saptsagar_admin

ಉದ್ಯೋಗ ಸೃಷ್ಟಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು- ಸಚಿವ ಎಂ.ಬಿ.ಪಾಟೀಲ್

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ. ಈ ಕ್ಷೇತ್ರದ ಬೇಡಿಕೆಗಳಿಗೆ ಸ್ಪಂದಿಸಲು ಸಣ್ಣ ಕೈಗಾರಿಕೆ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ನಗರದ ಆಲಕುಂಟೆ ನಗರರದ ರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ, ವಿಜಯಪುರ ಜಿಲ್ಲಾ ಮಂಟಪ,…

Read More

ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ-ಸುರೇಶಗೌಡ ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಇಂದಿನ ಮಕ್ಕಳೇ ಮುಂದಿನ ನಾಯಕರು.ಮಕ್ಕಳು ಸಹ ದೇಶದ ಪ್ರಜೆಗಳಾಗಿರುವುದರಿಂದ ಶಾಲಾ ಕಲಿಕೆಯ ಜತೆಗೆ ಮಕ್ಕಳ ಸಂಸತ್ತಿನ ಮೂಲಕ ಪ್ರಜಾಪ್ರಭುತ್ವದ ಮೂಲಾಂಶಗಳನ್ನು ಬೆಳೆಸಿ, ದೇಶಕ್ಕೆ ಉತ್ತಮ ನಾಗರಿಕರನ್ನು ಕಾಣಿಕೆಯಾಗಿ ನೀಡಲು ಸಾಧ್ಯ ಎಂದು ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ ಹೇಳಿದರು.ಶುಕ್ರವಾರ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ಶಾಲಾ ಸಂಸತ್ತು-ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳ ಸಂಸತ್-ಮಕ್ಕಳ ಪ್ರಾತಿನಿಧಿಕ ರಚನೆಯಾಗಿದ್ದು,…

Read More

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ ಸಿದ್ಧರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಜುಲೈ 18: ಬಿಜೆಪಿಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು…

Read More

ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ- ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಜು.17:ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ, ಕೌಟುಂಬಿ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005, ನಿಯಮ 2006 ಹಾಗೂ ಪೋಕ್ಸೋ ಕಾಯ್ದೆಯ ಪರಿಶೀಲನಾ ಸಭೆಯ ಅಧ್ಯಕತೆ ವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆ,…

Read More

ಸಾಹಿತಿ ಭಜಂತ್ರಿಯವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 17: ಸಾಹಿತಿ ದೊಡ್ಡಣ್ಣ ಭಜಂತ್ರಿ ಅವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ನಗರದ ಶ್ರೀ ಏಳು ಮಕ್ಕಳ ತಾಯಿ ಜಾತ್ರಾ ಮಹೋತ್ಸವ ಸಮಿತಿಯು ದೊಡ್ಡಣ್ಣ ಅವರು ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ ಮಾಡಿ ಸತ್ಕರಿಸಲಾಯಿತು.ಯುವ ಧುರೀಣ ರಾಮನಗೌಡ ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.

Read More

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 17:ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್‌ ಫ್ಯಾಶನ್‌ ಟೆಕ್ನಾಲಜಿ (ಎನ್.ಐ.ಎಫ್.ಟಿ) ಸಂಸ್ಥೆಯ ವಿದ್ಯಾರ್ಥಿಗಳು ಕ್ಷೇತ್ರಾಧ್ಯಯನಕ್ಕಾಗಿ ಆಗಮಿಸಿದ್ದಾರೆ. ಇದರ ಜೊತೆಗೆ ದೇಶದ ನಾನಾ ಭಾಗಗಳು ವಸ್ತ್ರ ವಿನ್ಯಾಸ ಸಂಸ್ಥೆಗಳು ಕೂಡ ಈ ಬಗ್ಗೆ ಆಸಕ್ತಿ ತೋರಿಸಿ, ಸಂಪರ್ಕಿಸುತ್ತಿವೆ ಎಂದು ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ ಪಾಟೀಲ ತಿಳಿಸಿದ್ದಾರೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ʻವಿಜಯಪುರ ಜಿಲ್ಲೆಯಲ್ಲಿ ಮೊದಲಿನಿಂದಲೂ ಲಂಬಾಣಿ ಕಲೆ, ಕಸೂತಿ ಇತ್ಯಾದಿಗಳು ಬೇರೂರಿಕೊಂಡು ಬಂದಿದ್ದವು. ಈ…

