದಲೂ ಬರುತ್ತಿದ್ದೇವೆ. ದೇವರು, ಶ್ರೀಗಳು ಮತ್ತು ಗ್ರಾಮಸ್ಥರ ಆಶೀರ್ವಾದದಿಂದ ಜಲಸಂಪನ್ಮೂಲ‌ ಸಚಿವನಾಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ…

Read More

ಯುಕೆಪಿ ಸಂತ್ರಸ್ತರ ನೆರವಿಗೆ ಲೋಕ ಅದಾಲತ್

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19: ಕೃಷ್ಣ ಮೇಲ್ದಂಡೆ ಯೋಜನೆ ಭೂ ಸ್ವಾಧೀನಕ್ಕೆ ಒಳಪಡುವ ಸಂತ್ರಸ್ತರಿಗೆ ನೆರವಾಗಲು ಏಪ್ರಿಲ್ ನಿಂದ ಜುಲೈ 2026ರ ವರೆಗೆ ಲೋಕ ಅದಾಲತ್ ನಡೆದಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಕಾನೂನು‌ ಸೇವಾ ಪ್ರಾಧಿಕಾರ ಈ ಲೋಕ ಅದಾಲತ ಆಯೋಜಿಸಿದೆ. ಭೂಸ್ವಾಧೀನ ಪ್ರಕ್ರಿಯೆ ಪ್ರಶ್ನಿಸಿ ಮತ್ತು ಹೆಚ್ಚಿನ ಪರಿಹಾರಕ್ಕಾಗಿ ನ್ಯಾಯಾಲಯದ…

Read More

ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ ,ಬೆಂಗಳೂರು, ಏ.18:ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಸಾಂವಿಧಾನಿಕ ತಿದ್ದುಪಡಿ ತಂದಿದ್ದರಿಂದ ಅದು ವಿಫಲವಾಯಿತು. ಕ್ಷೇತ್ರ ಮಾರುವಿಂಗಡನೆ ಮಾಡದೆಯೇ ಮಹಿಳಾ ಮೀಸಲಾತಿ ಒಂದೇ ಮಂಡನೆಯಾಗಿದ್ದರೆ ಅಂಗೀಕಾರವಾಗುತ್ತಿತು. ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ ಎಂದರು. ಕೇಂದ್ರ ಸರ್ಕಾರ ಇದರಲ್ಲಿ ರಾಜಕೀಯ ಮಾಡಿದ್ದಾರೆ ಎಂದರು. ಕೆ….

Read More

ಸುಸೂತ್ರ ಪರೀಕ್ಷೆ ನಡೆಸಲು ಎಡಿಸಿ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 18: 2026ನೇ ಸಾಲಿನ ಸಿಇಟಿ ಪ್ರವೇಶ ಪರೀಕ್ಷೆಗಳು ಏ. 22 ರಿಂದ 24 ರವರೆಗೆ ಜಿಲ್ಲೆಯ 30 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ಸಿಇಟಿ ಪರೀಕ್ಷೆಗೆ ಸಂಬಂಧಿಸಿದ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪರೀಕ್ಷೆಯು ಎರಡು ಅವಧಿಯಲ್ಲಿ ನಡೆಯಲಿದ್ದು, ಜಿಲ್ಲೆಯ ಒಟ್ಟು 30 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು,13,359 ಅಭ್ಯರ್ಥಿಗಳು ಪರೀಕ್ಷೆಗೆ…

Read More

ನನ್ನ ಹಾಗೂ ಜಮೀರ್ ಮಧ್ಯೆ ಯಾವ ಗಲಾಟೆ ನಡೆದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಸಪ್ತಸಾಗರ ವಾರ್ತೆ ನವದೆಹಲಿ, ಏ.17: “ನನ್ನ ಹಾಗೂ ಜಮೀರ್ ಮಧ್ಯೆ ಯಾವ ಗಲಾಟೆ ನಡೆದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದರು.ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.ಸಚಿವ ಜಮೀರ್ ಅಹ್ಮದ್ ಅವರು ರಾಜೀನಾಮೆ ನೀಡುತ್ತಾರೆ ಎಂಬ ವದಂತಿ ಹರಿದಾಡುತ್ತಿದೆ, ಸಚಿವ ಸಂಪುಟ ಸಭೆಯಲ್ಲಿ ನಿಮ್ಮ ಮಧ್ಯೆ ಗಲಾಟೆ ನಡೆದಿದೆಯೇ ಎಂದು ಕೇಳಿದಾಗ, “ಈ ವಿಚಾರವಾಗಿ ಪತ್ರಿಕೆಗಳಲ್ಲಿ ಬರೆಯಲಾಗಿದೆ. ಅದು ಸುಳ್ಳು. ಪಾಪ, ಜಮೀರ್ ನನ್ನ ಜತೆ ಮಾತನಾಡಿಲ್ಲ,…

Read More

ಜಿಲ್ಲಾಧಿಕಾರಿ ಕಚೇರಿ ಎಸ್. ಡಿ. ಎ., ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 17:ಜಿಲ್ಲಾಧಿಕಾರಿ ಕಚೇರಿ ಎಸ್. ಡಿ. ಎ., ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಇಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪೆಟ್ರೋಲ್ ಬಂಕ್ ಜಾಗದ ನಕಾಶೆ ಆನ್ ಲೈನ್ ನಲ್ಲಿ ಅಪ್ಲೋಡ್ ಮಾಡಲು ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾಡಳಿತ ಕಚೇರಿಯಎಸ್ ಡಿ ಎ ಅರವಿಂದ ಪವಾರಗುತ್ತಿಗೆ ಆಧಾರದಲ್ಲಿ ಸೇವೆ ಮಾಡುವಕಂಪ್ಯೂಟರ್ ಆಪರೇಟರ್ಅಯ್ಯಬ್ ತೊನಶ್ಯಾಳ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.15,000 ನಗದು ಸ್ವೀಕಾರ ಮಾಡುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಎಸ್ ಡಿ ಎ…

