
ಬೂದಿಹಾಳ- ಪೀರಾಪುರ ಯೋಜನೆ ಕಾಮಗಾರಿಗೆ ಆಗ್ರಹಿಸಿ ಕೈಗೊಂಡ ರೈತರ ಧರಣಿ ಅಂತ್ಯ
ಸಪ್ತಸಾಗರ ವಾರ್ತೆ ವಿಜಯಪುರ, ಜು. 20:ಬೂದಿಹಾಳ – ಪೀರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಬಿ. ಪಾಟೀಲ ಭರವಸೆ ನೀಡಿದ ಹಿನ್ನೆಲೆಯಲ್ಲಿ ತಾಳಿಕೋಟೆ ತಾಲೂಕಿನ ಕೊಡಗಾನೂರ ಬಳಿ ರೈತರು ಕಳೆದ 9 ದಿನಗಳಿಂದ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಅಂತ್ಯಗೊಂಡಿದೆ.ರವಿವಾರ ಸಚಿವರು ಕೊಡಗಾನೂರಿನ ಬಳಿ ಧರಣಿ ನಿರತ ರೈತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಈ ಸಂದರ್ಭ ಕೆ.ಬಿ.ಜೆ.ಎನ್.ಎಲ್…