Read More

ಸುಶೀಲ್ ಕಾಳೆ ಕೊಲೆ ಪ್ರಕರಣ: ಮತ್ತೆ ನಾಲ್ವರು ಆರೋಪಿತರ ಬಂಧನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಸುಶೀಲ್ ಕಾಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿತರನ್ನು ಬಂಧಿಸಲಾಗಿದೆ.ವಿಜಯಪುರದ ಭರತ್ ನಗರದ ಗೌತಮ ಹನಮಂತ ಆಲಮೇಲ್‌ಕರ (25),ದೇಗಿನಾಳ ಗ್ರಾಮದ ನಾರಾಯಣ ಗಣಪತಿ ಜಾಧವ (20), ಕೊಲ್ಹಾರ ತಾಲೂಕಿನ ಹನುಮಾಪುರ ಗ್ರಾಮದ ಬಸವರಾಜ ಮುನ್ನಾಳ( 20) ಹಾಗೂ ಬಾಗಲಕೋಟೆ ನವನಗರದ ಪ್ರಜ್ವಲ ಶರಣಪ್ಪ ಹಳಿಮನಿ (ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ) ಬಂಧಿತ ಆರೋಪಿತರು.ನಿನ್ನೆಯಷ್ಟೇ ಹಿಟ್ನಳ್ಳಿಯ ಹಾಲಿವಸ್ತಿ ಸಾಯಿ ಪಾರ್ಕ್ ನಿವಾಸಿ ವಿಠೋಬಾ ಕಲ್ಲವ್ವಗೋಳ (29), ಕೊಲ್ಹಾರ ತಾಲೂಕಿನ ನಾಗರದಿನ್ನಿ ಗ್ರಾಮದ…

Read More

ಸಿಎಂ ಸಿದ್ದರಾಮಯ್ಯ ರಾಜ್ಯವನ್ನು ಸಾಲದ ಸುಳಿಗೆ ನೂಕಿದ್ದಾರೆ- ಯತ್ನಾಳ್ ಕಿಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 16: ಸಾರಿಗೆ ಸಂಸ್ಥೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಬೇಕಾಗಿದ್ದ ಸರ್ಕಾರವು ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕೆ ನಷ್ಟಕ್ಕೆ ನೂಕಿದೆ. ಭವಿಷ್ಯ ನಿಧಿ (ಪಿ.ಎಫ್) ಪಾವತಿ ಮಾಡುವುದಕ್ಕೂ ಹಣವಿಲ್ಲದೆ ಈಗ ಅದಕ್ಕೂ ಸಾಲ ಮಾಡಲು ನಿರ್ಧರಿಸಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.ಎರಡು ದಿನಗಳ ಹಿಂದೆಯಷ್ಟೇ ‘ಶಕ್ತಿ’ ಯೋಜನೆಯ ಬಗ್ಗೆ ಸರ್ಕಾರ ಎಲ್ಲಾ ಪತ್ರಿಕೆಗಳಲ್ಲಿ, ಜಾಲತಾಣಗಳಲ್ಲಿ ಯೋಜನೆಯ ಯಶಸ್ಸಿನ ಬಗ್ಗೆ ಜಾಹೀರಾತು ನೀಡಿತ್ತು. ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ…

Read More

ಸಿದ್ಧರಾಮಯ್ಯ ರಾಜ್ಯದ ಚುಕ್ಕಾಣಿಯನ್ನು ರಣದೀಪ್ ಸುರ್ಜೇವಾಲ ಕೈಯಲ್ಲಿ ಕೊಟ್ಟಿದ್ದಾರೆ- ನಿಖಿಲ್ ಕಿಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.16: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೂ ರಾಜ್ಯದ ಚುಕ್ಕಾಣಿಯನ್ನು ರಣದೀಪ್ ಸುರ್ಜೇವಾಲ ಅವರ ಕೈಯಲ್ಲಿ ಕೊಟ್ಟಿದ್ದಾರೆ. ಸೂಪರ್ ಸಿಎಂ ಸುರ್ಜೇವಾಲಾ ಆಗಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಟೀಕಿಸಿದರು.ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಜನರೊಂದಿಗೆ ಜನತಾದಳ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ವಿಜಯಪುರ ಜಿಲ್ಲೆಗೆ ₹ 4557 ಕೋಟಿ ಅನುದಾನ ಘೋಷಣೆ. ಇದು ಪ್ರಚಾರಕ್ಕೆ ಮಾತ್ರ ಸೀಮಿತವಾಗಿ ಎಂದು ನಿಖಿಲ್ ಕಾಂಗ್ರೆಸ್ ನಾಯಕರ ವಿರುದ್ಧ…

Read More