Read More

19ರಂದು ಬಸವಜ್ಯೋತಿ ಪಾದಯಾತ್ರೆ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 17:ಸಮಾನತೆಯ ಹರಿಕಾರ, ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸಣ್ಣನವರ ಜಯಂತಿ ನಿಮಿತ್ತ ಜನ್ಮಸ್ಥಳ ಬಾಗೇವಾಡಿಯಿಂದ ವಿಜಯಪುರದವರೆಗೆ ವಿಜಯಪುರ ಸೈಕ್ಲಿಂಗ್ ಗ್ರುಪ್ ಸಹಯೋಗದಲ್ಲಿ ಬಸವಜ್ಯೋತಿ ಪಾದಯಾತ್ರೆ ದಿ.19 ರವಿವಾರ ರಾ.7ಗಂ. ಆರಂಭಿಸಲಾಗುವುದು ಎಂದು ಆಯೋಜಕ ಬಿ.ಬಿ.ಪಾಟೀಲ ತಿಳಿಸಿದರು.ವಿಜಯಪುರದಲ್ಲಿ ಬಸವಜ್ಯೋತಿ ಪಾದಯಾತ್ರೆ ನಿಮಿತ್ತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ವಿಶಿಷ್ಟ ರೀತಿಯಲ್ಲಿ ಬಸವ ಜಯಂತಿ ಆಚರಿಸಲಾಗುವುದು. ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ ಪಾದಯಾತ್ರಿಗಳು ಸಂ.6ಗಂ. ಹಾಜರಿರುವುದು. ಸಂ.6.30ಗಂ. ಪೂಜೆ ಸಲ್ಲಿಸಿದ ನಂತರ ರಾ.7ಗಂ….

Read More

ಬಿ. ಟಿ. ಚವ್ಹಾಣ ನಿಧನ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 17: ನಿವೃತ್ತ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ. ಟಿ. ಚವ್ಹಾಣ(74) ಗುರುವಾರ ರಾತ್ರಿ ನಿಧನರಾಗಿದ್ದಾರೆ.ವಿಜಯಪುರ ನಗರದ ಚಾಲುಕ್ಯ ನಗರದ ನಿವಾಸಿಯಾಗಿದ್ದ ಅವರು, ಪಿ.ಎಸ್.ಐ, ಸಿಪಿಐ, ಡಿವೈಎಸ್ಪಿ ಸೇರಿದಂತೆ ಹೆಚ್ಚುವರಿ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು. ಬೆಂಗಳೂರು, ಹುಬ್ಬಳ್ಳಿ, ರೋಣ, ಅಥಣಿ, ಹೊಸಪೇಟೆ, ಬಾದಾಮಿ, ವಿಜಯಪುರ ನಗರ, ಗದಗ, ಮೈಸೂರು, ಹಾಸನ ಹಾಗೂ ದಾವಣಗೆರೆಯಲ್ಲಿ ಸೇವೆ ಸಲ್ಲಿಸಿದ್ದ ಅವರು, ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-…

Read More

ಡಾ.ರಾಜಕುಮಾರ್ ಜನ್ಮದಿನಾಚರಣೆ ಪೂರ್ವಭಾವಿ ಸಭೆ

ಸಪ್ತಸಾಗರ ವಾರ್ತೆ,ವಿಜಯಪುರ,ಏ.17:ಡಾ. ರಾಜ್‌ಕುಮಾರ್ ಅವರ ಜನ್ಮದಿನಾಚರಣೆಯನ್ನು ಏಪ್ರಿಲ್ 24ರಂದು ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ದತಾ ಸಭೆಯನ್ನು ಅಪರ ಜಿಲ್ಲಾಧಿಕಾರಿಗಳು,ವಿಜಯಪುರ ಇವರ ಅಧ್ಯಕ್ಷತೆಯಲ್ಲಿ ಏ.18ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.ಈ ಸಭೆಗೆ ಅಧಿಕಾರಿಗಳು, ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಆಗಮಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ‌ ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏಪ್ರಿಲ್ 18 ರಂದು ವಿಶೇಷ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ಬೆಂಗಳೂರು, ಏ. 17:ಭ್ರಷ್ಟಾಚಾರ ನಿರ್ಮೂಲನೆ ಮತ್ತು ಆಡಳಿತ ಸುಧಾರಣೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ‘ಕರ್ನಾಟಕ ಲೋಕಾಯುಕ್ತ’ ಸಂಸ್ಥೆಯು ತನ್ನ ಯಶಸ್ವಿ ನಾಲ್ಕು ದಶಕಗಳ ಪಯಣವನ್ನು ಪೂರೈಸಿದ್ದು, ಈ ಅಂಗವಾಗಿ 2026ರ ಏಪ್ರಿಲ್ 18, ಶನಿವಾರದಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟನೆ ನೆರವೇರಿಸಲಿದ್ದಾರೆ. ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ….

Read More